ಕರ್ನಾಟಕ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಸಿಂದಗಿ ಡಿ. 16: ಬೆಳಗಾವಿಯ ಸುವರ್ಣ ಸೌಧದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಮಂಗಳವಾರ ಹಮ್ಮಿಕೊಂಡಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಅಕಾಡೆಮಿ ನೀಡುವ 2022–23 ನೇ ಸಾಲಿನ ‘ಮಕ್ಕಳ ಚಂದಿರ’, ಪ್ರಶಸ್ತಿಯನ್ನು ಸಿಂದಗಿ ಪಟ್ಟಣದ ಮಕ್ಕಳ ಸಾಹಿತಿಗಳಾದ ಹ.ಮ. ಪೂಜರ, ಎಸ್.ಎಸ್. ಸಾತಿಹಳ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಪ್ರಶಸ್ತಿ ನೀಡಿ ಪುರಸ್ಕಾರ ಮಾಡಿದರು. ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹಾಗೂ ಇಲಾಖೆ ಅಧಿಕಾರಿಗಳು ಇದ್ದರು. ಮಕ್ಕಳ…

Read More

ಸ್ಟಾಪ್ ಸ್ಕೇಟಿಂಗ್ ಮ್ಯಾರಾಥಾನ್

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 16: 79ನೇ ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ಮಾಮ್ಸ ಸ್ಕೆಟ್ ಅಕಾಡೆಮಿ ವತಿಯಿಂದ ಆಲ್ ಇಂಡಿಯಾ ಸ್ಕೇಟಿಂಗ್ ತರಬೇತಿದಾರರ ಸಂಘಟನೆ ಆಯೋಜಿಸಿದ್ದ 79 ನಿಮಿಷಗಳ ನಿರಂತರ ಸ್ಟಾಪ್ ಸ್ಕೇಟಿಂಗ್ ಮ್ಯಾರಾಥಾನಲ್ಲಿ ನಗರದ ಪ್ರತಿಷ್ಠಿತ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ ನಿರ್ಮಿಸಿದ್ದಾರೆ.ವಿಜಯಪುರದ ನಗರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ದೇಶದ 22 ನಾನಾ ನಗರಗಳಲ್ಲಿ 572 ವಿದ್ಯಾರ್ಥಿಗಳು ವಿಶ್ವದಾಖಲೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು….

Read More

ಜಿಲ್ಲಾಧಿಕಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 16:ಕಿಡಿಗೇಡಿಗಳು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಮೇಲ್ ಕಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲ ಹೊತ್ತು ಆತಂಕಕ್ಕೀಡಾಗಿದ್ದರು.ಯಾರೋ ಕಿಡಿಗೇಡಿಗಳು ಜಿಲ್ಲಾಧಿಕಾರಿಗಳ ಕಚೇರಿ ಮೇಲ್ ಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಮೇಲ್ ಕಳಿಸಿದ್ದರು.ಈ ವಿಷಯ ಜಿಲ್ಲಾಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆಯೇ ಪೊಲೀಸರಿಗೆ ತಕ್ಷಣ ಸುದ್ದಿ ಮುಟ್ಟಿಸಲಾಯಿತು. ವಿಳಂಬ ಮಾಡದೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನೋಡು ನೋಡುತ್ತಿದ್ದಂತೆಯೇ ಬಾಂಬ್ ನಿಗ್ರಹದಳ ಶ್ವಾನದಳದ ಜೊತೆಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ…

Read More

ನೀರಿನ ಲಭ್ಯತೆ ಆಧಾರದ ಮೇಲೆ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಎರಡನೇ ಹಂತ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಳಗಾವಿ, ಡಿ. 16:ನೀರಿನ ಲಭ್ಯತೆ ಆಧಾರದ ಮೇಲೆ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಎರಡನೇ ಹಂತ ಜಾರಿಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಶಾಸಕ ವಿಠಲ ಕಟಕದೊಂಡ ಅವರ ಪ್ರಶ್ನೆಗೆ ಉತ್ತರಿಸಿದರು.ಹೊರ್ತಿ ರೇವಣಸಿದ್ದೇಶ್ವರ ಯೋಜನೆಯ ಎರಡನೇ ಹಂತವನ್ನು ಯಾವಾಗ ಪ್ರಾರಂಭ ಮಾಡುತ್ತೀರಿ ಎಂಬ ವಿಠಲ ಪ್ರಶ್ನೆಗೆ, ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ‌ ಯೋಜನೆಯ ಎರಡನೇ ಹಂತದ ಅನುಷ್ಠಾನಕ್ಕೆ ನೀರಿನ ಲಭ್ಯತೆ ನೋಡಬೇಕಿದೆ. ನೀರಿಲ್ಲದೇ…

