ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು – ವಿಜಯಪುರ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ
ಸಪ್ತಸಾಗರ ವಾರ್ತೆ, ವಿಜಯಪುರ,ಮಾ. 2:ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ. ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ಮುಚ್ಚಲಾಗಿದೆ.ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ…


