ಅಂಚೆ ಜೀವ ವಿಮೆ ಮಾರಾಟ: ನೇರ ಪ್ರತಿನಿಧಿಗಳ ನೇಮಕ, ನೇರ ಸಂದರ್ಶನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15 :ವಿಜಯಪುರ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.ಆಸಕ್ತ ಅಭ್ಯರ್ಥಿಗಳ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜು. 18 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ಗೋಲ್ ಗುಂಬಜ್ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.ಆಯ್ಕೆಯಾದ ಅಭ್ಯರ್ಥಿಗಳು 5,000 ರೂ.ಗಳ ರಾಷ್ಟ್ರೀಯ ಉಳಿತಾಯ…

Read More

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮುಳವಾಡ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ, ಸದಸ್ಯರು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15 :ಜಿಲ್ಲೆಯ ಬಸವನ ಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ಮುಳವಾಡ ಗ್ರಾಮ ಪಂಚಾಯತಿ ಅಧ್ಯಕ್ಷ- ಉಪಾಧ್ಯಕ್ಷ ಸೇರಿದಂತೆ 6 ಸದಸ್ಯರು ಬಿಜೆಪಿ ತೊರೆದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ವಿಜಯಪುರ ನಗರದಲ್ಲಿರುವ ಸಚಿವ ಶಿವಾನಂದ ಪಾಟೀಲ ಅವರ ಗೃಹ ಕಛೇರಿಗೆ ಆಗಮಿಸಿದ ಮುಳವಾಡ ಗ್ರಾಮ ಪಂಚಾಯತಿ ಬಿಜೆಪಿ ಸದಸ್ಯರು ಅಧ್ಯಕ್ಷ ಬಾಳು ಚಿನಕೇಕರ, ಉಪಾಧ್ಯಕ್ಷೆ ಮಧುಮತಿ ಧನ್ಯಾಳ, ಗ್ರಾಮ ಪಂಚಾಯತಿ…

Read More

ಕೊಲೆ ಆರೋಪಿಗಳಿಬ್ಬರ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ನಿನ್ನೆಯಷ್ಟೇ ನಗರದಲ್ಲಿ ನಡೆದ ಸುಶೀಲ್ ಕಾಳೆ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆ ಕಲ್ಲು, ಕಂಟ್ರಿ ಪಿಸ್ತೂಲ್ ನಿಂದ ಆರೋಪಿಗಳು ದಾಳಿ ನಡೆಸಿದಾಗ ಪೊಲೀಸರು ಪ್ರತಿಯಾಗಿ ಆರೋಪಿಗಳಿಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರ ಕಾಲುಗಳಿಗೆ ಗಾಯಗಳಾದ ಘಟನೆ ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಇಟ್ಟಂಗಿಹಾಳ ರಸ್ತೆಯಲ್ಲಿ ನಡೆದಿದೆ.ಆಕಾಶ ಕಲ್ಲವ್ವಗೋಳ (24), ಸುಭಾಸ ಬಗಲಿ (20) ಗಾಯಗೊಂಡ ಆರೋಪಿಗಳು.ಇಬ್ಬರು ಆರೋಪಿಗಳಿಗೆ ಕಾಲಿಗೆ ಗುಂಡು ತಗಲಿದ್ದು, ಆರೋಪಿಗಳನ್ನು ಜಿಲ್ಲಾ…

Read More

ನಮ್ಮದು ಅಭಿವೃದ್ಧಿ ಪರ ಸರ್ಕಾರ: ಸಿದ್ದರಾಮಯ್ಯ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಭಾಗಿ

ಸಪ್ತಸಾಗರ ವಾರ್ತೆ, ಜು. 14:ನಮ್ಮದು ಅಭಿವೃದ್ಧಿಪರ ಸರ್ಕಾರ. ಬಿಜೆಪಿ ಅಪಪ್ರಚಾರಕ್ಕೆ ಅಭಿವೃದ್ಧಿ ಮೂಲಕವೇ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸೋಮವಾರ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.4157…

Read More

ಡಾ.ಅಂಬೇಡ್ಕರ್ ಅವರು ನಮ್ಮ ದೇಶದ ಆಸ್ತಿ-ಶಾಸಕ ಕಟಕದೊಂಡ

ಸಪ್ತಸಾಗರ ವಾರ್ತೆ, ವಿಜಯಪುರ, 14: ಜಗತ್ತಿನಲ್ಲಿ ಮೇರು ವ್ಯಕ್ತಿತ್ವ ಹೊಂದಿದ ಡಾ.ಅಂಬೇಡ್ಕರ್ ಅವರು ಜನಹಿತಕ್ಕಾಗಿ ಶಾಂತಿದೂತನಾಗಿಬದುಕು ಸಾಗಿಸುತ್ತಾ, ಸರ್ವರಲ್ಲಿ ಸಮಾನತಾ ಭಾವ ಬಿತ್ತಿದ್ದಾರೆ. ಸಂವಿಧಾನ ಪೀಠಿಕೆಯ ಮೂಲಾಂಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ ಕಟಕದೊಂಡ ಹೇಳಿದರು.ರವಿವಾರದಂದು ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಪ್ರತಿಷ್ಠಾಪನೆ ಹಾಗೂ 134 ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಡಾ.ಅಂಬೇಡ್ಕರ್ ಅವರು ಎತ್ತಿಹಿಡಿದ ವಿಶ್ವ ಕುಟುಂಬದ ತತ್ವವನ್ನು ಅನುಪಾಲಿಸಿಕೊಂಡು, ಇಂದಿನ ಯುವಪೀಳಿಗೆ…

Read More

ಸರೋಜಾದೇವಿ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 14:ಕನ್ನಡ ಚಿತ್ರರಂಗದ ಮೇರು ನಟಿ ಬಿ.ಸರೋಜಾದೇವಿ ನಿಧನಕ್ಕೆ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಈ ಕುರಿತು ಸಂತಾಪ ಸಂದೇಶ ನೀಡಿರುವ ಸಚಿವರು, ಭಾರತೀಯ ಚಿತ್ರರಂಗದಲ್ಲಿ ಬಹುಭಾಷಾ ತಾರೆಯಾಗಿ ಕನ್ನಡದ ಕೀರ್ತಿ ಹೆಚ್ಚಿಸಿದ್ದ ಸರೋಜಾದೇವಿ ಅವರು, ಕನ್ನಡ ಚಿತ್ರರಂಗಕ್ಕೆ ಮಹೋನ್ನತ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ.ಸರೋಜಾದೇವಿ ಅವರು ಮನೋಜ್ಞ ಅಭಿನಯ ನೀಡಿದ್ದ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಪಾತ್ರಕ್ಕೆ ಜೀವತುಂಬಿದ್ದನ್ನು…

Read More

ವಿಜಯಪುರದಲ್ಲಿ ಹಾಡ ಹಗಲೆ ಯುವಕನ ಬರ್ಬರ ಹತ್ಯೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 14:ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ನಗರದ ಎಸ್. ಎಸ್. ರಸ್ತೆಯ ಎಸ್. ಎಸ್. ಕಾಂಪ್ಲೆಕ್ಸ್ ನಲ್ಲಿ ಇರುವ ಅಮರ ವರ್ಷಿಣಿ ಸರಕಾರಿ ಬ್ಯಾಂಕಿನಲ್ಲಿ ನಡೆದಿದೆ.ಸುಶೀಲ್ ಕಾಳೆ (43) ಕೊಲೆಗೀಡಾದ ಯುವಕ.ಬ್ಯಾಂಕಿನಲ್ಲಿದ್ದ ಈ ಯುವಕನ ಮೇಲೆ ಮಾರಾಕಸ್ತ್ರಗಳಿಂದ ನಾಲ್ವರು ಹಲ್ಲೆ ಮಾಡಿದ್ದು ತೀವ್ರವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ. ತಕ್ಷಣ ಆತನನ್ನು ಚಿಕಿತ್ಸೆಗಾಗಿ ನಗರದ ಬಿ ಎಲ್ ಡಿ ಇ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಂತಾಜನಕ ಸ್ಥಿತಿಯಲ್ಲಿದ್ದ…

Read More

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ: ಸಂಸದ ಜಿಗಜಿಣಗಿ ಆರೋಪ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 13:ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣ ಕುಂಠಿತಗೊಂಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು.ಭಾನುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಎಟಿಎಂ ಸರ್ಕಾರವಾಗಿದೆ. ಆದರೆ ಡೆಬಿಟ್ ಅಕೌಂಟ್ ನಲ್ಲಿ ಹಣವೇ ಇಲ್ಲ ಎಂದು ಛೇಡಿಸಿದರು.ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಹೊರಗುತ್ತಿಗೆ ಆಧಾರದ ಕೆಲಸಗಾರರಿಗೂ ಸಂಬಳವಿಲ್ಲ.ತಮ್ಮರು ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ದಲಿತಪರ ಸರ್ಕಾರಿ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಆದರೆ ಯಾವುದೇ ಅಭಿವೃದ್ಧಿ ಇಲ್ಲ. ಎಲ್ಲವೂ ಗ್ಯಾರಂಟಿ ಯೋಜನೆಗಳಿಗೆ ಹಣ ಸೋರಿ ಹೋಗುತ್ತಿದೆ. ಗ್ಯಾರಂಟಿಯಿಂದ…

Read More

ನಾಳೆ ಇಂಡಿಗೆ ಸಿಎಂ, ಡಿಸಿಎಂ ಭೇಟಿ: ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ,ಜು.13:ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಜು. 14 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಜುಲೈ 13ರ ಭಾನುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,‌ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ…

Read More

ವೈದ್ಯರು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು-ಡಾ. ಎಂ. ಎಂ. ಪಾಟೀಲ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 13: ಯುವ ವೈದ್ಯರು ಪ್ರಸಕ್ತ ಕಾಲಕ್ಕೆ ಅನುಗುಣವಾಗಿ ಸಂಶೋಧನೆಗೆ ಹೆಚ್ಚು ಒತ್ತು ಕೊಟ್ಟು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು ಎಂದು ಬಿ. ಎಲ್. ಡಿ. ಇ ವಿಶ್ವವಿದ್ಯಾಲಯ¸ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಎಂ. ಎಂ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಸ್ವಸ್ಥವತ್ತ ವಿಭಾಗ ಹಾಗೂ ಸಾಂಸ್ಥಿಕ ಸಂಶೋಧನ…

Read More