ನಂಜನಗೂಡು ಮಠದಲ್ಲಿ ಶ್ರೀ ಸುಯತೀಂದ್ರರ ಆರಾಧನೆ

ಸಪ್ತಸಾಗರ ವಾರ್ತೆ,ವಿಜಯಪುರ,ಮಾ. 8:ನವಮಂತ್ರಾಲಯದ ರೂವಾರಿ ಶ್ರೀ ಸುಯತೀಂದ್ರ ಶ್ರೀಪಾದಂಗಳವರ ಆರಾಧನೆಯನ್ನು ಭಾನುವಾರ ಇಲ್ಲಿಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅತ್ಯಂತ ಭಕ್ತಪೂರ್ವಕವಾಗಿ ಆಮಂತ್ರಿತ ಭಕ್ತರ ಸಮ್ಮುಖದಲ್ಲಿ ಆಚರಿಸ ಲಾಯಿತು.ಅದರಂಗವಾಗಿ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ, ಅಷ್ಟೋತ್ತರ ನಡೆದು, ಬಳಿಕ ವೃಂದಾವನಕ್ಕೆ ಪಂಚಾಮೃತ ಅಭಿಷೇಕ ಮಾಡ ಲಾಯಿತು. ಬಳಿಕ ಪ್ರಲ್ಹಾದರಾಜರಿಗೆ ಕನಕಾಭಿಷೇಕ ನಡೆದು, ಶ್ರೀ ಸುಯತೀಂದ್ರರ ಭಾವಚಿತ್ರವನ್ನಿಟ್ಟ ರಥೋತ್ಸವ ಜರುಗಿತು.2009ರಲ್ಲಿ ಪೀಠಾಧಿಕಾರಿಗಳ ಅವಧಿಯಲ್ಲಿ ಶತಮಾನ ಕಂಡರಿಯದ ಪ್ರವಾಹದಿಂದ ತಲ್ಲಣಿಸಿದ ಮಂತ್ರಾಲಯ ಪುಣ್ಯಕ್ಷೇತ್ರ ನಿರ್ಮಿಸಿದ ಪರಿಯಲ್ಲೆ ಶ್ರೀ ಸುಯತೀಂದ್ರತೀರ್ಥರು ತಾವು…

Read More

ಮಹಿಳೆ ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ತಡೆಗಟ್ಟಲು ಆಗ್ರಹಿಸಿ ಸಹಿ ಸಂಗ್ರಹ ಮತ್ತು ಸಾಹಿತ್ಯ ಮಾರಾಟ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 8: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಭಾನುವಾರ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವಿಜಯಪುರ ಜಿಲ್ಲಾ ಘಟಕವು ಮಹಿಳೆ ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ತಡೆಗಟ್ಟಲು ಆಗ್ರಹಿಸಿ ಸಹಿ ಸಂಗ್ರಹ ಮತ್ತು ಸಾಹಿತ್ಯ ಮಾರಾಟವನ್ನು ನಗರದ ಗಾಂಧಿ ವೃತದಲ್ಲಿ ಹಮ್ಮಿಕೊಳ್ಳಲಾಗಿತ್ತು.ಮಹಿಳೆಯರು ಸಾಕಷ್ಟು ಸಾಧನೆಗಳನ್ನು ಮಾಡಿದ್ದಾರೆ. ಜ್ಞಾನ ಪ್ರಪಂಚಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅದನ್ನೆಲ್ಲ ಲೆಕ್ಕಿಸದೆ ಬರಿ ಹೆಣ್ಣು ಭೋಗದ ವಸ್ತು ಎಂಬಂತೆ ಬಿತ್ತರಿಸಲಾಗುತ್ತಿದೆ. ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಊಳಿಗಮಾನ್ಯ…

Read More

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಲು ಡಿಸಿ ಆಶಯ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 8:ಜಿಲ್ಲಾ ಪಂಚಾಯತಿ, ಕೌಶಲ್ಯಾಭಿವೃದ್ಧಿ ಉದ್ಯಮಿಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ-2026 ಕ್ಕೆ ಜಿಲ್ಲಾಧಿಕಾರಿಗಳಾದ ಕೆ. ಆನಂದ ಅವರು ಚಾಲನೆ‌ ನೀಡಿದರು.ಸ್ವ-ಸಹಾಯ ಸಂಘದ ಮಹಿಳೆಯರು ಉತ್ಪಾದಿಸಿದ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಸ್ವ-ಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಹಲವಾರು ವಸ್ತುಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿ, ಪ್ರಶಂಸಿಸಿದರು….

