
ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಅಧಿಕಾರ ಸ್ವೀಕಾರ
ಸಪ್ತಸಾಗರ ವಾರ್ತೆ, ವಿಜಯಪುರ,ಜು.೯:ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ. ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.ಕಳೆದ ಎರಡು ವರ್ಷಗಳಿಂದ ವಿಜಯಪುರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಟಿ. ಭೂಬಾಲನ್ ಅವರನ್ನು ಬೆಂಗಳೂರಿನ ಇ-ಆಡಳಿತ ಕೇಂದ್ರದ ಸಿಇಒ ಆಗಿ ಸರ್ಕಾರ ವರ್ಗಾವಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.ಮೊದಲಿನ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ನೂತನ ಜಿಲ್ಲಾಧಿಕಾರಿ ಡಾ. ಆನಂದ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರಿಸಿದರು.ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಡಾ. ಆನಂದ…