ವಿಷ್ಣು ಸಹಸ್ರನಾಮ ಭವನದಲ್ಲಿ ಅಷ್ಟಮ ನವರಾತ್ರಿ ಮಹೋತ್ಸವ ಆರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಅ.11:ನಗರದ ತೊರವಿ ರಸ್ತೆಯ ನಿಂಬರಗಿ ಬಡಾವಣೆಯಲ್ಲಿರುವ ಶ್ರೀ ವಿಷ್ಣು ಸಹಸ್ರನಾಮ ಭವನದಲ್ಲಿ ಶ್ರೀ ವೆಂಕಟೇಶ್ವರ ದೇವರ ಅಷ್ಟಮ ನವರಾತ್ರಿ ಮಹೋತ್ಸವವು ಶ್ರದ್ಧಾ-ಭಕ್ತಿಯಿಂದ ಆರಂಭಗೊಂಡಿತು.ಉತ್ತರಾಧಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರ ನೇತೃತ್ವದಲ್ಲಿ ಪ್ರತಿಷ್ಠಾಪಿಸಲಾದ ನೇಪಾಳದ ಗಂಡಕಿ ನದಿಯ ಸಾಲಿಗ್ರಾಮದಿಂದ ನಿರ್ಮಿಸಲಾದ ಸುಮಾರು 6 ಅಡಿ ಎತ್ತರದ ಶ್ರೀ ವೆಂಕಟೇಶ್ವರ ದೇವರ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.ಶ್ರೀ ವ್ಯಾಸಮಧ್ವ ಸಂಸ್ಕೃತ ವಿದ್ಯಾಲಯ ಟ್ರಸ್ಟ್‌ ಕುಟುಂಬದ ನೇತೃತ್ವದಲ್ಲಿ ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಪ್ರತಿದಿನ…

Read More

ಕ್ರೀಡಾಕೂಟ: ಕಳ್ಳಕವಟಗಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ

ಸಪ್ತಸಾಗರ ವಾರ್ತೆ,ತಿಕೋಟಾ, ಅ. 11: ವಿಜಯಪುರ ಗ್ರಾಮೀಣ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟ ಅರಕೇರಿಯ ಜ್ಞಾನಜ್ಯೋತಿ ವಸತಿ ಶಾಲೆಯಲ್ಲಿ ನಡೆಯಿತು.ಕಳ್ಳಕವಟಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.14 ವರ್ಷದೊಳಗಿನ ಬಾಲಕರ ವಾಲಿಬಾಲ್‌ನಲ್ಲಿ ವಿಷ್ಣು ರಾಠೋಡ್, ಆದಿತ್ಯ ರಾಠೋಡ್, ದರ್ಶನ್ ರಾಠೋಡ್, ಸಾಯಿನಾಥ ರಾಠೋಡ್, ಕುಮಾರ್ ರಾಠೋಡ್ ಹಾಗೂ ದಿನೇಶ ಪವಾರ ಅವರು ಉತ್ತಮ ಪ್ರದರ್ಶನ ನೀಡಿ ತಾಲ್ಲೂಕು ಮಟ್ಟದಲ್ಲಿ ಜಯಗಳಿಸಿ ಜಿಲ್ಲಾಮಟ್ಟಕ್ಕೆ ಅರ್ಹತೆ…

Read More

ದಿನಗೂಲಿ ನೌಕರರಿಗೆ ಸೌಲಭ್ಯ ಕಲ್ಪಿಸಲು ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 11: ಹೈಕೋರ್ಟ್ ಆದೇಶದಂತೆ 1996ಕ್ಕಿಂತ ಮೊದಲು ನೇಮಕಗೊಂಡ ದಿನಗೂಲಿ ಕ್ಷೇಮಾಭಿವೃದ್ಧಿ ನೌಕರರಿಗೆ ಡಿ.ಎ., ಎಚ್.ಆರ್.ಎ., ಎಕ್ಸ್‌ಗ್ರೇಷಿಯಾ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ತಕ್ಷಣ ಕಲ್ಪಿಸಬೇಕು. ಅಲ್ಲದೆ, ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಸಂಜಯ ಜೋಶಿ ಆಗ್ರಹಿಸಿದರು.ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿನಗೂಲಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಳಂಬ ಮಾಡಬಾರದು. ಇಲ್ಲವಾದರೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವ ಅನಿವಾರ್ಯತೆ ಎದುರಾಗಲಿದೆ ಎಂದು…

