ಅಕ್ಕಪಡೆ ಯೋಜನೆಗೆ ಸಂಚಾರಿ ವಾಹನಕ್ಕೆ ಚಾಲನೆ: ಮಹಿಳೆ–ಮಕ್ಕಳ ಸುರಕ್ಷತೆಗಾಗಿ ವಿನೂತನ ಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜ.14: ಮಹಿಳೆ ಮತ್ತು ಮಕ್ಕಳ ಸುರಕ್ಷತೆ, ಘನತೆ ಹಾಗೂ ಸಬಲೀಕರಣದ ಉದ್ದೇಶದಿಂದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಡಿ.22 ರಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ ಅವರು ಚಾಲನೆ ನೀಡಿದ್ದರು. ಈ ಸಂದರ್ಭದಲ್ಲಿ ಶಾಸಕರಾದ ವಿಠ್ಠಲ ಕಟಕಧೋಂಡ ಹಾಗೂ ಅಶೋಕ ಮನಗೂಳಿ, ಸಂಸದರಾದ ರಮೇಶ ಜಿಗಜಿಣಗಿ, ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಈ ಸಂದರ್ಭದಲ್ಲಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು…

Read More

ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಅರ್ಥಪೂರ್ಣ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ ಜ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಹಾಗೂ ಅತ್ಯಂತ ಅರ್ಥಪೂರ್ಣವಾಗಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಿಸಲಾಯಿತು.ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ,ಗೌರವ ಸಲ್ಲಿಸಿದರು. ಭವ್ಯ ಮೆರವಣಿಗೆ:ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಚಾಲನೆ ನೀಡಿದರು.ಭವ್ಯ ಮೆರವಣಿಗೆಯು ವಿವಿಧ ಕಲಾ…

Read More

ಜ.27 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ

ಸಪ್ತಸಾಗರ ವಾರ್ತೆ, ವಿಜಯಪುರ, ಜ.14: ಜನವರಿ 27ರಂದು ನಗರದ ದರ್ಬಾರ ಶಾಲೆಯ ಆವರಣದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತ ಕಂಪನಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಜಿಲ್ಲೆಯ ನೀರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸುವ ನೀಟ್ಟಿನಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಮೇಳವನ್ನು ಆಯೋಜಿಸಬೇಕೆಂದು ಜಿಲ್ಲಾ ಕೌಶಲ್ಯ ಸಮಿತಿಯ ಅಧ್ಯಕ್ಷ, ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಉದ್ಯೋಗ ಮೇಳದ ಆಯೋಜನೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಯುವನಿಧಿ ಸೌಲಭ್ಯ ಪಡೆಯುತ್ತಿರುವ…

Read More

ವೇದ ಅಕಾಡೆಮಿಯಲ್ಲಿ ವಿಜೃಂಭಣೆಯ ಮಕರ ಸಂಕ್ರಾಂತಿ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 14: ಭಾರತದ ಅನೇಕ ಹಬ್ಬಗಳಲ್ಲಿ ಮಕರ ಸಂಕ್ರಾಂತಿಯು ವಿಶೇಷ ಹಬ್ಬವೆನಿಸಿದೆ. ಚಳಿಗಾಲ ಮುಗಿದು ಬೇಸಿಗೆಯ ಮುನ್ಸೂಚನೆಯ ಹಬ್ಬವಾಗಿ ಋತುಗಳ ಬದಲಾವಣೆಯನ್ನು ಸೂಚಿಸುತ್ತದೆ. ಭಾರತದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರಿನಿಂದ ಕರೆದರೂ ಕರ್ನಾಟಕದಲ್ಲಿ ಮಕರ ಸಂಕ್ರಮಣ ಹಬ್ಬವೆಂದು ಪ್ರಸಿದ್ಧಿ ಪಡೆದಿದೆ. ರೈತರಿಗೆ ಇದು ಸುಗ್ಗಿಯ ಹಬ್ಬವೆನಿಸಿದೆ ಎಂದು ಮಕ್ಕಳನ್ನುದ್ದೇಶಿಸಿ ವೇದ ಅಕಾಡೆಮಿಯ ನಿರ್ದೇಶಕಿ ಶಿವಲೀಲಾ ಕೆಲೂರ ಅವರು ಹೇಳಿದರು.ನಗರದ ಹೊರವಲಯದ ಇಟ್ಟಂಗಿಹಾಳ ರಸ್ತೆಯಲ್ಲಿರುವ ವೇದ ಅಕಾಡೆಮಿಯಲ್ಲಿ ಮಕರ ಸಂಕ್ರಮಣ ಹಬ್ಬವನ್ನು ಮಕ್ಕಳೊಂದಿಗೆ…

