ಚೆಸ್ ಸ್ಪರ್ಧೆ: ಅಂಜುಮನ್ ಕಾಲೇಜ್ ಗೆ ತೃತೀಯ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 28:ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಬೆಂಗಳೂರು ಕಾನೂನು ಕಾಲೇಜಿನಲ್ಲಿ ಮಾ. 26ರಂದು ಅಂತರ ಕಾಲೇಜು ಚೆಸ್ ಸ್ಪರ್ಧೆ ಜರುಗಿತು.ಈ ಸ್ಪರ್ಧೆಯಲ್ಲಿ ಅಂಜುಮನ್ ಕಾನೂನು ಮಹಾವಿದ್ಯಾಲಯ, ವಿಜಯಪುರದಿಂದ ಐದು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ತಂಡದ ನಾಯಕ ಸಮೀರ್ ಖಾಜಿ, ಅಮೀರ್ ಕೊರ್ತಿ, ಪ್ರದೀಪ್ ಬಾಲಗನೂರ್, ಆನಂದ್ ಕಾಳಗಿ ಹಾಗೂ ದ್ಯಾಮಣ್ಣ ಸುಭಾನಪ್ಪರ್ ಇದ್ದರು.ತಂಡದ ವ್ಯವಸ್ಥಾಪಕರಾಗಿ ದೈಹಿಕ ಶಿಕ್ಷಣ ನಿರ್ದೇಶಕ ಟಿ.ಎಸ್. ಕೂಡಗಿ ಅವರು ಕಾರ್ಯ ನಿರ್ವಹಿಸಿದರು. ಈ ಸ್ಪರ್ಧೆಯಲ್ಲಿ ವಿವಿಧ…

Read More

ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 27:ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ನಡೆದಿದೆ.ತಾಯಿ ರಾಜಶ್ರೀ ಶಂಕ್ರಪ್ಪ ಹಳ್ಳೂರ (28),ಮೂವರು ಅಪ್ರಾಪ್ತ ವಯಸ್ಸಿನ ಮಕ್ಕಳಾದ ಅನುಶ್ರೀ ( 6), ತನು (3)ಸಂತೋಷ ( 1) ಮೃತಪಟ್ಟವರು.ಗುರುವಾರ ಸಂಜೆ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿಮೂವರು ಮಕ್ಕಳನ್ನು‌ ಬಾವಿಗೆ ಎಸೆದು ತಾನೂ ಬಾವಿಗೆ ಬಿದ್ದುರಾಜಶ್ರೀ ಶಂಕ್ರಪ್ಪ ಹಳ್ಳೂರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ರಾಜಶ್ರೀ ಪತಿ ಶಂಕ್ರಪ್ಪ ಊರಲ್ಲಿ ಇಲ್ಲದಿರುವಾಗ ಈ ಘಟನೆ…

