ಬೆಳೆ ವಿಮೆ: 22 ಜನರಿಗೆ 26,41,676 ರೂ. ವಂಚನೆ, ಇಬ್ಬರು ವಂಚಕರ ವಿರುದ್ದ ದೂರು ದಾಖಲು

ಸಪ್ತಸಾಗರ ವಾರ್ತೆ,ವಿಜಯಪುರ,ಫೆ.25: ತೊಗರಿ ಬೆಳೆ ವಿಮೆ ಕೊಡಿಸುವುದಾಗಿ ರೈತರಿಗೆ ನಂಬಿಸಿ ನಕಲಿ ಎಫ್ ಐಡಿ ಮಾಡಿಸಿ 22 ಜನರಿಗೆ 26,41,676 ರೂ ವಂಚಿಸಿದ ಇಬ್ಬರು ಆರೋಪಿಗಳ ವಿರುದ್ಧ ಓರಿಯಂಟಲ್ ವಿಮಾ ಕಂಪನಿಯವರು ದೇವರಹಿಪ್ಪರಗಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚೌಡಾಪುರ ಗ್ರಾಮದ ಅಂಜಲಿ ಕುಮಾರಿ ಎಮ್. ಹಾಗೂ ದೇವರಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮದ ಶಿವರಾಜ್ ಸಂಗನಗೌಡ ಅಮರಖೇಡ ಆರೋಪಿಗಳು.ಈ ಆರೋಪಿಗಳು ಬೆಳೆ ವಿಮೆ ಕೊಡಿಸುವುದಾಗಿ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ವರ್ಕನಹಳ್ಳಿ ಮತ್ತು ಕೋರವಾರ ಗ್ರಾಮದ…

Read More

ಕಬ್ಬು ಬೆಳೆಗಾರರಿಗೆ 300 ಕೋಟಿ ರೂ. ಬಿಡುಗಡೆ: ಪ್ರತಿ ಟನ್‌ಗೆ ಸರ್ಕಾರದಿಂದ 50 ರೂ. ನೆರವು- ಸಕ್ಕರೆ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ,ಬೆಂಗಳೂರು, ಫೆ. 25: ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್‌ಗೆ 50 ರೂ.ಗಳ ಆರ್ಥಿಕ ನೆರವಿನ ಮೊತ್ತ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಕಳೆದ ನವಂಬರ್‌ 8ರಂದು ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ…

Read More

ಕಾನೂನು ಸಲಹೆಗಾರ ನೇಮಕಾತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 25:ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ, ವ್ಯಾಜ್ಯ ಮತ್ತು ಇತರೆ ವ್ಯಾಜ್ಯಗಳಲ್ಲಿ ಕಾನೂನು ಸಲಹೆ ನೀಡುವಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾನೂನು ಸಲಹೆಗಾರರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ತಿಳಿಸಿದ್ದಾರೆ.ವಿವಿಧ ನ್ಯಾಯಾಲಯ ಹಾಗೂ ಇತರ ಪ್ರಕರಣಗಳಲ್ಲಿ ಕಾನೂನು ಸಲಹೆ ನೀಡಲು ಜಿಲ್ಲಾಧಿಕಾರಿ ಕಚೇರಿ ಕಾನೂನು ಕೋಶಕ್ಕೆ ಓರ್ವ ಕಾನೂನು ಪದವಿ ಹೊಂದಿ (ಎಲ್.ಎಲ್.ಬಿ) ನಿವೃತ್ತರಾಗಿರುವ ಸಿವಿಲ್ ನ್ಯಾಯಾಧೀಶರನ್ನು,ಕಂದಾಯ ಇಲಾಖೆಯ ನಿವೃತ್ತಿ ಹೊಂದಿರುವ ವಿಶೇಷ ಜಿಲ್ಲಾಧಿಕಾರಿ,ನಿವೃತ್ತಿ ಹೊಂದಿರುವ ತಹಶೀಲ್ದಾರ, ನಿವೃತ್ತರಾಗಿರುವ ಉಪತಹಶೀಲ್ದಾರರನ್ನು…

Read More

ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕ್ರಮವಹಿಸಿ: ಜಿಪಂ ಸಿಇಒ ರಿಷಿ ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಫೆ. 24:ಮುಂಬರುವ ದಿನಗಳಲ್ಲಿ ನಡೆಯುವ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಫಲಿತಾಂಶ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಪಂ‌ ಸಿಇಒ ರಿಷಿ ಆನಂದ ಅಧಿಕಾರಿಗಳಿಗೆ ಸೂಚಿಸಿದರು.‌ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣಾ ಕ್ರಮಗಳ ಕುರಿತು ನಗರದ ಜಿಪಂ‌ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.‌ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಶಿಕ್ಷಕರು ಸಮನ್ವಯ ಸಾಧಿಸಿ ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯಲು ವಿನೂತನ ಚಟುವಟಿಕೆಗಳನ್ನು ನಡೆಸಬೇಕು….