Read More

ಮಕರ ಸಂಕ್ರಮಣ: ಹೋಮ ಹವನಪಲ್ಲಕ್ಕಿಯೊಂದಿಗೆ ನಂದಿ ಧ್ವಜಗಳ ಉತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 14: ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಕ್ರಮಣದ ಮಹೋತ್ಸವ ಅಂಗವಾಗಿ ಶ್ರೀ ಸಿದ್ಧೇಶ್ವರ ದೇವಸ್ಥಾನದ ಮುಂದೆ ಸಂಕ್ರಮಣ ಎಂದರೆ ಕೂಡಿ ಬಾಳುವುದು ಎಂದರ್ಥ ಇಂದು ಎಳ್ಳು ಬೆಲ್ಲ ವಿತರಣೆಯೊಂದಿಗೆ ಸ್ನೇಹ ಬಾಂಧವ್ಯ ಬೆಳೆಸಿಕೊಳ್ಳುವ ಶ್ರೀ ಸಿದ್ಧೇಶ್ವರ ಜಾತ್ರೆಯ ವಿಶಿಷ್ಠ ಕಾರ್ಯಕ್ರಮವಾದ “ಹೋಮ ಹವನ” ದೇವಾಲಯದ ಆವರಣದ ಮುಂದೆ ಶ್ರೀ ಸಿದ್ಧೇಶ್ವರ ಸಂಸ್ಥೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಇವರ ನೇತೃತ್ವದಲ್ಲಿ ಮಧ್ಯಾಹ್ನ ೧೨-೪೫ ಗಂಟೆಗೆ ಸಹಸ್ರಾರು ಭಕ್ತಾಧಿಗಳ ಮಧ್ಯೆ “ಹೋಮ…

Read More

ಕೇಂದ್ರೀಯ ಆಯುಷ್ ಪರೀಕ್ಷೆ ಪ್ರಾಧಿಕಾರದ ಸಲಹಾ ಸಮಿತಿ ಸದಸ್ಯರನ್ನಾಗಿ ಡಾ. ಅಶೋಕ ಪಾಟೀಲ ನಾಮನಿರ್ದೇಶನ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 14: ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿಎಸ್ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯಡಾ. ಅಶೋಕ ಪಾಟೀಲ ಅವರನ್ನು ಕೇಂದ್ರೀಯ ಆಯುಷ್ ಪರೀಕ್ಷೆ ಪ್ರಾಧಿಕಾರದ ಸಲಹಾ ಸಮಿತಿ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.ಭಾರತೀಯ ಚಿಕಿತ್ಸೆ ಪದ್ಧತಿಗಳ ಆಯೋಗ ಮತ್ತು ಆಯುಷ್ ಇಲಾಖೆ ಮೂರು ವರ್ಷಗಳ ಅವಧಿಗೆ ನಾಮ ನಿರ್ದೇಶನ ಮಾಡಲಾಗಿದೆ.ಡಾ. ಅಶೋಕ ಪಾಟೀಲ ಅವರು 19 ವರ್ಷಗಳ ಸುಧೀರ್ಘ ಅಧ್ಯಾಪಕ ವೃತ್ತಿಯಲ್ಲಿದ್ದು ಅನೇಕ ಸಂಶೋಧನೆಗಳನ್ನು ಕೈಗೊಂಡು 35 ಕ್ಕೂ ಹೆಚ್ಚು ಪ್ರಭಂದಗಳನ್ನು ಮಂಡಿಸಿದ್ದಾರೆ. ನಾನಾ ಆರೋಗ್ಯ ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಕರಾಗಿ…

Read More

ಜ.14ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ,ಜ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಜ.14ರಂದು ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 9-30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭಾವಚಿತ್ರ ಮೆರವಣಿಗೆಗೆ ಚಾಲನೆ ನಡೆಯಲಿದ್ದು, ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸುವರು.ಜವಳಿ,ಕಬ್ಬು ಅಭಿವೃದ್ಧಿ ಮತ್ತು…

