ವಿದ್ಯಾರ್ಥಿ ಜೀವನವು ಬದುಕಿನ ಸುವರ್ಣಾವಧಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಕೊಲ್ಹಾರ, ಮಾ. 7: ವಿದ್ಯಾರ್ಥಿ ಜೀವನವು ಬದುಕಿನ ಸುವರ್ಣಾವಧಿ.ನಿಶ್ಚಿತಗುರಿ, ಅಚಲ ಶೃದ್ಧೆ, ಅವಿರತ ಪ್ರಯತ್ನ, ಸರಳವಾದ ಆಲೋಚನೆಗಳಿಂದ ಇಂದಿನ ಮಕ್ಕಳು ಸೃಜನಶೀಲ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು.ತಾಯಿ-ತಂದೆ-ಗುರುಗಳನ್ನು ಪ್ರೀತಿಯಿಂದ ಕಾಣುತ್ತಾ, ಅವರ ಮಾರ್ಗದರ್ಶನದಲ್ಲಿ ದೇಶದ ಶ್ರೇಷ್ಠ ವ್ಯಕ್ತಿಗಳಾಗಿ ರೂಪುಗೊಳ್ಳಿ ಎಂದು ನಾಗಠಾಣದ ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ತಾಲೂಕಿನ ಮಸೂತಿ ಗ್ರಾಮದ ಶ್ರೀ ಗುರು ಸಂಗನ ಬಸವೇಶ್ವರ ವಜ್ರ ಮಹೋತ್ಸವ ಪ್ರೌಢ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡ ಹತ್ತನೇ ವರ್ಗದ ವಿದ್ಯಾರ್ಥಿಗಳ ಶುಭ ಕೋರುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿ…

Read More

ಬಿಜೆಪಿಗೆ ಅಧಿಕಾರ ಶತಸಿದ್ಧ:ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6:ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಸಂಸದ ರಮೇಶ ಜಿಗಜಿಣಗಿ ಭವಿಷ್ಯ ನುಡಿದರು.ವಿಜಯಪುರ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಜನರ ಒಲವು ಬಿಜೆಪಿಯ ಮೇಲೆ ಎಂದಿಗೂ ಕಡಿಮೆಯಾಗಿಲ್ಲ, ಆದರೆ ಕಾಂಗ್ರೆಸ್‌ನವರು ಈ ಹಿಂದಿನ ಚುನಾವಣೆಯಲ್ಲಿ ಜನರನ್ನು ಗ್ಯಾರಂಟಿ ಹೆಸರಿನಲ್ಲಿ ಯಾಮಾರಿಸುವ ಪ್ರಯತ್ನ ಮಾಡಿದರು. ಆದರೆ ಈಗ ಗ್ಯಾರಂಟಿಗಳನ್ನೇ ಸರಿಯಾಗಿ ನೀಡುತ್ತಿಲ್ಲ. ಕೇವಲ ಖುರ್ಚಿ ಕಾದಾಟದಲ್ಲಿಯೇ…

Read More

ಇದು ಬಜೆಟ್ ಅಲ್ಲ, ಕೇವಲ ಘೋಷಣಾ ಪತ್ರ: ಉಮೇಶ ಟೀಕೆ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 6:ಒಳ ಮೀಸಲಾತಿ ವಿಷಯವಾಗಿ ಯಾವ ಸೂಕ್ತ ನಿರ್ಧಾರವನ್ನು ಪ್ರಸಕ್ತ ಬಜೆಟ್ ವೇಳೆಯಲ್ಲಿ ಕೈಗೊಳ್ಳದ ಮುಖ್ಯಮಂತ್ರಿಗಳು ದಲಿತ ವರ್ಗಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ, ಇದು ಬಜೆಟ್ ಆಗಿರದೇ ಕೇವಲ ಘೋಷಣಾ ಪತ್ರವಾಗಿದೆ ಎಂದು ಭಾರತೀಯ ಜನತಾ ಪಕ್ಷದ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಅಸಮಾಧಾನ ಹೊರಹಾಕಿದ್ದಾರೆ.ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಒಳ ಮೀಸಲಾತಿ ಜಾರಿಯ ಬಗ್ಗೆ ಯಾವ ನಿರ್ಧಾರವನ್ನು ಪ್ರಕಟಿಸದ ಮುಖ್ಯಮಂತ್ರಿಗಳು ದಲಿತ ವರ್ಗಕ್ಕೆ ಅನ್ಯಾಯ…

