ಬಾಲಕ ಸೇರಿ ಮೂವರು ಪ್ರವಾಸಿಗರು ಕೆರೆಯಲ್ಲಿ ಮುಳುಗಿ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಏ. 8:ಬೆಂಗಳೂರಿನಿಂದ ವಿಜಯಪುರಕ್ಕೆ ಪ್ರವಾಸಕ್ಕೆ ಬಂದಿದ್ದ ಓರ್ವ ಬಾಲಕ ಸೇರಿದಂತೆ ಮೂವರು ನಗರ ಹೊರ ವಲಯದ ಭೂತನಾಳ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಬುಧವಾರ ಸಂಭವಿಸಿದೆ.ಬೆಂಗಳೂರಿನ ಆರ್ ಟಿ ನಗರದ ಮಹಮ್ಮದ್ ಹಯಾತ್ (12)ಹೈದರ್ ಪಾಶಾ (32) ಅಬ್ದುಲ್ ಖುದ್ದುಸ್ (35) ಮೃತರು.ವಿಜಯಪುರ ನಗರದ ಐತಿಹಾಸಿಕಭೂತನಾಳ ಕೆರೆ ವೀಕ್ಷಣೆಗೆ ತೆರಳಿದ್ದ ವೇಳೆ ಈ ಮೂವರು ಮೃತಪಟ್ಟಿದ್ದಾರೆ.ಒಟ್ಟು 14 ಜನರು ಕುಟುಂಬ ಸಮೇತ ಬೆಂಗಳೂರಿನಿಂದ ವಿಜಯಪುರಕ್ಕೆ ಪ್ರವಾಸಕ್ಕೆ ಬಂದಿದ್ದರು.ಕೆರೆಯ ಬಳಿ ಕುಟುಂಬಸ್ಥರು ಆಗಮಿಸಿದ ವೇಳೆ ಈ…

Read More

ಸಚಿವ ಶಿವಾನಂದ ಪಾಟೀಲ್ ವಿರುದ್ಧ ಪ್ರಚಾರ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ,ವಿಜಯಪುರ, ಏ. 8:ಸಚಿವ ಶಿವಾನಂದ ಪಾಟೀಲ್ ವಿರುದ್ಧ ಪ್ರಚಾರ ಮಾಡುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ.ಎಂ.ಬಿ. ಪಾಟೀಲ್ ಗೆ ಸ್ವಾಭಿಮಾನ ಇದ್ದರೆ ಸಚಿವ ಶಿವಾನಂದ ಪಾಟೀಲ್ ವಿರುದ್ದ ಪ್ರಚಾರ ಮಾಡಲಿ ಎಂದು ಯತ್ನಾಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಸಚಿವ ಎಂ ಬಿ ಪಾಟೀಲ್ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.ಸಚಿವ ಶಿವಾನಂದ ಪಾಟೀಲ್ ಹಾಗೂ ನಾನು ಒಂದೇ ಪಕ್ಷದಲ್ಲಿ ಇರುವವರು. ಬಬಲೇಶ್ವರ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸಚಿವ ಶಿವಾನಂದ್ ಪಾಟೀಲ್…

Read More

ಏ. 11ರಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 8: ಬಿ. ಎಲ್. ಡಿ.‌ ಇ ಸಂಸ್ಥೆಯ ಎ. ವಿ.‌ ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ವತಿಯಿಂದ ಏಪ್ರಿಲ್ 11ರಂದು ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರರ್ಣ ಅನುಸಂಧಾನ-11 ನಡೆಯಲಿದೆ.ಅಂದು ಬೆಳಿಗ್ಗೆ 9.30 ಗಂಟೆಗೆ ಬಿ. ಎಲ್. ಡಿ. ಇ ಸಂಸ್ಥೆಯ ವಚನಪಿತಾಮಹ ಡಾ.ಪಿ. ಜಿ. ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿಬೆಂಗಳೂರಿನ‌ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರು ಸಹಯೋಗದಲ್ಲಿ ಈ ಕಾರ್ಯಕ್ರಮ‌ ನಡೆಯಲಿದೆ.ಬಿ.‌ ಎಲ್.‌ ಡಿ….