Read More

ಖ್ಯಾತ ಸಾಹಿತಿ, ರಾಗಂ ಅವರಿಗೆ ಕರ್ನಾಟಕ ಸುಮನಸಾಧಕ ಪ್ರಶಸ್ತಿ

ಸಪ್ತಸಾಗರ ವಾರ್ತೆ, ಬೆಂಗಳೂರು, ಮಾ. 26:ಬೆಂಗಳೂರಿನ ಖ್ಯಾತ ಟಿವಿ ವಾಹಿನಿಯಾದ ಸುಮನ ಟಿವಿಯವರು ಕೊಡ ಮಾಡುವ 2026 ನೇ ಸಾಲಿನ ಕರ್ನಾಟಕ ಸುಮನ ಸಾಧಕ ಪ್ರಶಸ್ತಿಯನ್ನು ಮೂಲತಃ ವಿಜಯಪುರ ಮೂಲದ ಬೆಂಗಳೂರಿನ ಪ್ರಖ್ಯಾತ ಸಾಹಿತಿ, ಸಂಶೋಧಕ, ಇಂಗ್ಲೀಷ ಪ್ರಾಧ್ಯಾಪಕ, ಸಾಹಿತ್ಯ ಲೋಕದಲ್ಲಿ ‘ ರಾಗಂ ‘ ಎಂದೆ ಪ್ರಸಿದ್ಧಿಯನ್ನು ಪಡೆದಿರುವ ನೂರಾರು ಮೌಲ್ಯಾಧಾರಿತ ಕೃತಿಯನ್ನು ಕನ್ನಡ ಸಾರಸತ್ವ ಲೋಕಕ್ಕೆ ನೀಡಿದ ರಾಜಶೇಖರ ಜಿ ಮಠಪತಿಯವರಿಗೆ ಸುಮನ ಸಾಧಕ ಪ್ರಶಸ್ತಿ ಲಭಿಸಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಏಪ್ರಿಲ್ ನಿಂದ ಭಾರತ ಜನಗಣತಿ-2027 ಆರಂಭ: ಜಿಲ್ಲೆಯಲ್ಲಿ ಎರಡು ಹಂತದ ಜನಗಣತಿಗೆ ಬ್ಲಾಕ್ ರಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 26:ನಮ್ಮ ಜನಗಣತಿ, ನಮ್ಮ ಭವಿಷ್ಯ ಧ್ಯೇಯ ವಾಕ್ಯದಡಿ ಭಾರತ ಜನಗಣತಿ-2027ರ ಮೊದಲ ಹಂತದ ಜನಗಣತಿಯನ್ನು ಏಪ್ರಿಲ್ ನಿಂದ ಜಿಲ್ಲೆಯಲ್ಲಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.ಮೊದಲ ಹಂತ -1 ಮನೆಪಟ್ಟಿ ಮತ್ತು ಮನೆ ಗಣತಿ (ಎಚ್‌ಎಲ್‌ಒ) ಏಪ್ರಿಲ್ 1ರಿಂದ 15ರವರೆಗೆ ಇದೇ ಮೊದಲ ಬಾರಿಗೆ ಸ್ವಯಂ ಗಣತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಸ್ವಯಂ ಗಣತಿ ಐಚ್ಛಿಕವಾಗಿರುತ್ತದೆ. ಕುಟುಂಬಗಳು ಮಾತ್ರ ಸ್ವಯಂ ಗಣತಿ ಮಾಡಬಹುದಾಗಿದೆ ಎಂದವರು…

Read More

ಕಳ್ಳತನ ಹಾಗೂ ಸುಲಿಗೆ ಪ್ರಕರಣ: 42 ಆರೋಪಿಗಳ ಬಂಧನ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 26 :ಜಿಲ್ಲೆಯ ಇಂಡಿ ಉಪವಿಭಾಗದ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 42 ಆರೋಪಿಗಳನ್ನು ಬಂಧಿಸಿ ಸುಮಾರು ₹1,20,04,750 ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣಗಳು ಸೇರಿದಂತೆ ವಿವಿಧ ಕಳವು ಮಾಡಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,ವಿಶೇಷ ತನಿಖಾ ತಂಡದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಒಟ್ಟು 20 ವಿವಿಧ ಸ್ವತ್ತಿನ ಪ್ರಕರಣಗಳನ್ನು…

Read More

ಶ್ರೀರಾಮನ ವೇಷಧಾರಿಯಾಗಿ ಅನುಶ್ರೀ-ಶ್ರೀನಿಧಿ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 26:ಅಯೋಧ್ಯೆಯ ರಾಜ ದಶರಥ ಮತ್ತು ರಾಣಿ ಕೌಸಲ್ಯೆಯ ಮಗನಾಗಿ ಶ್ರೀರಾಮನು ಜನಿಸಿದ ದಿನವನ್ನು ರಾಮನವಮಿಯನ್ನಾಗಿ ಆಚರಿಸಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ 1 ನೇ ವರ್ಗದ ಅವಳಿ ಸಹೋದರಿಯರಾದ ಅನುಶ್ರೀ-ಶ್ರೀನಿಧಿ ಬಂಡೆ ಅವರು ಶ್ರೀ ರಾಮನ ವೇಷಧಾರಿಗಳಾಗಿ ಗಮನ ಸೆಳೆದರು.ಶ್ರೀ ರಾಮ ನವಮಿಯು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಆಚರಿಸಲಾಗುವ ಭಗವಾನ್ ವಿಷ್ಣುವಿನ 7ನೇ ಅವತಾರವಾದ ಶ್ರೀರಾಮನ ಜನ್ಮದಿನವಾಗಿದೆ. ಇದು ಅಧರ್ಮದ ಮೇಲೆ ಧರ್ಮದ ವಿಜಯ, ದುಷ್ಟರ ಸಂಹಾರ, ಮತ್ತು…

