ಮಲ್ಲಿಕಾರ್ಜುನ ಸ್ವಾಮಿಗಳು ಭಕ್ತರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ-ಸುನೀಲಗೌಡ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಎ. 4: ಸಮಾಜಮುಖಿ ಕಾರ್ಯಗಳ ಮೂಲಕ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಭಕ್ತರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಶುಕ್ರವಾರ ರಾತ್ರಿ ವಿಜಯಪುರ ತಾಲೂಕಿನ ಹೊನಗನಹಳ್ಳಿ- ಸವನಹಳ್ಳಿಯ ಶ್ರೀ ಆತ್ಮಾನಂದ ಆಶ್ರಮದಲ್ಲಿ ನಡೆಯುತ್ತಿರುವ ಪ. ಪೂ. ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳ 5ನೇ ಪುಣ್ಯಸ್ಮರಣೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಹಾಗೂ ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೋಂಡು ಅವರು ಮಾತನಾಡಿದರು.ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಜಾತ್ಯತೀತ ತತ್ವಗಳನ್ನು ಅಳವಡಿಸಿಕೊಂಡಿದ್ದರು. ಹಸಿದು ಬಂದವರಿಗೆ ಅನ್ನ…

Read More

ಜ್ಞಾನ-ಪರಿಜ್ಞಾನ ಇದ್ದಾಗ ಮಾತ್ರ ಪತ್ರಕರ್ತ ಯಶಸ್ಸು ಗಳಿಸಲು ಸಾಧ್ಯ: ಸಂತೋಷ ಚಿನಗುಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಎ. 3: ಪತ್ರಕರ್ತನಿಗೆ ಜ್ಞಾನ ಮತ್ತು ಪರಿಜ್ಞಾನ ಇದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಪ್ರಜಾವಾಣಿಯ ಬೆಳಗಾವಿ ಜಿಲ್ಲಾ ಹಿರಿಯ ವರದಿಗಾರ ಸಂತೋಷ ಚಿನಗುಡಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವುಮನ್ ಮೀಡಿಯಾ ಕ್ಲಬ್ ಉದ್ಘಾಟಿಸಿ ಅವರು ಮಾತನಾಡಿದರು.ಪತ್ರಿಕೋದ್ಯಮವು ಕೇವಲ ತರಗತಿ ಕೋಣೆಗೆ ಸೀಮಿತವಾಗಿರದೆ, ವಿದ್ಯಾರ್ಥಿಗಳು ಪ್ರಾಯೋಗಿಕ ಜ್ಞಾನವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಪತ್ರಿಕೆಗಳನ್ನು ಕೇವಲ ನೋಡದೆ, ಅವನ್ನು ನಿಯಮಿತವಾಗಿ ಓದಿದಾಗ…

Read More

ಅಕಾಲಿಕ ಮಳೆ:ಬೆಳೆ ಹಾನಿ ಸಮೀಕ್ಷೆಗೆ ಎಂಬಿಪಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಎ. 3: ಜಿಲ್ಲೆಯಲ್ಲಿ ನಿನ್ನೆ ಗುರುವಾರ ಸುರಿದ ಅಕಾಲಿಕ ಮಳೆಯಿಂದಾಗಿ ಉಂಟಾಗಿರುವ ದ್ರಾಕ್ಷಿ ಬೆಳೆ ಹಾನಿಯ ಕುರಿತು ಕೂಡಲೇ ಸಮೀಕ್ಷೆ‌ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಾರ್ಚ್ ತಿಂಗಳಲ್ಲಿ ಆಲಿಕಲ್ಲು ಮತ್ತು ಬಿರುಗಾಳಿ ಸಹಿತ ಮಳೆ ಸುರಿದ ಪರಿಣಾಮ ದ್ರಾಕ್ಷಿ ಸೇರಿದಂತೆ ನಾನಾ ಬೆಳೆಗಳು ಹಾನಿಯಾಗಿದ್ದವು. ‌ಈ ಕುರಿತು ಸಮಗ್ರ ಸಮೀಕ್ಷೆ ನಡೆಸುವಂತೆ ಮಾರ್ಚ್ 21 ರಂದು‌ ಜಿಲ್ಲಾಧಿಕಾರಿ,…