Read More

ಅಗ್ನಿವೀರರ ನೇಮಕಾತಿ ರ‍್ಯಾಲಿ: ಸಿದ್ಧತೆಗಾಗಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ,ಏ.7: ಐತಿಹಾಸಿಕ ವಿಜಯಪುರದಲ್ಲಿ ಮಂಗಳೂರಿನ ಸೇನಾ ನೇಮಕಾತಿ ಕಚೇರಿ ವತಿಯಿಂದ ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನಾ ನೇಮಕಾತಿ ಬೃಹತ್ ರ‍್ಯಾಲಿ ನಗರದಲ್ಲಿ ಸೆಪ್ಟೆಂಬರ್ 10 ರಿಂದ 30ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಅಗ್ನಿಪಥ ನೇಮಕಾತಿ ರ‍್ಯಾಲಿಯ ಪೂರ್ವ ಸಿದ್ಧತೆ ಕುರಿತಂತೆ ಸೇನಾ ನೇಮಕಾತಿ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ವಿಜಯಪುರ ಜಿಲ್ಲೆಯು ಒಳಗೊಂಡಂತೆ…

Read More

ಮನೆ-ಮನೆ ಗಣತಿ ಕಾರ್ಯಕ್ಕೆ‌ ಗಣತಿದಾರರು ಸಜ್ಜಾಗಬೇಕು: ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ.‌7:ಏ.16 ರಿಂದ ಮನೆ-ಮನೆ ಮನೆಪಟ್ಟಿ ಕಾರ್ಯಕ್ಕೆ ಗಣತಿದಾರರು ಕಾರ್ಯ ಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ‌ ಕೆ.‌ ಅವರು‌ ಹೇಳಿದರು.‌ಜನಗಣತಿ ಕುರಿತು‌ ಜಿಲ್ಲಾಧಿಕಾರಿ‌ ಕಚೇರಿ‌ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ‌ ಅವರು ಮಾತನಾಡಿದರು.‌ಗಣತಿದಾರರು ಈಗಾಗಲೇ ಸರಿಯಾಗಿ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ಎಲ್ಲರೂ ತರಬೇತಿಗೆ ಹಾಜರಿರುವಂತೆ ನೋಡಿಕೊಳ್ಳಬೇಕು ಅಧಿಕಾರಿಗಳಿಗೆ‌ ಸಲಹೆ ಮಾಡಿದ‌ ಅವರು, ಸ್ವಯಂ ಗಣತಿ ಕಾರ್ಯಕ್ಕೂ ಒತ್ತು ನೀಡಬೇಕು ಎಂದರು.ಯಾರೂ ನಿರ್ಲಕ್ಷ್ಯವಹಿಸಬಾರದು. ತಾಲೂಕು ಮಟ್ಟದಲ್ಲಿ ತರಬೇತಿ ನೀಡಿ, ಪರಿಪೂರ್ಣ ತರಬೇತಿ‌ ಕೊಡಿಸಬೇಕು ಎಂದರು….

Read More

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದು-ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ‌ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 7: ಬೇಸಿಗೆ ಇರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು‌ ಜಿಲ್ಲಾಧಿಕಾರಿಗಳಾದ‌ ಡಾ. ಆನಂದ‌ ಕೆ. ಅವರು, ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿ‌‌ ಕಚೇರಿಯ ಸಭಾಂಗಣದಲ್ಲಿ ಬೇಸಿಗೆ‌ಯಲ್ಲಿ‌ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈವರೆಗೂ ಟ್ಯಾಂಕರ್ ಸರಬರಾಜು ಅವಶ್ಯಕತೆ ಕಂಡುಬಂದಿಲ್ಲ.‌ಆದಾಗ್ಯೂ ಸಮಸ್ಯೆ ಇರುವ ಭಾಗದಲ್ಲಿ‌ ಕುಡಿಯುವ ನೀರಿಗೆ‌ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದರು.ಪ್ರತಿ‌ ಗ್ರಾಪಂಗಳು ನೀರು ಪೂರೈಕೆಯಲ್ಲಿ ಸಮಸ್ಯೆ ಎದುರಾಗದಂತೆ‌ ನೋಡಿಕೊಳ್ಳಬೇಕು. ಭವಿಷ್ಯದ ದಿನಗಳಲ್ಲಿ‌ ಎಲ್ಲಿ ಸಮಸ್ಯೆ…

