ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾವು
ಸಪ್ತಸಾಗರ ವಾರ್ತೆ,ವಿಜಯಪುರ, ಅ. 4:ಬೆಳಗಿನ ಜಾವ ವಾಕಿಂಗ್ಗೆ ತೆರಳಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ನಗರದ ಹೊರವಲಯದ ಚಿದಂಬರ ಬಡಾವಣೆಯ ರಸ್ತೆಯಲ್ಲಿ ಭಾನುವಾರ ನಡೆದಿದೆ.ಮೃತರನ್ನು ರಾಜಶೇಖರ ಬಿರಾದಾರ (50) ಎಂದು ಗುರುತಿಸಲಾಗಿದೆ. ಬೆಳಿಗ್ಗೆ ವಾಕಿಂಗ್ಗೆ ತೆರಳಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಷಯ ತಿಳಿದು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ…