Read More

ಶಿಕ್ಷಣ ರಂಗದ ದಿಗ್ಗಜ ಡಾ. ಎಸ್.ಎ.ಪುಣೇಕರ ಇನ್ನಿಲ್ಲ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 13: ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ಶಿಕ್ಷಣ ತಜ್ಞ, ಸಾಮಾಜಿಕ ಚಿಂತಕ, ಐತಿಹಾಸಿಕ ಕಳಕಳಿಯ ಮನೋಭಾವ ಹೊಂದಿದ ಡಾ. ಎಸ್.ಎ.ಪುಣೇಕರ ಮಂಗಳವಾರ ಮಧ್ಯಾಹ್ನ 1-30 ಗಂಟೆಗೆ ವಯೋ ಸಹಜತೆಯಿಂದ ನಿಧನರಾದರು. ಅವರಿಗೆ ೯೦ ವರ್ಷ ವಯಸ್ಸು ಆಗಿತ್ತು. ಅಖಂಡ ವಿಜಯಪುರ ಜಿಲ್ಲೆಯಲ್ಲಿ ಶೈಕ್ಷಣಿಕ ಬೆಳವಣಿಗೆಗೆ ಅವರ ಪಾತ್ರ ಗಮನರ್ಹವಾಗಿದೆ. ಶರಣರ, ಸೂಫಿಗಳ ನಾಡು ವಿಜಯಪುರದಲ್ಲಿ ಸಿಕ್ಯಾಬ್ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಹೆಮ್ಮರವಾಗಿ ಬೆಳೆಸಿದ ಕೀರ್ತಿ ಶಮಸುದ್ದೀನ್ ಅಬ್ದುಲ್ಲಾ ಪುಣೇಕರ ಅವರದು….

Read More

ಶಾಸಕ ಯತ್ನಾಳ ಅವರಿಂದ ಫಲಪುಷ್ಪ ಪ್ರದರ್ಶನ-ತೋಟಗಾರಿಕೆ ಅಭಿಯಾನ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ,ಜ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಹಾಗೂ ಜಿಲ್ಲಾ ಹಾಪ್‌ಕಾಮ್ಸ್ ಇವರ ಸಹಯೋಗದೊಂದಿಗೆ ಜನವರಿ 13ರಿಂದ 15ರವರೆಗೆ ನಗರದ ಸ್ಟೇಶನ್ ರಸ್ತೆಯಲ್ಲಿರುವ ಬಸವವನ ಆವರಣದಲ್ಲಿ ಹಮ್ಮಿಕೊಂಡ ಫಲಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನಕ್ಕೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಿ, ಎಲ್ಲ ಮಳಿಗೆಗಳನ್ನು ವೀಕ್ಷಣೆ ಮಾಡಿದರು.ಫಲಪುಷ್ಪ ಪ್ರದರ್ಶನ ನೋಡುಗರ ಕಣ್ಮನ ಸೆಳೆಯುತ್ತಿವೆ. ವಿವಿಧ ಹೂ-ಹಣ್ಣು ಹಾಗೂ ತರಕಾರಿಗಳಿಂದ ನಿರ್ಮಿಸಲಾದ ಅಪರೂಪದ…

Read More

ಸಂಕ್ರಮಣ ಜಾತ್ರೆ: ಅಕ್ಷತಾರ್ಪಣೆ-ಬೋಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 13: ನಗರದ ಆರಾಧ್ಯ ದೈವ ಶ್ರೀ ಸಿದ್ದೇಶ್ವರ ಸಂಕ್ರಮಣ ಜಾತ್ರಾ ಮಹೋತ್ಸವದ ೩ನೇ ದಿನವಾದ ಮಂಗಳವಾರ ವಿವಿಧ ಪುಷ್ಪಗಳಿಂದ ಅಲಂಕೃತ ಸಪ್ತ ನಂದಿಕೋಲುಗಳು, ಶ್ವೇತ ವಸ್ತ್ರಧಾರಿ ಭಕ್ತರು ಹಾಗೂ ಪಂಚ ಕಮಿಟಿ ಸದಸ್ಯರ ಮಧ್ಯ ಸಿದ್ಧರಾಮನ ಯೋಗ ದಂಡಕ್ಕೆ ಅಕ್ಷತಾರ್ಪಣೆ ಭೋಗಿ ಕಾರ್ಯಕ್ರಮವು ಶ್ರದ್ಧಾ-ಭಕ್ತಿ, ಸಂಭ್ರಮದಿಂದ ಜರುಗಿತು.ಸಿದ್ದೇಶ್ವರ ಜಾತ್ರೆಯಲ್ಲಿ ಅಕ್ಷತಾರ್ಪಣೆ ಭೋಗಿ ಕಾರ್ಯಕ್ರಮವು ತನ್ನದೆಯಾದ ವಿಶೇಷತೆ ಹೊಂದಿದೆ. ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಸಿದ್ಧರಾಮನ ಯೋಗ ದಂಡದೊಂದಿಗೆ ಕುಂಬಾರ ಕನ್ಯೆ ಗುಂಡಮ್ಮಳಿಗೆ…

Read More