Read More

ಶಿವಶಂಕರಪ್ಪ ಅವರು ಮಾಡಿರುವ ಕೆಲಸ ನೋಡಿ ನಾವುಗಳು ಕಲಿಯುವುದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ದಾವಣಗೆರೆ, ಎ.3:“ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ದಿವಂಗತ ಶಾಮನೂರು ಶಿವಶಂಕರಪ್ಪ ಅವರು ಮಾಡಿರುವ ಕೆಲಸ ನೋಡಿ ನನಗೆ ಬಹಳ ಸಂತೋಷವಾಗಿದೆ. ನಾವು ಅವರಿಂದ ಕಲಿಯುವುದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ದಾವಣಗೆರೆಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.ಉಪಚುನಾವಣೆ ಪ್ರಚಾರದ ಬಗ್ಗೆ ಕೇಳಿದಾಗ, “ಈ ಕ್ಷೇತ್ರದಲ್ಲಿ ನೂರಕ್ಕೆ 98% ಮಹಿಳೆಯರು ಗ್ಯಾರಂಟಿ ಯೋಜನೆ ಫಲಾನುಭವಿಗಳಾಗಿದ್ದಾರೆ. ಸುಮಾರು 60 ಸಾವಿರ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಪಡೆಯುತ್ತಿದ್ದರೆ, 61 ಸಾವಿರ ಕುಟುಂಬಗಳು ಗೃಹಜ್ಯೋತಿ ಯೋಜನೆ…

Read More

ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಏ. 3:ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು. ಬಿಜೆಪಿಗೆ ಸೋಲಿನ ಭಯ ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಗಳನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ ಹಾಗೂ ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸೋಮಣ್ಣ…

Read More

ಕಾರಜೋಳ ಹೇಳಿಕೆ ಹಾಸ್ಯಾಸ್ಪದ:ಎಂಬಿಪಿ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಎ. 3:ಯುಕೆಪಿ ಯೋಜನೆ ಕುರಿತು ಎ. 8 ರಂದು ಬಹಿರಂಗವಾಗಿ ಚರ್ಚೆಗೆ ಬರುವಂತೆ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಹಾಕಿರುವ ಸವಾಲು ಹಾಸ್ಯಾಸ್ಪದವಾಗಿದೆ ಎಂದು ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ನಿಮಿತ್ತ ಭಗವತಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರ ಪರವಾಗಿ ಮತಯಾಚನೆ ಮಾಡಿ ಮಾತನಾಡಿದ ಅವರು, ವಿಧಾನ ಸಭೆ ಉಪಚುನಾವಣೆ ಪ್ರಚಾರ ಪ್ರಕ್ರಿಯೆ ಎ.7 ರಂದು ಸಂಜೆ ಮುಗಿಯುತ್ತದೆ. ಹೀಗಾಗಿ ದಿ. 8 ರಂದು…

Read More

ರಾಷ್ಟ್ರದ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಅನನ್ಯ:ಹಿರೇಮಠ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 2 : ಕಾರ್ಮಿಕರು ದೇಶದ ಆಸ್ತಿ, ರಾಷ್ಟ್ರದ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಅನನ್ಯವಾಗಿದ್ದು, ಕಾರ್ಮಿಕರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಲಾಭ ಪಡೆದುಕೊಳ್ಳುವ ನಿಟ್ಟಿನಲ್ಲಿ ಸ್ಮಾರ್ಟ್ ಕಾರ್ಡ್ ಅಗತ್ಯ. ಅಂತಹ ಸ್ಮಾರ್ಟ್ ಕಾರ್ಡ್ ಬಾಗಿಲಿಗೆ ಒದಗಿಸುವ ಕಾರ್ಯ ನಡೆಯುತ್ತಿರುವುದು ಸಂತಸದ ಸಂಗತಿ ಎಂದು ಸಿದ್ಧೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ ಹೇಳಿದರು.ನಗರದ ಜೋರಾಪುರ ಪೇಟೆಯ ಶ್ರೀ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಕಾರ್ಮಿಕ ಇಲಾಖೆ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಸಂಘಟಿತರಿಗೆ ಕಾರ್ಮಿಕರ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ…