Read More

ಜಯಪ್ರಕಾಶ ನಾರಾಯಣರ ಆದರ್ಶಗಳು ಇಂದಿಗೂ ಪ್ರಸ್ತುತ

ಜೆಡಿಎಸ್ ಕಚೇರಿಯಲ್ಲಿ ಲೋಕನಾಯಕನ 124ನೇ ಜಯಂತಿ ಆಚರಣೆ ಸಪ್ತಸಾಗರ ವಾರ್ತೆ,ವಿಜಯಪುರ, ಅ. 11:ಅನ್ಯಾಯ, ಭ್ರಷ್ಟಾಚಾರ ಹಾಗೂ ಶೋಷಣೆಯ ವಿರುದ್ಧ ನಿರಂತರ ಹೋರಾಡಿದ ಲೋಕನಾಯಕ ಜಯಪ್ರಕಾಶ ನಾರಾಯಣ ಅವರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ರೈತ ನಾಯಕ ಪಂಚಪ್ಪ ಕಲಬುರಗಿ ಹೇಳಿದರು.ನಗರದ ಜನತಾದಳ (ಜಾತ್ಯತೀತ) ಪಕ್ಷದ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಜಯಪ್ರಕಾಶ ನಾರಾಯಣ ಅವರ 124ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೆ.ಪಿ. ಅವರು ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಮಹತ್ವದ ಪಾತ್ರ ವಹಿಸಿದ ಮಹಾನ್ ಜನನಾಯಕ ಹಾಗೂ ದೇಶಪ್ರೇಮಿಯಾಗಿದ್ದರು…

Read More

371(ಜೆ) ವ್ಯಾಪ್ತಿಗೆ ವಿಜಯಪುರ ಸೇರ್ಪಡೆಗೆ ಆಗ್ರಹ

ಲೋಣಿ ಅವರಿಗೆ 371(ಜೆ) ಹೋರಾಟ ಸಮಿತಿಯಿಂದ ಮನವಿ ಸಪ್ತಸಾಗರ ವಾರ್ತೆ,ವಿಜಯಪುರ, ಅ. 10:ಸಂವಿಧಾನದ 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ದೊರೆಯುತ್ತಿರುವ ವಿಶೇಷ ಸೌಲಭ್ಯಗಳಿಂದ ವಿಜಯಪುರ ಜಿಲ್ಲೆಯನ್ನು ಹೊರಗಿಟ್ಟಿರುವುದನ್ನು ಸರಿಪಡಿಸಿ, ಜಿಲ್ಲೆಯನ್ನು 371(ಜೆ) ಮೀಸಲಾತಿ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕು ಎಂದು ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿ ಆಗ್ರಹಿಸಿದೆ.ಈ ಕುರಿತು ಹೋರಾಟ ಸಮಿತಿ ಮುಖಂಡರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.371(ಜೆ) ಮೀಸಲಾತಿ ಜಾರಿಗೊಳಿಸುವ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯನ್ನು ಕೈಬಿಟ್ಟಿರುವುದರಿಂದ ಜಿಲ್ಲೆಯ ಜನರಿಗೆ ಅನ್ಯಾಯವಾಗಿದೆ….

Read More

ಡಾ. ಸುರೇಶ ಕಾಗಲ್ಕರ್ ರಾಜ್ಯ ಯುರಾಲಜಿ ಸಂಘದ ಕಾರ್ಯದರ್ಶಿಯಾಗಿ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 10:ಇತ್ತೀಚೆಗೆ ಗದಗದಲ್ಲಿ ನಡೆದ 31ನೇ ರಾಜ್ಯ ಯುರಾಲಜಿ ಸಮ್ಮೇಳನದಲ್ಲಿ 2026–28ನೇ ಅವಧಿಗೆ ವಿಜಯಪುರದ ಖ್ಯಾತ ಮೂತ್ರಪಿಂಡ ತಜ್ಞ ಡಾ. ಸುರೇಶ ಕಾಗಲ್ಕರ್ ಅವರನ್ನು ಕರ್ನಾಟಕ ಯುರಾಲಜಿ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಘದ ನೂತನ ಅಧ್ಯಕ್ಷ ಡಾ. ನವೀನ ಎಚ್. ತಿಳಿಸಿದ್ದಾರೆ.ಡಾ. ಸುರೇಶ ಕಾಗಲ್ಕರ್ ಅವರು ಈ ಹಿಂದೆ ರಾಜ್ಯ ಯುರಾಲಜಿ ಸಂಘದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದು, ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಚೇರ್ಮನ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ…

Read More

ಸಿಂದಗಿಯಲ್ಲಿ ಧರಣಿ: ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಕಲ್ಪಿಸಲು ಧರಣಿ ನಿರತರ ಆಗ್ರಹ