Read More

ಮಹಿಳೆಯರು ಆರ್ಥಿಕವಾಗಿ‌‌ ಸಬಲರಾಗಬೇಕು- ಡಿಸಿ ಡಾ. ಆನಂದ‌ ಕೆ.ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 8:ಮಹಿಳೆಯರು ಸ್ತ್ರೀ‌ಶಕ್ತಿ ಮತ್ತು ಸ್ವಸಹಾಯ ಸಂಘಗಳಲ್ಲಿ‌ ಕ್ರಿಯಾಶೀಲರಾಗಿ ಆರ್ಥಿಕ ಸಬಲೀಕರಣ ಹೊಂದಬೇಕು ಎಂದು‌‌ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.‌ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಯೋಜನೆ, ಸರ್ಕಾರೇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿನ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದ‌ರು.ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಸಾಕಷ್ಟು ಯೋಜನೆ ಜಾರಿಗೊಳಿಸಿದೆ….

Read More

ಶ್ರೀಶೈಲಕ್ಕೆ ತೆರಳುತ್ತಿರುವ ನಂದಿ ಸೇನೆ ರಥಯಾತ್ರೆ ವಿಜಯಪುರಕ್ಕೆ ಆಗಮನ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 8:ಶ್ರೀ ಶ್ರೀಶೈಲ ಜಗದ್ಗುರುಗಳು ಅವರ ದಿವ್ಯ ಸಾನ್ನಿಧ್ಯದಲ್ಲಿ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರು ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಚಾಲನೆ ನೀಡಿದ ನಂದಿ ಸೇನೆ ರಥಯಾತ್ರೆ ವಿಜಯಪುರ ನಗರಕ್ಕೆ ಅಗಮಿಸಿತು. ಶ್ರೀರಾಮ ನವಮಿ ಉತ್ಸವ ಸಮಿತಿ , ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ನಗರಕ್ಕೆ ಸ್ವಾಗತಿಸಿ ಬೀಳ್ಕೊಡಲಾಯಿತು.ಸಮಾಜ ಸೇವಕರು ಹಾಗೂ ಶ್ರೀರಾಮ ನವಮಿ ಉತ್ಸವ ಸಮಿತಿ ಸಂಸ್ಥಾಪಕ…

Read More

ವಿಜಯಪುರದಲ್ಲಿ ನಾಳೆ ಭೀಮಗಾಯನ

ಸಪ್ತಸಾಗರ ವಾರ್ತೆ,ವಿಜಯಪುರ,ಮಾ.8:ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಮಾರ್ಚ್ 9ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಂಜೆ 4 ಗಂಟೆಗೆ ಭೀಮ ಗಾಯನ ಕಾರ್ಯಕ್ರಮ ನಡೆಯಲಿದೆ.ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆ, ಸಮಾನತೆಯ ಹೋರಾಟ, ಅಸ್ಪೃಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ನಡೆಯಲಿದೆ.ಸಮಾನತೆಯ ಸ್ವರ ಸಂಭ್ರಮ ಭೀಮನ ಆದರ್ಶಗಳನ್ನು ಸ್ವರಗಳಲ್ಲಿ ಜೀವಂತಗೊಳಿಸುವ ಜಾಗೃತಿ, ಆತ್ಮಗೌರವ ಮತ್ತು ಸಮಾನತೆಯ ಸಂಗೀತ ಕಾರ್ಯಕ್ರಮವೇ ಭೀಮ ಗಾಯನವಾಗಿದೆ.ಸಿದ್ಧಾರ್ಥ ಯುವ ಕ್ರೀಡಾ…

