ಉತ್ತರ ಕರ್ನಾಟಕ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿ ಕುರಿತು ಕೇಂದ್ರ ರೇಲ್ವೆ ಸಚಿವರ ಜೊತೆಗೆ ಚರ್ಚೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15:ಉತ್ತರ ಕರ್ನಾಟಕ ಭಾಗದ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜೊತೆಗೆ ರಾಜ್ಯದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಪಿ.ಸಿ. ಗದ್ದಿಗೌಡರ ಅವರು ಸೋಮವಾರ ಸಂಸತ್ ಭವನದಲ್ಲಿ ಭೇಟಿಯಾಗಿ ಚರ್ಚಿಸಿದರು.ಉತ್ತರ ಕರ್ನಾಟಕ ಭಾಗದಲ್ಲಿ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿಯ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಈ ಕುರಿತು…

Read More

ಡಿ. 19ರಂದು ಬಿಎಲ್ ಡಿಇ ಡೀಮ್ಡ್ ವಿವಿ ಘಟಿಕೋತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಡಿಸೆಂಬರ್ 19 ಶುಕ್ರವಾರ ವಿವಿಯ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದೆ.ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ಘಟಿಕೋತ್ಸವದಲ್ಲಿ ನವದೆಹಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ…

Read More

ಶಾಮನೂರ ನಿಧನಕ್ಕೆ ಸಚಿವ ಎಂ. ಬಿ. ಪಾಟೀಲ ಕಂಬನಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14: ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸಂತಾಪ ಸೂಚಿಸಿದ್ದಾರೆ.ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾಗಿದೆ. ಸಾರ್ವಜನಿಕ ಜೀವನದಲ್ಲಿ ಅವರ ಸೇವೆ, ಸಂಘಟನೆಗೆ ನೀಡಿದ ನಾಯಕತ್ವ ಮತ್ತು…

Read More

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ

ಸಪ್ತಸಾಗರ ವಾರ್ತೆ, ದಾವಣಗೆರೆ, ಡಿ. 14: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (94) ನಿಧನ ಹೊಂದಿದ್ದಾರೆ.ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಹಲವು ದಿನಗಳಿಂದ ಬೆಂಗಳೂರಿನ ಸ್ಪರ್ಶ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲ ನೀಡದೆ ಅವರು ಡಿ. 14ರ ಸಂಜೆ ಸಾವನಪ್ಪಿದ್ದಾರೆ.ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

Read More

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14 :ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಕೆಪಿಸಿಸಿ ಖಜಾಂಚಿಯಾಗಿ ಸುದೀರ್ಘ ಅವಧಿಗೆ ಕೆಲಸ ಮಾಡಿರುವ ಅವರು, ಪಕ್ಷ ಸಂಘಟನೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಬಾಪೂಜಿ ಶಿಕ್ಷಣ ಸಂಸ್ಥೆ ಮೂಲಕ ದಾವಣಗೆರೆ ಜಿಲ್ಲೆ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಳಲು ಕಾರಣರಾಗಿದ್ದಾರೆ. ಅವರ ಅಗಲಿಕೆಯಿಂದ ಸಾರ್ವಜನಿಕ ಕ್ಷೇತ್ರಕ್ಕೆ ಅಷ್ಟೇ ಅಲ್ಲ, ಶಿಕ್ಷಣ ಕ್ಷೇತ್ರಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ…

Read More

ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ: ಡಿ. 15 ರಿಂದ ಅಹೋರಾತ್ರಿ ಧರಣಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14 : ಡಿ.15ರಿಂದ ಸರಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಳ್