ಏ. 15ರಿಂದ 18ರವರೆಗೆ ಚಿಕ್ಕ ಮಕ್ಕಳ ಉಚಿತ ಆರೋಗ್ಯ ತಪಾಸಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 10: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆಯ ಕೌಮಾರಭೃತ್ಯ ವಿಭಾಗದ ವತಿಯಿಂದ ಮಕ್ಕಳಲ್ಲಿ ಕಂಡುಬರುವ ಚಂಚಲತೆ ಹಾಗೂ ಅತೀ ಚಟುವಟಿಕೆ (ADHD) ಕುರಿತು ಉಚಿತ ತಪಾಸಣೆ, ಪಂಚಕರ್ಮ ಚಿಕಿತ್ಸೆ ಮತ್ತು ಔಷಧ ವಿತರಣೆ ಸೌಲಭ್ಯ ಹಾಗೂ ಮಕ್ಕಳಲ್ಲಿ ಕಾಣಿಸುವ ಚರ್ಮರೋಗಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ ಏಪ್ರಿಲ್ 15 ರಿಂದ ಏಪ್ರಿಲ್ 18ರ ವರೆಗೆ ನಡೆಯಲಿದೆ.ಬುಧವಾರದಿಂದ ಶನಿವಾರದ ವರೆಗೆ 4 ದಿನ ಈ ಶಿಬಿರ ಆಯೋಜಿಸಲಾಗಿದೆ. ಮಕ್ಕಳಲ್ಲಿ ಕಂಡು…

Read More

ಡಾ.ಬಿ.ಆರ್. ಅಂಬೇಡ್ಕರವರ 135ನೇ ಜಯಂತಿ ಕಾರ್ಯಕ್ರಮ

ಸಪ್ತಸಾಗರ ವಾರ್ತೆ,ವಿಜಯಪುರ,ಏ.10: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಏಪ್ರಿಲ್ 14ರ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬೆಳಿಗ್ಗೆ 10 ಗಂಟೆಗೆ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಕಾರ್ಯಕ್ರಮಕ್ಕೆ ಉದ್ಘಾಟಿಸಲಿದ್ದಾರೆ.ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದ…

Read More

ಪಿಯು ಫಲಿತಾಂಶ: ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸಚಿವ ಎಂ.ಬಿ. ಪಾಟೀಲರಿಂದ ಸನ್ಮಾನ

ಸಪ್ತಸಾಗರ ವಾರ್ತೆ,ವಿಜಯಪುರ, ಏ.10:ಮಾರ್ಚ್ 2026ರಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಸನ್ಮಾನಿಸಿ ಅಭಿನಂದಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ನಿರ್ವಹಣೆ ಕುರಿತ ನಡೆದ ಸಭೆಯ ನಂತರ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಮಾತನಾಡಿದರು.ವಿದ್ಯಾರ್ಥಿಗಳ ಪರಿಶ್ರಮ,…

Read More

ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲು ವಿಶೇಷ ಕಾರ್ಯಪಡೆ ರಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 10: ಜಿಲ್ಲೆಯಲ್ಲಿನ ನಕಲಿ ವೈದ್ಯರು ಮತ್ತು ಕೆಪಿಎಂಇ ಕಾಯ್ದೆಯಡಿ ನೋಂದಣಿಗೊಳ್ಳದೇ ಅನಧಿಕೃತವಾಗಿ ಖಾಸಗಿ ವೈದ್ಯಕೀಯ ವೃತ್ತಿ ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ವಿಶೇಷ ಪಡೆ ರಚಿಸಲಾಗಿದೆ‌ ಎಂದು‌ ರಚಿಸಲಾಗಿದೆ‌ ಎಂದು‌ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿ ಸರ್ಕಾರದ ಸುತ್ತೋಲೆಯ ಆದೇಶದಂತೆ ಈ ಪಡೆ ರಚಿಸಲಾಗಿದೆ ಎಂದವರು ತಿಳಿಸಿದ್ದಾರೆ.ಈ‌ ಪಡೆಯಲ್ಲಿ ಅಪರ ಜಿಲ್ಲಾಧಿಕಾರಿಗಳು, ವಿಜಯಪುರ ನಗರ ಮತ್ತು‌ ಗ್ರಾಮೀಣ, ಇಂಡಿ‌ ಹಾಗೂ ಬಸವನಬಾಗೇವಾಡಿ ಉಪ…

Read More

ಬೇಸಿಗೆ: ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು- ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಏ.10: ಜಿಲ್ಲೆಯಲ್ಲಿ ಸದ್ಯಕ್ಕೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿಲ್ಲ. ಇಂಡಿ ಹಾಗೂ ಚಡಚಣ ಭಾಗದಲ್ಲಿ ನೀರಿನ ಸಮಸ್ಯೆ ತಲೆದೋರಬಹುದು. ಗ್ರಾಪಂ ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ‌ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ನಗರ…