Read More

ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ.25:ನಗರದ ಮರಾಠಿ ವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಸುವ‌ ನಿಟ್ಟಿನಲ್ಲಿ ಪರೀಕ್ಷಾ ಮಾರ್ಗಸೂಚಿಯನ್ವಯ ಕಾರ್ಯ ನಿರ್ವವಹಿಸುವಂತೆಯೂ, ಯಾವುದೇ ಸಮಸ್ಯೆ ಬಾರದ ರೀತಿಯಲ್ಲಿ ಅತ್ಯಂತ ಜಾಗೃತೆಯಿಂದ ಕಾರ್ಯ‌ ನಿರ್ವಹಿಸಿ ಸುಸೂತ್ರ‌ ಪರೀಕ್ಷೆ ನಡೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವಂತೆ ಪರೀಕ್ಷೆಯ ನಿಯೋಜಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಸಂದರ್ಭ ಪರೀಕ್ಷಾ ಕೇಂದ್ರದಲ್ಲಿ ಒದಗಿಸಿರುವ ಮೂಲಭೂತ ಸೌಲಭ್ಯ, ಭದ್ರತೆ, ಕುಡಿಯುವ ನೀರು, ಅಳವಡಿಸಿರುವ…

Read More

ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

ಸಪ್ತಸಾಗರ ವಾರ್ತೆ,ತಿಕೋಟಾ, ಮಾ. 25: ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ ತಾಲೂಕು ಪಂಚಾಯತಿ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಹಮ್ಮಿಕೊಂಡ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ ಮಾತನಾಡಿದರು.ಜೀವನದಲ್ಲಿ ಹೆಣ್ಣು, ಗಂಡು ಎಂದು ಭೇದಭಾವ ಮಾಡದೇ ಸಮಾನವಾಗಿ ಕಾಣಬೇಕು. ಹೆಣ್ಣನ್ನು ಕೀಳಾಗಿ ಎಂದೂ ಕಾಣಬಾರದು. ಹೆಣ್ಣಿಗೆ ಕೇವಲ ಅನುಕಂಪ ತೋರಿಸದೇ ಅವರಿಗೆ ಅವಕಾಶ ನೀಡಿದ್ದಲ್ಲಿ ಎಲ್ಲವನ್ನೂ ಮಾಡಿ ತೋರಿಸುವ ಶಕ್ತಿ ಅವರಲ್ಲಿ ಅಡಗಿದೆ. ಪ್ರಸ್ತುತ ದಿನಮಾನದಲ್ಲಿ…

Read More

ಪೆಟ್ರೋಲ್,ಡಿಸೇಲ್ ಕೊರತೆ ಸುಳ್ಳು ಸುದ್ದಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ – ಸಂದೀಪ್ ಪಾಟೀಲ‌ ಝಳಕಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 25:ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳ ಪರಿಣಾಮವಾಗಿ ಪೆಟ್ರೋಲ್ ಬಂಕ್‌ಗಳ ಮುಂದೆ ಜನರು ಪೆಟ್ರೋಲ್ ಪಡೆಯಲು ಮುಗಿಬಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ ಝಳಕಿ ಹೇಳಿದ್ದಾರೆ.ಭಾರತಕ್ಕೆ ಅಗತ್ಯವಿರುವ ಕಚ್ಚಾ ತೈಲ, ಅನಿಲ ಮತ್ತು ರಸಗೊಬ್ಬರಗಳು ಯುದ್ಧದ ಸವಾಲುಗಳ ನಡುವೆಯೂ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಮ್ಮ ಸರ್ಕಾರ ನಿರಂತರ ಶ್ರಮಿಸುತ್ತಿದೆ. ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ ಎಂದು ಸ್ವತಃ ಪ್ರಧಾನಿ ಶ್ರೀ…

Read More

ಅಲೆಮಾರಿ, ಅರೆ ಅಲೆಮಾರಿ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ.24:ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಿ,ಸರ್ಕಾರದ ಯೋಜನೆ ಅನುಷ್ಠಾನಗೊಳಿಸಿ ಅವರಿಗೆ ಸರ್ಕಾರ ನೀಡುವ ಸೌಲಭ್ಯ ಒದಗಿಸಿ ಎಂದು ಜಿಲ್ಲಾಧಿಕಾರಿ ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿಸಭಾಂಗಣದಲ್ಲಿ ಮಂಗಳವಾರ ‌ನಡೆದಕರ್ನಾಟಕ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಒಂದನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಮುದಾಯ‌ ಕೇಂದ್ರ, ಭೂ ಒಡೆತನ, ಅಂಗನವಾಡಿ ಕೇಂದ್ರ,…

Read More