Read More

ಬಜೆಟ್: ವಿಜಯಪುರ ಮಹಾನಗರ ನಿರ್ಲಕ್ಷ್ಯ-ಎಂಎಲ್ಸಿ ಕೇಶವ ಪ್ರಸಾದ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 6: ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ವಿಜಯಪುರ ಮಹಾನಗರವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಬಹುನಿರೀಕ್ಷಿತ ವಿಮಾನ ನಿಲ್ದಾಣವನ್ನು ಯಾವಾಗ ಪ್ರಾರಂಭಮಾಡಲಾಗುತ್ತದೆ ಎಂಬುದರ ಬಗ್ಗೆ ಖಚಿತತೆ ಇಲ್ಲ ಎಂದು ವಿಧಾನ ಪರಿಷತ್ ಶಾಸಕ ಕೇಶವ ಪ್ರಸಾದ ಎಸ್. ಹೇಳಿದ್ದಾರೆ.ವಿಶೇಷವಾಗಿ ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ನಿರ್ದಿಷ್ಟವಾದ ಅನುದಾನವನ್ನು ಒದಗಿಸಿಲ್ಲ.•ಕಳೆದ ಬಜೆಟ್ ನಲ್ಲಿ ಘೋಷಿಸಲಾದ ಫುಡ್ಪಾರ್ಕ್ ಹಾಗೂ ದ್ರಾಕ್ಷಿ ಬೆಳೆಗಾರರ ಕೋಲ್ಡ್ ಸ್ಟೋರೇಜ್ ಪ್ರಗತಿಯಾಗಿಲ್ಲ, ಈ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪವಿಲ್ಲ.ಉತ್ತರ ಕರ್ನಾಟಕ ಭಾಗದ ಕ್ರೀಡೆಯ ಪ್ರೋತ್ಸಾಹಕ್ಕೆ…

Read More

ಅನ್ನದಾತನ ಬದುಕು ಬದಲಿಸುವ ಬಜೆಟ್-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಅನ್ನು ಸಚಿವ ಶಿವಾನಂದ ಪಾಟೀಲ ಸ್ವಾಗತಿಸಿದ್ದಾರೆ.ಮಾರುಕಟ್ಟೆ ಸಂಪರ್ಕಗಳನ್ನು ಸಮರ್ಪಕವಾಗಿ ಬಲಪಡಿಸುವುದೂ ಸೇರಿ ರೂಪಿಸಲಾಗುವ ಸಮಗ್ರ ಕೃಷಿ ವಿಸ್ತಾರ ಯೋಜನೆ, ಎಐ ತಂತ್ರಜ್ಞಾನದಿಂದ ರೈತ ಕರೆ ಕೇಂದ್ರ ಉನ್ನತಿ, ಎಪಿಎಂಸಿಗಳ ಸಂಪೂರ್ಣ ಡಿಜಿಟಲೀಕರಣ ಯೋಜನೆಗಳು ಕೃಷಿಕರ ಬದುಕಿನ ಬದಲಾವಣೆಗೆ ಪೂರಕವಾಗಲಿವೆ. ಕಳಪೆ ಬಿತ್ತನೆ ಬೀಜ, ಕೀಟನಾಶಕ ಪೂರೈಕೆ ತಡೆ ಅತ್ಯಗತ್ಯವಾಗಿದ್ದು, ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯಮಟ್ಟದ ಸಲಹಾ ಸಮಿತಿ ರಚನೆ…

Read More

ಬಾಬಾನಗರದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಬಜೆಟ್ ನಲ್ಲಿ ಅನುಮೋದನೆ: ತಿಕೋಟ ರೈತ ಮುಖಂಡರ ಹರ್ಷ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6:ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ತುಬಚಿ-ಬಬಲೇಶ್ವರ ಏತನೀರಾವರಿ ಯೋಜನೆಯಡಿ ನೀರನ್ನು ಸಂಗ್ರಹಿಸಲು ಬಾಬಾನಗರದಲ್ಲಿ ಆಣೆಕಟ್ಟು ಕಟ್ಟಲು ಇಂದಿನ ಬಜೆಟ್ ನಲ್ಲಿ ಸೇರ್ಪಡೆಯಾಗಿರುವುದು ವಿಜಯಪುರ ಜಿಲ್ಲೆಯ ಅತೀ ಎತ್ತರದ ಪ್ರದೇಶದ ರೈತರಿಗೆ ನಮ್ಮ ಸರ್ಕಾರ ಈ ಬಜೆಟ್ ನಲ್ಲಿ ವಿಶೇಷ ಕೊಡುಗೆ ನೀಡಿದೆ ಎಂದು ತಿಕೋಟಾ ತಾಲೂಕಿನ ರೈತ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.ರೈತ ಮುಖಂಡರಾದ ಸೋಮನಾಥ ಬಾಗಲಕೋಟ, ಸಿದ್ದು ಗೌಡನವರ, ಮಧು ಸಾಹುಕಾರ ಜಾಧವ, ಎ.ಎಂ.ಪಾಟೀಲ ಬಿಜ್ಜರಗಿ, ಮಲ್ಲಿಕಾರ್ಜುನ ಲೋಣಿ, ಎಂ.ಎಸ್.ರುದ್ರಗೌಡರ, ಮಧುಕರ ಜಾಧವ,…