Read More

ಅಕ್ಕಮಹಾದೇವಿ ಸ್ತ್ರೀ ಸ್ವಾತಂತ್ರ‍್ಯ ಮತ್ತು ಸಮಾನತೆಯ ಸಂಕೇತ- ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅಭಿಮತ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 2: ಅನುಭವ ಮಂಟಪವು ಶರಣ ಚಳವಳಿಯ ಹೃದಯವಾಗಿತ್ತು. ಇಲ್ಲಿ ಮಹಿಳೆಯರು ಮೌನ ಶ್ರೋತೃಗಳಾಗಿರಲಿಲ್ಲ. ಅವರು ತರ್ಕಕಾರ್ತಿಯರು, ಪ್ರಶ್ನಕರೂ ಮತ್ತು ವಚನ ರಚನಾಕಾರರೂ ಆಗಿದ್ದರು. ಅಕ್ಕಮಹಾದೇವಿ ಅನುಭವ ಮಂಟಪದಲ್ಲಿ ಪುರುಷ ಶರಣರ ಮುಂದೆ ಧೈರ್ಯವಾಗಿ ಮಾತನಾಡಿದರು. ಹೀಗಾಗಿ ಅಕ್ಕಮಹಾದೇವಿ ಸ್ತ್ರೀ ಸ್ವಾತಂತ್ರ‍್ಯ ಮತ್ತು ಸಮಾನತೆಯ ಸಂಕೇತವಾಗಿದ್ದಾರೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 12ನೇ…

Read More

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ

ಸಪ್ತಸಾಗರ ವಾರ್ತೆ,ದಾವಣಗೆರೆ, ಏ. 2 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಗುರುವಾರ ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು…

Read More

ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಪೊಲೀಸರು ನೊಂದವರ ಭರವಸೆಯ ಆಶಾಕಿರಣ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆಗೆ ಹಗಲಿರುಳು ಶ್ರಮಿಸುವ ಪೊಲೀಸರ ಕಾರ್ಯ ಅನನ್ಯ: ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 2: ವರ್ಷದುದ್ದಕ್ಕೂ ಸದಾ ಒತ್ತಡದ ಮಧ್ಯೆಯೇ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ನೆಮ್ಮದಿಯ ಜೀವನಕ್ಕಾಗಿ, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೊಲೀಸರು ನಿಭಾಯಿಸುವ ಕರ್ತವ್ಯಕ್ಕೆ ಬೆಲೆ ಕಟ್ಟಲಾಗದು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಪೊಲೀಸರ ಕಾರ್ಯವನ್ನು ಬಣ್ಣಿಸಿದರು.ಜಿಲ್ಲಾ ಪೊಲೀಸ್ ಇಲಾಖೆಯಿಂದ ಇಲ್ಲಿನ ಪೊಲಿಸ್ ಕವಾಯತು ಮೈದಾನದಲ್ಲಿ ಗುರುವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸದಾ ಸಮಾಜದ ಒಳಿತಿಗಾಗಿ ಯಾವ ಪ್ರತಿಫಲಾಪೇಕ್ಷೆಯಿಲ್ಲದೇ ಹಗಲಿರುಳು ಶ್ರಮಿಸುವ ಪೊಲೀಸರು…

Read More