Read More

ದೆಹಲಿ ಪೊಲೀಸ್ ನೋಟೀಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ ದೆಹಲಿ, ಡಿ.16:“ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡುವ ಬಗ್ಗೆ ಕೇಳಿದಾಗ, “ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ…

Read More

ಶಾಸಕ ಯತ್ನಾಳ ಜನ್ಮದಿನ: ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು

ಸಪ್ತ ಸಾಗರ ವಾರ್ತೆ ವಿಜಯಪುರ, ಡಿ. 15:ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಜನ್ಮ ದಿನದ ಅಂಗವಾಗಿ ಶನಿವಾರ ನಗರದ ಆರಾಧ್ಯದೈವ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬೆಂಗಳೂರಿನ ಆರ್.ವಿ.ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಂಜನಿಯರಿಂಗ್ ವಿದ್ಯಾರ್ಥಿಗೆ ರೂ. 50,000 ಆರ್ಥಿಕ ನೆರವು ನೀಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಯತ್ನಾಳ ಹುಟ್ಟು ಹಬ್ಬ ಆಚರಿಸಲಾಯಿತು. ಬೆಂಗಳೂರಿನ ಆರ್ ವಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ತಂದೆ ಇಲ್ಲದ ಬಡ ಯುವಕ ಗಿರೀಶ್ ಗೌಡರ ಎಂಬಾತನ ಕಾಲೇಜು…

Read More

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣಗಳು ಮತ್ತು ಗಳಿಕೆಯಲ್ಲಿ ಗಮನಾರ್ಹ ದಾಖಲೆ

ಸಪ್ತ ಸಾಗರ ವಾರ್ತೆ ಹುಬ್ಬಳ್ಳಿ, ಡಿ. 15:ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಟಿಕೆಟ್ ರಹಿತ ಮತ್ತು ಅಕ್ರಮ ಪ್ರಯಾಣ ಪ್ರಕರಣಗಳು ಗಣನೀಯವಾಗಿ ಪತ್ತೆಯಾಗಿದ್ದು, ರೈಲ್ವೆಗೆ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ.2025-26ರ ಪ್ರಸಕ್ತ ಆರ್ಥಿಕ ವರ್ಷದ ನವೆಂಬರ್ ತಿಂಗಳಿನಲ್ಲಿ (2025) ಒಟ್ಟು 67,000 ಟಿಕೆಟ್ ತಪಾಸಣಾ ಪ್ರಕರಣಗಳನ್ನು ನೈಋತ್ಯ ರೈಲ್ವೆ ದಾಖಲಿಸಿದ್ದು, ಇದರಿಂದ ಬರೋಬ್ಬರಿ 5.36 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಕಳೆದ ವರ್ಷದ…