Read More

ಓದು ಬರಹ ಜತೆ ಸೃಜನಶೀಲ ಅಭಿವ್ಯಕ್ತಿಗೆ ಆದ್ಯತೆ ನೀಡಿ- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಫೆ. 24: ಮಕ್ಕಳು ಓದು ಬರಹದ ಜೊತೆಗೆ ಸೃಜನಶೀಲ ಅಭಿವ್ಯಕ್ತಿಗೆ ಆದ್ಯತೆ ನೀಡಬೇಕು. ಶಾಲಾ ಚಟುವಟಿಕೆಗಳು ಮಕ್ಕಳ ಸವಾಂಗೀಣ ವಿಕಾಸಕ್ಕೆ ಪೂರಕವಾಗಿದ್ದು, ಮಕ್ಕಳು ಅವುಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಮಂಗಳವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಡಿಎಡ್ ಪ್ರಶಿಕ್ಷಣಾರ್ಥಿಗಳ ಒಂದು ತಿಂಗಳ ತರಬೇತಿ ಸಮಾರೋಪ ಸಮಾರಂಭವನ್ನು ಉದ್ಧೇಶಿಸಿ ಅವರು ಮಾತನಾಡಿದರು.ಅಕ್ಷರಾಭ್ಯಾಸ ಜತೆಗೆ ಮಕ್ಕಳಿಗೆ ಸಂಸ್ಕಾರ ಕೊಡುವುದು ಸಹ ಒಂದು ಶಿಕ್ಷಣ. ಮಕ್ಕಳಿಗೆ ಶಿಕ್ಷಣದ…

Read More

ಹೂಗಾರಂತಹ ವ್ಯಕ್ತಿಯಿಂದ ಬಿಜೆಪಿ ಪಾಠ ಕಲಿಯಬೇಕಿಲ್ಲ: ಆನಂದ ಮುಚ್ಚಂಡಿ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 22:ಪಕ್ಷ ನಿಷ್ಠೆ ಬದಿಗೊತ್ತಿ ವ್ಯಕ್ತಿನಿಷ್ಠೆ ತೋರಿ ಭಾರತೀಯ ಜನತಾ ಪಕ್ಷ ತೊರೆದಿರುವ ಶಂಕರ ಹೂಗಾರ ಅವರಿಂದ ಬಿಜೆಪಿ ಪಾಠ ಕಲಿಯಬೇಕಿಲ್ಲ. ನಮ್ಮ ಪಕ್ಷದ ಆಂತರಿಕ ವಿಷಯಗಳ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ನಿಮಗಿಲ್ಲ, ಪಕ್ಷದಲ್ಲಿ ಯಾವ ಗೊಂದಲಗಳೂ ಇಲ್ಲ ಎಂದು ಬಿಜೆಪಿ ನಗರ ಯುವ ಮೋರ್ಚಾ ಅಧ್ಯಕ್ಷ ಆನಂದ ಮುಚ್ಚಂಡಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿ ಬಿಜೆಪಿಯಿಂದ ಹೊರಗೆ ಹೋಗಿರುವ ಶಂಕರ ಹೂಗಾರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆನಂದ…

