ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 14: ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡುವ ಮೂಲಕ ಅವರ ಯಶಸ್ಸಿಗೆ ಸಹಾಯ ಮಾಡಬೇಕು ಎಂದು ಇನ್ನರ್ ವೀಲ್ ಕ್ಲಪ್ ಅಧ್ಯಕ್ಷೆ ಮತ್ತು ಅಂಜುಮನ್ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಉಜ್ವಲಾ ಎ. ಸರನಾಡಗೌಡ ಹೇಳಿದ್ದಾರೆ.ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಗುರುವಾರ ಸಬಲಾ – ಮಹಿಳಾ ಸಬಲೀಕರಣ ಘಟಕ ವತಿಯಿಂದ ಆಯೋಜಿಸಲಾದ ಅಂತಾರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ…

Read More

ಸಪ್ತಸಾಗರ ಸಂಪಾದಕ ರುದ್ರಪ್ಪ ಆಸಂಗಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಬೆಂಗಳೂರು, ಮಾ. 14:ಸಪ್ತಸಾಗರ ದಿನ ಪತ್ರಿಕೆ ಸಂಪಾದಕ ಹಾಗೂ ಸಂಜೆವಾಣಿ ಜಿಲ್ಲಾ ವರದಿಗಾರ ರುದ್ರಪ್ಪ ಆಸಂಗಿ ಸೇರಿದಂತೆ ರಾಜ್ಯದ 31 ಗಣ್ಯರಿಗೆ ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.ಶುಕ್ರವಾರ ಸಂಜೆ ನಡೆದ ವರ್ಣರಂಜಿತ ಸಮಾರಂಭದಲ್ಲಿ ವಿಜಯಪುರದ ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿ ಅವರು 4 ದಶಕಗಳ ಕಾಲ ಪತ್ರಿಕಾ ಕ್ಷೇತ್ರದಲ್ಲಿ ಸುದೀರ್ಘ ಸೇವೆಯನ್ನು ಸಲ್ಲಿಸಿರುವುದನ್ನು ಪರಿಗಣಿಸಿ ಮಾಧ್ಯಮ ಅಕಾಡೆಮಿಯ 2025ನೇ…

Read More

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 13:ಬದುಕೆಂಬ ಆಟದಲ್ಲಿ ಹಲವು ತಿರುವುಗಳಿದ್ದು, ಒಂದು ಕೆಟ್ಟ ಘಳಿಗೆಯಲ್ಲಿ ಅಂಟಿಕೊಂಡ ದುಶ್ಚಟ ಕ್ಷಣಿಕ ತೃಪ್ತಿ ನೀಡುತ್ತೆ ವಿನಃ ನಮ್ಮ ಬದುಕಿಗೆ ಸ್ಫೂರ್ತಿ ನೀಡಲ್ಲ. ಮಾದಕ ವ್ಯಸನಗಳಿಗೆ ಬಲಿಯಾಗದೇ ಇಂದಿನ ಯುವಕರು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದು ನಾಗಠಾಣದ ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಶುಕ್ರವಾರ ತಾಲೂಕಿನ ಜುಮನಾಳ ಗ್ರಾಮದ ಜಟ್ಟಿಂಗೇಶ್ವರ ಗುಡಿಯಲ್ಲಿ ವಿಜಯಪುರದ ದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯ ಮತ್ತು ಎನ್ ಎಸ್ ಎಸ್ ಘಟಕದ ಸಂಯುಕ್ತಾಶ್ರಯದಲ್ಲಿ ಜರುಗಿದ 2025-26…