Read More

ಬೆಂಬಲ‌ ಬೆಲೆಯಡಿ‌‌ ಕುಸುಬೆ ಖರೀದಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ.7: 2026 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನ ಏಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್‌ಗೆ 6540.ರೂ. ಗಳಂತೆ ಖರೀದಿ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆಯ ಸಮಿತಿ ಅಧ್ಯಕ್ಷ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.ಕುಸುಬೆ ಉತ್ಪನ್ನವನ್ನು ಪ್ರತಿ ಎಕರೆಗೆ 5 ಕ್ವಿಂಟಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿಸಲಾಗುತ್ತದೆ.ನೋಂದಣಿ ಅವಧಿ 80 ದಿನಗಳವರೆಗೆ ಇದೆ. ಖರೀದಿ ಅವಧಿ 90 ದಿನ ಇರುತ್ತದೆ. ನೋಂದಣಿಯೊಂದಿಗೆ…

Read More

ಮಾರಾಟಕ್ಕೆ‌ ಪುಸ್ತಕಗಳು ಲಭ್ಯ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 7:ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಪ್ರಕಟಣೆಯಾಗಿರುವ ಪುಸ್ತಕಗಳು ಮಾರಾಟಕ್ಕೆ ಲಭ್ಯವಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಲಭ್ಯವಿರುತ್ತವೆ.ಸಾಹಿತ್ಯಾಸಕ್ತರು ಪುಸ್ತಕಗಳನ್ನು ಕಚೇರಿ ವೇಳೆಯಲ್ಲಿ ಖರೀದಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ:08352-251261 ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ‌ ನಿರ್ದೇಶಕ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಕ್ಕಳು ಶಾಲೆಯಿಂದ‌‌ ಹೊರಗುಳಿಯದಂತೆ‌ ನೋಡಿಕೊಳ್ಳಿ: ನಿಸಾರ್‌ ಅಹಮದ್ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 6: ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಂಡು, ಜೀವನದಲ್ಲಿ ಸಾಧನೆ ಮಾಡುವಂತೆ‌ ಅಧಿಕಾರಿಗಳು‌ ಮಕ್ಕಳಿಗೆ ಪ್ರೇರೆಪಿಸುವ ಮೂಲಕ ಪೋಷಕರಿಗೆ ಅರಿವು ಮೂಡಿಸಬೇಕು ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್‌ ಅಹಮದ್ ಅಧಿಕಾರಿಗಳಿಗೆ ಸೂಚಿಸಿದರು.‌ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸುವ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈ‌ ಕುರಿತು ಪೋಷಕರಿಗೆ ತಿಳಿ ಹೇಳುವ ಮೂಲಕ ಶಿಕ್ಷಣದ ಮಹತ್ವವನ್ನು‌ ತಿಳಿಸಬೇಕು. ತನ್ಮೂಲಕ‌ ಮಕ್ಕಳು…

Read More

ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷದ ಸಂಸ್ಥಾಪನ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 6: ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವನ್ನು ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತು.ಭಾರತಮಾತೆ ಹಾಗೂ ಪಕ್ಷದ ಸಂಸ್ಥಾಪನೆ ಮಾಡಿದ ಮಹನೀಯರ ಭಾವಚಿತ್ರಗಳಿಗೆ ಪುಷ್ಪಾಂಜಲಿ ಸಲ್ಲಿಸಲಾಯಿತು. ಕಾರ್ಯಕರ್ತರು ಉತ್ಸಾಹದಿಂದ ಬಿಜೆಪಿ ಪಕ್ಷದ ಧ್ವಜವನ್ನು ಪ್ರದರ್ಶಿಸಿ ದೇಶಾಭಿಮಾನದ ಘೋಷಣೆಗಳನ್ನು ಕೂಗಿದರು.ಈ ವೇಳೆ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, ರಾಷ್ಟ್ರಾಭಿಮಾನವನ್ನೇ ಉಸಿರಾಗಿಸಿಕೊಂಡಿರುವ ಬಿಜೆಪಿ ಇಂದು ವಿಶ್ವದಲ್ಲಿಯೇ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿದೆ. ಶ್ಯಾಂ ಪ್ರಸಾದ್ ಮುಖರ್ಜಿ, ಪಂ.ದೀನದಯಾಳ ಉಪಾಧ್ಯಾಯ ಅವರಂತಹ ಶ್ರೇಷ್ಠ ಚಿಂತನೆಯ ಸ್ವರೂಪದಲ್ಲಿ ಉದಯಿಸಿದ…

Read More