Read More

ವಿಲಾಸಕುಮಾರ, ಮೆಹಬೂಬ್ ಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 22:ಮಹಾರಾಷ್ಟ್ರ ರಾಜ್ಯದ ನಾಗಪುರ ಪಟ್ಟಣದಲ್ಲಿ ಶನಿವಾರ SAMNA ಸ್ಮಾಲ್ ಅ್ಯಂಡ್ ಮಿಡಿಯಂ ಪತ್ರಿಕಾ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಸಮಾರಂಭದಲ್ಲಿ ಹೆಜ್ಜೆ ಗುರ್ತು ಪತ್ರಿಕೆ ಸಂಪಾದಕ ವಿಲಾಸಕುಮಾರ ಸಿಂಧೆ ಹಾಗೂ ಡಿಪಾರ್ಟಮೆಂಟ್ ಎಕ್ಸಪ್ರೆಸ್ ದೈನಿಕ ಸಂಪಾದಕ ಮೆಹಬೂಬ್ ಮಾಲಬೊಡಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಾಯಿತು.ಪತ್ರಿಕೋದ್ಯಮ ಕ್ಷೇತ್ರದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ, ಸಮಾಜದ ಏಕೀಕರಣ ಮತ್ತು ಸಾಮಾಜಿಕ ಸೌಹಾರ್ದತೆಯನ್ನು ಬಲಪಡಿಸುವಲ್ಲಿ ಅವರು ಸಲ್ಲಿಸಿದ ಅಮೂಲ್ಯ ಕೊಡುಗೆಗೆ ಈ ಪ್ರಶಸ್ತಿ ನೀಡಲಾಯಿತು. ವಿವಿಧ…

Read More

ಕಡಲೆ ಬೆಳೆಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳಿ: ಡಾ. ಬೆಳ್ಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 22 :ರೈತರು ಕಡಲೆಯಲ್ಲಿ ಅಧಿಕ ಇಳುವರಿ ಪಡೆಯಲು ಆಧುನಿಕ ಕೃಷಿ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳಬೇಕೆಂದು ನಿವೃತ್ತ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.ಭಾನುವಾರ ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದ ಪ್ರಗತಿಪರ ರೈತ ಸಾರವಾಡ ಇವರ ಕ್ಷೇತ್ರದಲ್ಲಿ ಕೃಷಿ ಇಲಾಖೆಯಿಂದ 2025- 26 ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿಯಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆ ಬೆಳೆಯ ಕ್ಷೇತ್ರೋತ್ಸವ ಉದ್ಘಾಟಿಸಿ ಮಾತನಾಡಿದರು.ರೈತರು ಕಡಲೆ ಬೆಳೆಗೆ ಅಧಿಕ ಇಳುವರಿ ಪಡೆಯಲು…

Read More

ಸಚಿವ ಶಿವಾನಂದ ಪಾಟೀಲರಿಗೆ ಮಾತೃ ವಿಯೋಗ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 22:ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ತಾಯಿ ಗಂಗಾಬಾಯಿ ಸಿದ್ಧರಾಮಪ್ಪ ಪಾಟೀಲ (84) ಅವರು ವಯೋಸಹಜವಾಗಿ ಭಾನುವಾರ ಬೆಳಿಗ್ಗೆ ನಿಧರಾಗಿದ್ದಾರೆ.ಮೃತರಿಗೆ ಮಕ್ಕಳಾದ ಮಹಾದೇವಿ ಪಾಟೀಲ, ಶಿವಶರಣಗೌಡ ಪಾಟೀಲ, ಶಿವಾನಂದ ಪಾಟೀಲ ಹಾಗೂ ವಿಜುಗೌಡ ಪಾಟೀಲ ಸೇರಿದಂತೆ ಮೊಮ್ಮಕ್ಕಳು ಹಾಗೂ ಅಪಾರ ಬಂಧು, ಬಳಗವಿದೆ.ಮೃತರ ಅಂತ್ಯ ಕ್ರಿಯೆ ಭಾನುವಾರ ಸಂಜೆ 4-30 ಗಂಟೆಗೆ ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿರುವ ತೋಟದಲ್ಲಿ ನೆರವೇರಲಿದೆ.

Read More

ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಉದ್ಧಟತನ: ಕಾರಜೋಳ ಆಕ್ರೋಶ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 21:ಅತ್ಯಂತ ಮಹತ್ವದ ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ಅಸಂಬದ್ಧ ರೀತಿಯಲ್ಲಿ ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ ಹಾಗೂ ದೇಶದ್ರೋಹದ ಕೃತ್ಯವಾಗಿದೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಭಾರತೀಯ ಭವ್ಯ ಜ್ಞಾನ ಪರಂಪರೆ ಹಾಗೂ ಘನತೆಗೆ ಕುಂದು ತರುವ ಕೆಲಸ. ಇದು ಕೇವಲ ರಾಜಕೀಯ ಪ್ರತಿಭಟನೆಯಲ್ಲ. ಅದು ವ್ಯವಸ್ಥಿತವಾಗಿ ನಡೆದ ರಾಷ್ಟೀಯ ಅವಮಾನ ಎಂದು ಕಾರಜೋಳ…

Read More