Read More

ಮಹಾನಗರ ಪಾಲಿಕೆಯ ಆಸ್ತಿ ತೆರಿಗೆ ಶೇ.3ರಷ್ಟು ಹೆಚ್ಚಳ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.13: ಕರ್ನಾಟಕ ಪೌರನಿಗಮಗಳ ಅಧಿನಿಯಮಯನ್ವಯ ಸ್ವತ್ತಿನ ಮಾರ್ಗಸೂಚಿ ಮೌಲ್ಯದ ಪರಿಷ್ಕರಣೆಯಾಗದ ವರ್ಷದಲ್ಲಿ ಪ್ರತಿ ಹಣಕಾಸು ವರ್ಷಕ್ಕೆ ಶೇ. 3ರಿಂದ 5 ರಷ್ಟು ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲು ಅವಕಾಶ ಇರುವುದರಿಂದ 2026-27ನೇ ವರ್ಷಕ್ಕೆ ಅನ್ವಯವಾಗುವಂತೆ 01-4-2026ರಿಂದ 31-03-2027ರವರೆಗೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.ವಿಜಯಪುರ ಮಹಾನಗರ ಪಾಲಿಕೆಯ ಆಸ್ತಿ ತೆರಿಗೆಯನ್ನು ದಿ:01-04-2026ರಿಂದ ಜಾರಿಗೆ ಬರುವಂತೆ ವಾಸದ ಕಟ್ಟಡಗಳು, ವಾಣಿಜ್ಯ ಕಟ್ಟಡಗಳು, ಖಾಲಿ ನಿವೇಶನಗಳು ಹಾಗೂ ಕೈಗಾರಿಕಾ ಪ್ರದೇಶಕ್ಕೆ ಶೇ.3…

Read More

ಇಂಡಿ ಲಿಂಬಿಗೆ ವಿಶ್ವದೆಲ್ಲೆಡೆ ಒಮಾನ್ , ದುಬೈ , ಯುಕೆ , ಸೇರಿದಂತೆ ಇತರೆ ರಾಷ್ಟ್ರಗಳಿಗೆ ಬೇಡಿಕೆ :ಡಾ ಬಿ ಫಕ್ರುದ್ದೀನ್

ಸಪ್ತಸಾಗರ ವಾರ್ತೆ ಇಂಡಿ, ಮಾ. 12: ಇಂಡಿ ಲಿಂಬೆಗೆ ಜಿ ಐ ಟ್ಯಾಗ್ ಮಾನ್ಯತೆ ಪಡೆದ ಹಿನ್ನಲೆಯಲ್ಲಿ ವಿಶ್ವದೆಲ್ಲೆಡೆ ಬೇಡಿಕೆ ಹೆಚ್ಚಾಗಿದೆ ಎಂದು ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರು ಮತ್ತು ಯೋಜನಾ ಸಂಯೋಜಕರಾದ ಡಾ ಬಿ.ಫಕ್ರುದ್ದಿನ್ ಹೇಳಿದರು. ತಾಲ್ಲೂಕಿನ ತಡವಲಗಾ ಗ್ರಾಮದ ಜೋಡಗುಡಿಯ ಶ್ರೀ ಮರುಳಸಿದ್ದೇಶ್ವರ ಮಂಗಲ ಕಾರ್ಯಲಯ ಆವರಣದಲ್ಲಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟ ಹಾಗೂ ರಾಜ್ಯ 20 ಜಿಐ ಟ್ಯಾಗ್ ಹೊಂದಿರುವ ಬೆಳೆಗಳು ಹಾಗೂ ಇತರೆ ದೇಸಿ ತಳಿಗಳ ಬೀಜ ಬ್ಯಾಂಕ್ ಸ್ಥಾಪನೆ…

Read More

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಿಯು ಕಾಲೇಜುಗಳ ಸಂಘಗಳಿಂದ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 12:ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ಉಪನ್ಯಾಸಕರ ಸಂಘ ಹಾಗೂ ಬೋಧಕೇತರ ಸಂಘಗಳ ಪ್ರತಿನಿಧಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾ.12 ರಂದು ಜಿಲ್ಲಾಧಿಕಾರಿಗಳ ಮೂಲಕ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ಸಂಘಗಳ ಪ್ರಮುಖ ಬೇಡಿಕೆಗಳಲ್ಲಿ ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ವಹಿಸುವ ಕುರಿತು ಪ್ರಸ್ತಾಪಿತ ಸರ್ಕಾರದ ಕಡತ ಸಂಖ್ಯೆ EP 10 DGD…

Read More

ಗೃಹಬಳಕೆ ಗ್ಯಾಸ್ ಮಿತವಾಗಿ‌ ಬಳಸಿ‌:ಜಿಲ್ಲಾಧಿಕಾರಿ ಡಾ. ಆನಂದ‌ ಸಾರ್ವಜನಿಕರಿಗೆ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ,ಮಾ. 12:ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ (LPG) ಗ್ಯಾಸ್ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ. ಗೃಹ ಬಳಕೆ ಸಿಲಿಂಡರನ್ನು 25 ದಿನಗಳ ಬಳಿಕವೇ ಬುಕ್‌ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಹಾಗಾಗಿ ಗ್ರಾಹಕರು ಅಡುಗೆ ಅನಿಲವನ್ನು ಮಿತಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ ಅವರು ಹೇಳಿದರು.ಸಮರ್ಪಕ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಎಲ್‌ಪಿಜಿ ವಿತರಕರೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಲಾಗಿದ್ದು, ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರಿಗೆ…