ಸಪ್ತಸಾಗರ ವಾರ್ತೆ,ಸಿಂದಗಿ, ಅ. 10: ವಿಜಯಪುರ ಜಿಲ್ಲೆಯನ್ನು ಸಂವಿಧಾನದ 371(ಜೆ) ಕಲಂ ವ್ಯಾಪ್ತಿಗೆ ಒಳಪಡಿಸಿ, ಜಿಲ್ಲೆಯ ಯುವಜನರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ವಿಶೇಷ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರದ ಬಸವೇಶ್ವರ ವೃತ್ತದ ಬಳಿ ಕಳೆದ ಎಂಟು ದಿನಗಳಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದವು.ಗೋಕಾಕ ಚಳವಳಿಯ ರೂವಾರಿ ಶ್ರೀ ರೇ.ಚ. ರೇವಡಿಗಾರ ಪ್ರತಿಷ್ಠಾನ ಹಾಗೂ 371(ಜೆ) ಹೋರಾಟ ಸಮಿತಿ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು, ಕರ್ನಾಟಕ ಸರ್ಕಾರಿ ಹಾಗೂ ಅರೆ ಸರ್ಕಾರಿ ನಿವೃತ್ತ…

Read More

ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಮಕ್ಕಳ ಪೌಷ್ಟಿಕತೆ, ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ತಾಯಂದಿರು ಕಾಳಜಿ ವಹಿಸಬೇಕು: ಅರವಿಂದ ಹಾಗರಗಿ ಸಪ್ತಸಾಗರ ವಾರ್ತೆ,ವಿಜಯಪುರ, ಅ.8: ಗರ್ಭಿಣಿಯರು ಹಾಗೂ ಬಾಣಂತಿಯರು ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವ ಮೂಲಕ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ವೈಯಕ್ತಿಕ ಸ್ವಚ್ಛತೆ, ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಮಹತ್ವದ ಕುರಿತು ತಾಯಂದಿರು ಅರಿವು ಹೊಂದಿರಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್. ಹಾಗರಗಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ…

Read More

ತಾಕತ್ತಿದ್ದರೆ ರಾಜೀನಾಮೆ ನೀಡಿ ಚುನಾವಣೆಗೆ ನಿಲ್ಲಿ: ಯತ್ನಾಳಗೆ ರಜಪೂತ ಸವಾಲು

ಸಪ್ತಸಾಗರ ವಾರ್ತೆ,ವಿಜಯಪುರ, ಅ. 8:ಬಿಜೆಪಿ ಪಕ್ಷದ ಚಿಹ್ನೆಯಿಂದ ಆಯ್ಕೆಯಾಗಿ, ಇದೀಗ ಅದೇ ಪಕ್ಷದ ವಿರುದ್ಧ ಟೀಕೆ ಮಾಡುತ್ತಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಪಕ್ಷದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ತಮ್ಮ ವೈಯಕ್ತಿಕ ವರ್ಚಸ್ಸಿನ ಮೇಲೆ ಗೆಲ್ಲುವ ಸಾಮರ್ಥ್ಯವಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಗೆ ಸ್ಪರ್ಧಿಸಲಿ. ಬಿಜೆಪಿ ಸಾಮಾನ್ಯ ಕಾರ್ಯಕರ್ತನನ್ನೇ ಅವರ ವಿರುದ್ಧ ಕಣಕ್ಕಿಳಿಸಿ ಗೆಲ್ಲಿಸುವ ಮೂಲಕ ಪಕ್ಷದ ಶಕ್ತಿ ತೋರಿಸುತ್ತೇವೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ನಗರಸಭೆ ಮಾಜಿ…

Read More

ಬಿ.ಎಲ್‌.ಡಿ.ಇ ಡೀಮ್ಡ್ ವಿವಿ ಮಹಿಳಾ ಬ್ಯಾಡ್ಮಿಂಟನ್ ತಂಡಕ್ಕೆ ಪ್ರಥಮ ಸ್ಥಾನ

ಸಪ್ತಸಾಗರ ವಾರ್ತೆ,ವಿಜಯಪುರ, ಅ.7: ಮಹಾರಾಷ್ಟ್ರದ ಲೋಣಿಯ ಪ್ರವರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (PIMS) ವತಿಯಿಂದ ಅ.3ರಿಂದ 6ರವರೆಗೆ ಆಯೋಜಿಸಿದ್ದ ‘ಇಗ್ನಿಷಿಯಾ-2026’ ಅಂತರ ವೈದ್ಯಕೀಯ ಮಹಾವಿದ್ಯಾಲಯಗಳ ಕ್ರೀಡಾಕೂಟದಲ್ಲಿ ಬಿ.ಎಲ್‌.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದ ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ 27 ವಿದ್ಯಾರ್ಥಿಗಳ ತಂಡ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದೆ.ಕ್ರೀಡಾಕೂಟದ ಮಹಿಳಾ ಬ್ಯಾಡ್ಮಿಂಟನ್ ಡಬಲ್ಸ್ ವಿಭಾಗದಲ್ಲಿ ವಿಶ್ವವಿದ್ಯಾಲಯದ ತನುಶ್ರೀ ಪಾಟೀಲ ಹಾಗೂ ಸುಭಗಾ ಪಿ.ಎನ್. ಅವರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ…

Read More