Read More

ಕಲಿತ ಸರ್ಕಾರಿ ಶಾಲೆಗೆ ಅಪರ ಜಿಲ್ಲಾಧಿಕಾರಿ ₹ 50 ಸಾವಿರ ದೇಣಿಗೆ

ಸಪ್ತಸಾಗರ ವಾರ್ತೆ ಬಬಲೇಶ್ವರ, ಡಿ. 15: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ತಾವು ಕಲಿತ ಬಬಲೇಶ್ವರ ತಾಲ್ಲೂಕಿನ ದೇವರಗೆಣ್ಣೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭಾನುವಾರ ₹ 50 ಸಾವಿರ ದೇಣಿಗೆ ಚೆಕ್ ನೀಡಿದ್ದಾರೆ.ಶಾಲೆಯ ಮುಖ್ಯಗುರುಗಳು ಹಾಗೂ ಎಸ್ಡಿಎಂಸಿ ಜಂಟಿ ಖಾತೆಗೆ ಸ್ಥಿರ ಠೇವಣಿಯಾಗಿ (ಎಫ್ ಡಿ) ಇಡಲು ಮುಖ್ಯಗುರುಗಳು ಹಾಗೂ ಶಾಲಾ ಎಸ್ಡಿಎಂಸಿ ಅಧ್ಯಕ್ಷರಿಗೆ ಚೆಕ್ ನೀಡಿದರು‌.ಶಾಲೆಯ ಜಂಟಿ ಖಾತೆಯಲ್ಲಿ ಇಟ್ಟ ಸ್ಥಿರ ಠೇವಣಿಯಿಂದ ಪ್ರತಿ ವರ್ಷ ಬರುವ ಬಡ್ಡಿ ಹಣವನ್ನು ಶಾಲೆಯ…

Read More

ಭಾರತ ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಮರು ಪರಾಮರ್ಶೆಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 15:ಕಳೆದ ಕೆಲವು ದಿನಗಳ ಹಿಂದೆ ಭಾರತ ಸರ್ವೋಚ್ಚ ನ್ಯಾಯಾಲಯವು ತಂದೆ ಪರಿಶಿಷ್ಟ ಜಾತಿ ಅಲ್ಲದಿದ್ದರೂ ತಾಯಿ ಪರಿಶಿಷ್ಟ ಜಾತಿ ಸೇರಿದ್ದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಒದಗಿಸಬೇಕೆಂದು ಆದೇಶ ನೀಡಿದ್ದನ್ನು ಸುಪ್ರೀಂ ಕೋರ್ಟ್ ಮತ್ತೆ ಪರಾಮರ್ಶಿಸಬೇಕು ಎಂದು ಭೀಮ ಸರಕಾರ ಸಂಘಟನೆ ಮನವಿ ಸಲ್ಲಿಸಿದೆ.ಈ ತೀರ್ಪಿನಿಂದ ನಿಜ ಪರಿಶಿಷ್ಟ ಜಾತಿ ಜನರಿಗೆ ಅನ್ಯಾಯಾಗುತ್ತದೆ. ಜೊತೆಗೆ ಸರ್ವೋಚ್ಛ ನ್ಯಾಯಾಲಯದ ಆದೇಶ ದುರುಪಯೋಗ ಆಗುವ ಸಾಧ್ಯತೆ ಇದ್ದು, ಈ ನ್ಯಾಯಾಲಯದ ಆದೇಶವನ್ನು…

Read More

ವಿದ್ಯೆ ಎಂಬುದು ಅಭ್ಯಾಸ ಮಾಡುವವನ ಕೈವಶವಾಗುತ್ತದೆ-ಐಹೊಳ್ಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15:ಜೀವನದಲ್ಲಿ ಯಾರು ಸಾಧನೆ ಮಾಡಬೇಕೆಂದು ಬಯಸಿ ಅಭ್ಯಾಸವನ್ನು ಮಾಡುತ್ತಾರೋ ಅವರ ಸಾಧನೆಗೆ ವಿದ್ಯೆಯ ಫಲಗಳು ಬರುತ್ತವೆ. ಶಿವಯೋಗಿ ಸಿದ್ದರಾಮರು ಇದನ್ನು ತಮ್ಮ ವಚನದಲ್ಲಿ ಪ್ರಸ್ತಾಪಿಸಿದ್ದಾರೆ. ಅವಿದ್ಯೆ ಹೋಗಲಾಡಿಸಲು ನಾವೆಲ್ಲ ಸಾಧನಾಶೀಲರಾಗಿ ಸಾಧಿಸಬೇಕೆಂದು ಫ .ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ.ವ್ಹಿ.ಡಿ. ಐಹೊಳ್ಳಿ ಇಂದಿಲ್ಲಿ ಅಭಿಪ್ರಾಯ ಪಟ್ಟರು. ನಗರದ ಆಶ್ರಮ ರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೇಯ ದೇವಸ್ಥಾನದಲ್ಲಿ ಹಮ್ಮಿಕೊಂಡ 549ನೇ ಸತ್ಸಂಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.ವಾಚಿಸಿ ಅನುಭವಿ…

Read More