Read More

ಪೌರ ಕಾರ್ಮಿಕರ ಹಸ್ತದಿಂದ “ಅಂಬೇಡ್ಕರ್ ಹಬ್ಬ – 2026” ಲಾಂಛನ ಬಿಡುಗಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 11 :ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಸಹಭಾಗಿ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ 135 ನೇ ಜಯಂತಿ ಪ್ರಯುಕ್ತ “ಅಂಬೇಡ್ಕರ್ ಹಬ್ಬ – 2026” ಕಾರ್ಯಕ್ರಮದ ಲಾಂಛನವನ್ನು ಪೌರ ಕಾರ್ಮಿಕರ ಹಸ್ತದಿಂದ ಬಿಡುಗಡೆ ಮಾಡಲಾಯಿತು.ನಗರದ ಬೆಂಗಳೂರು ರೆಸ್ಟಾರೆಂಟ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಂಬೇಡ್ಕರ್ ಹಬ್ಬ – 2026 ರ ಲಾಂಛನವನ್ನು ವಿಜಯಪುರ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಾದ ಲಕ್ಷ್ಮಿ ಹಿಟನಳ್ಳಿ, ಮಹಾದೇವಿ ಹಾದಿಮನಿ, ದಯಾನಂದ್ ಅಲಿಯಬಾದ…

Read More

ತಾಳಿಕೋಟೆ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ ರಿಷಿ ಆನಂದ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.11:ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ತಾಳಿಕೋಟೆ ತಾಲೂಕಿನ ಕೊಣ್ಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಡೇಕನೂರ ಗ್ರಾಮದ ಅಂಗನವಾಡಿಗೆ ಭೇಟಿ ನೀಡಿದ ಅವರು, ಅಂಗನವಾಡಿ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ, ಮಕ್ಕಳ ಕಲಿಕಾ ಸಾಮರ್ಥ್ಯ ಗುಣಮಟ್ಟ ಹೆಚ್ಚಿಸಿ ಕಲಿಕೆಗೆ ಆದ್ಯತೆ ನೀಡಬೇಕು. ಅಡುಗೆ ಕೊಠಡಿ ಸ್ವಚ್ಚತೆಗೆ ನಿರಂತರ ಶುಚಿತ್ವ ಕಾಪಾಡಬೇಕು. ಸಿಬ್ಬಂದಿ ಹಾಗೂ ಮಕ್ಕಳ ಹಾಜರಾತಿ,…

Read More

ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಿ: ಲತಾ ಬಿರಾದಾರ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 11:ಒತ್ತಡದ ಬದುಕಿನಲ್ಲಿ ನಿಮಗಾಗಿ ಸಮಯ ಕೊಡಿ. ನಿಮ್ಮ ಸಂಘದಿಂದ ಪ್ರತಿ ತಿಂಗಳಿನ ಒಂದು ದಿನ ಕಾರ್ಯಾಗಾರ ಆಯೋಜಿಸಿ ನಿಮ್ಮ ಮಕ್ಕಳನ್ನು ಎಲ್ಲ ದೃಷ್ಟಿಯಿಂದ ಸಂಸ್ಕಾರವಂತರನ್ನಾಗಿ ಮಾಡಿ ಎಂದು ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ (ರಿ) ರಾಜ್ಯಾಧ್ಯಕ್ಷೆ ಲತಾ ಬಿರಾದಾರ ಅವರು ಹೇಳಿದರು.ನಗರದ ಸಾಯಿ ರೆಸಿಡೆನ್ಸಿಯಲ್ಲಿ ಶ್ರೀ ಮಹಾಲಕ್ಷ್ಮಿ ಸ್ವಸಹಾಯ ಸಂಘ ಹಾಗೂ ಶ್ರೀ ಸರಸ್ವತಿ ಸ್ವಸಹಾಯ ಸಂಘಗಳ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು…

Read More