Read More

ಕನ್ನೂರ ಶಾಂತಿಕುಟೀರ ಆಶ್ರಮದಲ್ಲಿ ಉಚಿತ ಶೈಕ್ಷಣಿಕ ಹಾಗೂ ಆಧ್ಯಾತ್ಮಿಕ ಬೇಸಿಗೆ ಶಿಬಿರ: ಏಪ್ರಿಲ್ 10 ರಿಂದ ಮೇ 10 ರ ವರೆಗೆ ವಿದ್ಯಾರ್ಥಿಗಳಿಗೆ ಜ್ಞಾನದಾಸೋಹ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 9: ಗ್ರಾಮೀಣ ಭಾಗದ ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವ ಹಾಗೂ ಶೈಕ್ಷಣಿಕ ಪ್ರಗತಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಕನ್ನೂರಿನ ಶ್ರೀ ಸಮರ್ಥ ಸದ್ಗುರು ಗಣಪತರಾವ ಮಹಾರಾಜ ಶಾಂತಿಕುಟೀರ ಟ್ರಸ್ಟ್, ಭಾರತೀಯ ಸುರಾಜ್ಯ ಸಂಸ್ಥೆ ಹಾಗೂ ಸಂಡೂರಿನ ಶ್ರೀಶೈಲೇಶ್ವರ ವಿದ್ಯಾಕೇಂದ್ರದ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 10 ರಿಂದ ಮೇ 10 ರ ವರೆಗೆ ಒಂದು ತಿಂಗಳ ಕಾಲ ‘ಉಚಿತ ಶೈಕ್ಷಣಿಕ-ಆಧ್ಯಾತ್ಮಿಕ ಬೇಸಿಗೆ ಶಿಬಿರ-2026’ ಅನ್ನು ಆಯೋಜಿಸಲಾಗಿದೆ. ವ್ಯಕ್ತಿತ್ವ ವಿಕಸನಕ್ಕೆ ಒತ್ತು– ಶ್ರೀ ಸಮರ್ಥ ಸದ್ಗುರು ಗಣಪತರಾವ…

Read More

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಸಹಾಯವಾಣಿ ಸ್ಥಾಪನೆ : ಜಿಪಂ ಸಿಇಒ ರಿಷಿ ಆನಂದ

ಸಪ್ತಸಾಗರ ವಾರ್ತೆ,ವಿಜಯಪುರ, ಏ.9: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನಿಗದಿತ ಸಮಯದಲ್ಲಿ ಪರಿಹರಿಸಲು ಜಿಲ್ಲಾ ಪಂಚಾಯತ ಕಚೇರಿ, ಕಾರ್ಯನಿರ್ವಾಹಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಕಚೇರಿ ಮತ್ತು ಜಿಲ್ಲೆಯ ಎಲ್ಲಾ ತಾಲೂಕಾ ಪಂಚಾಯತಿಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ತಿಳಿಸಿದ್ದಾರೆ.ಜಿಲ್ಲಾ ಪಂಚಾಯತ ಕಚೇರಿಯ ಸಹಾಯವಾಣಿ ಸಂಖ್ಯೆ ; 08352-277293, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಚೇರಿಯ ದೂ….

Read More

ಎಲ್‌ಕೆಜಿ-ಯುಕೆಜಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಏ.9 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗಾಗಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.2026-27ನೇ ಶೈಕ್ಷಣಿಕ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಮೇ‌8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತ ವಿದ್ಯಾರ್ಥಿಗಳ ಪಾಲಕರು-ಪೋಷಕರು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್‌ https://erp.dom.karnataka.gov.in/lkg ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ,…

Read More

ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಇಲ್ಲ -ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಸ್ಪಷ್ಟನೆ‌

ಸಪ್ತಸಾಗರ ವಾರ್ತೆ,ವಿಜಯಪುರ, ಏ. 9: ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ. ಅದರಂತೆ,ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಅವರು ಹೇಳಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ‌ ಅವರು, ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಲ್ಬಣಿಸಬಹುದಾದ 11 ತಾಲೂಕುಗಳ 38 ಗ್ರಾಮ ಪಂ‌ಚಾಯತಿ ವ್ಯಾಪ್ತಿಯ 65 ಗ್ರಾಮಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ನೀರಿನ ಯಾವುದೇ ಸಮಸ್ಯೆ ಉಂಟಾಗದಂತೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.ಆಲಮಟ್ಟಿ ಜಲಾಶಯದಲ್ಲಿ ಕಳೆದ…

Read More

ಪವರ್ ಗ್ರೀಡ್ ಸಂಸ್ಥೆಯಿಂದ ದೇಶಕ್ಕೆ ಅಪಾರ ಕೊಡುಗೆ: ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಬಣ್ಣನೆ

ಸಪ್ತಸಾಗರ ವಾರ್ತೆ,ವಿಜಯಪುರ,ಏ. 8:ಪವರ್ ಗ್ರೀಡ್ ಸಂಸ್ಥೆ ನಮ್ಮ ದೇಶದಲ್ಲಿರುವ ಹೆಮ್ಮೆಯ ಸಂಸ್ಥೆ, ಈ ಸಂಸ್ಥೆ ಸ್ಪರ್ಧಾತ್ಮಕವಾಗಿ ದೇಶಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಹೇಳಿದರು.ಬುಧವಾರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಪವರ್‌ಗ್ರಿಡ್ ಕಾರ್ಪೋರೆಷನ್ ಆಫ್ ಇಂಡಿಯಾ ಲಿಮಿಟೆಡ್, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಆರೋಗ್ಯ, ಶಿಕ್ಷಣ ಮತ್ತು ಕ್ರೀಡಾ…

Read More