Read More

ಇಂಡಿ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6:ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿದ ಆರೋಪದ ಹಿನ್ನಲೆಯಲ್ಲಿ ಜಿಲ್ಲೆಯ ಇಂಡಿಯ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ 4.60 ಕೋಟಿ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.ಇಂಡಿ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಪ್ರಕಾಶ ಈರಪ್ಪ ಗೊಡಬೋಳೆ ಅವರು ಅಕ್ರಮ ಆಸ್ತಿ ಗಳಿಸಿರುವುದು ದಾಳಿ ವೇಳೆ ಬೆಳಕಿಗೆ ಬಂದಿದೆ.ಇಂಡಿ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಗೋಡಬೊಳೆ ಅವರು ಆದಾಯಕ್ಕಿಂತ ಹೆಚ್ಚು ಅಕ್ರಮವಾಗಿ ಆಸ್ತಿ…

Read More

ಅಕ್ರಮ ಅಕ್ಕಿ ಸಾಗಾಟ:ಆಹಾರ ಇಲಾಖೆ ದಾಳಿ, ಅಕ್ಕಿ ವಶ

ಸಪ್ತಸಾಗರ ವಾರ್ತೆ , ವಿಜಯಪುರ,ಮಾ 6:ನಗರದ ಆರ್ ಎನ್ಎಸ್ ಶೋ ರೂಮ್ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ,ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.ಆರ್ ಎನ್ಎಸ್ ಶೋ ರೂಮ್ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, 35,060 ಕೆಜಿ ಅಕ್ಕಿ‌ ಹಾಗೂ ಲಾರಿ ವಶಕ್ಕೆ ಪಡೆದು ಟಿ.ರಾಜು ಎಂಬುವವರ ಮೇಲೆ ಜಲ ನಗರ…

Read More

ಕೃ.ಮೇ.ಯೋಜನೆಯ ಸಂತ್ರಸ್ತರಿಗೆ ನ್ಯಾಯ ಕಲ್ಪಿಸಿ: ನಿರಾಣಿ

ಸಪ್ತಸಾಗರ ವಾರ್ತೆ, ವಿಜಯಪುರ,ಮಾ.5:ವಿಜಯಪುರ-ಬಾಗಲಕೋಟೆ ಉಭಯ ಜಿಲ್ಲೆಗಳಲ್ಲಿ 2023 ರ ವಿಧಾನಸಭಾ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಂದುವರೆಸುವುದಾಗಿ ಹಾಗೂ ಸಂತ್ರಸ್ತರ ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿಯೂ ಕಾಂಗ್ರೆಸ್ ನಾಯಕರು ನೀರಾವರಿ ಯೋಜನೆಗೆ ಪ್ರತಿ ವರ್ಷ ರೂ 40,000 ಕೋಟಿಯಂತೆ ಮುಂದಿನ 5 ವರ್ಷಗಳ ಅವಧಿಯಲ್ಲಿ ಎರಡು ಲಕ್ಷ ಕೋಟಿ ಹಣ ಖರ್ಚು ಮಾಡಿ ನೀರಾವರಿ ಯೋಜನೆಯನ್ನು ಪೂರ್ತಿಮಾಡುವುದಾಗಿಯೂ ವಾಗ್ದಾನ ಮಾಡಿದ್ದರು. ಆದರೆ ಕಳೆದ 3 ವರ್ಷದಲ್ಲಿ ಯು.ಕೆ.ಪಿಗೆ…

Read More

ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಸಪ್ತಸಾಗರ ವಾರ್ತೆ,ಬೆಂಗಳೂರು, ಮಾ 5: ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ.17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ.ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ.ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಿನಾಂಕ…

Read More