Read More

ಮಹಿಳೆಯರ ಹಕ್ಕು, ಸಾಧನೆ ಅರಿಯಲು ಪುಸ್ತಕಗಳು ಸಹಾಯಕಾರಿ: ಪ್ರೊ. ವಿಜಯಾ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 7: ಮಹಿಳೆಯರ ಸಾಧನೆಗಳು, ಅವರ ಹಕ್ಕುಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಲು ಇಂತಹ ಮಹಿಳಾ ಕೇಂದ್ರಿಕೃತ ಪುಸ್ತಕ ಪ್ರದರ್ಶನಗಳು ಸಹಾಯಕವಾಗುತ್ತವೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಮಹಿಳಾ ಅಧ್ಯಯನ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ವಿಶ್ವವಿದ್ಯಾನಿಲಯ ಗ್ರಂಥಾಲಯದ ಸಹಯೋಗದಲ್ಲಿ ಮಾರ್ಚ್ 7 ರಿಂದ ಮಾರ್ಚ್ 10 ರವರೆಗೆ ವಿಶ್ವವಿದ್ಯಾನಿಲಯ ಗ್ರಂಥಾಲಯ ಆವರಣದಲ್ಲಿ ವಿಶೇಷ ಪುಸ್ತಕ ಪ್ರದರ್ಶನವನ್ನು…

Read More

ಮಾ.14 ರಂದು ರಂಭಾಪುರಿ ಶಾಖಾ ಪೀಠದ ಭೂಮಿ ಪೂಜೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 7 :ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಪೀಠ ಖಾಸಾ ಶಾಖಾ ಬಾಳೆಹೊನ್ನೂರು ಬೃಹನ್ಮಠದ ಭೂಮಿ ಪೂಜೆಯನ್ನು ಮಾ.14 ರಂದು ಶನಿವಾರ ಸಂಜೆ 4.30 ಗಂಟೆಗೆ ಜರುಗಲಿದೆ ಎಂದು ಆಲಮೇಲದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ನಗರದ ಪ.ಗು.ಹಳಕಟ್ಟಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ರಂಭಾಪುರಿ ಪೀಠ ಹಾಗೂ ಶಾಲೆ ಕಾಲೇಜು ಸೇರಿದಂತೆ ಸೇವಾ ಮನೋಭಾವನೆಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಈ ನಾಡು ಬಹಳಷ್ಟು ಧಾರ್ಮಿಕ ಶ್ರೀಮಂತಿಕೆ ಹೊಂದಿದೆ. ರಂಭಾಪುರಿ ಪೀಠ ಪಂಚ ಪೀಠಗಳಲ್ಲಿ…

Read More

ವಸತಿ‌ ನಿಲಯಗಳಲ್ಲಿ ಮನೆ ವಾತಾವರಣ ನಿರ್ಮಿಸುತ್ತಿದ್ದೇವೆ: ಜಿಲ್ಲಾಧಿಕಾರಿ ಡಾ.‌ ಆನಂದ‌

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 7:ವಸತಿ ನಿಲಯಗಳು ಮಕ್ಕಳ‌ ಭವಿಷ್ಯ ರೂಪಿಸುವ ಕಲಿಕಾ ಕೇಂದ್ರಗಳಾಗಿದ್ದು, ಈ ಕೇಂದ್ರಗಳಲ್ಲಿ ಮಕ್ಕಳ‌ ಓದಿಗೆ‌ ಪೂರಕವಾಗಿ ಅವರ ಉತ್ತಮ‌ ವ್ಯಕ್ತಿತ್ವ ರೂಪಿಸಲು ಮನೆಯ ವಾತಾವರಣ ನಿರ್ಮಿಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಅವರು ಹೇಳಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ಸಮಾಜ‌ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಫರ್ಲ‌ ಹೊಟೇಲ್ ಹಿಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಆವರಣದಲ್ಲಿ ಶುಕ್ರವಾರ ಸಂಜೆ ನಡೆದ 2025-26ನೇ ಸಾಲಿನ‌ ವಸತಿ ನಿಲಯ…

Read More

ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ: ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.7:ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೂಡಲೇ ಪೂರ್ಣಗೊಳಿಸಬೇಕು ಎಂಸು ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.ಇಲ್ಲಿನ ಜಿಪಂ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ‌ ನಾನಾ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗ್ರಾಪಂಗಳಿಗೆ ಬಿಡುಗಡೆ ಮಾಡಿರುವ ಸಾಮಗ್ರಿ ವೆಚ್ಚದ ಅನುದಾನವನ್ನು ವಿಳಂಬ ಮಾಡದೇ ಇದೇ ಮಾ. 16ನೇ ತಾರೀಖಿನೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದರು.ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನೋಂದಾಯಿಸಲ್ಪಟ್ಟ…

Read More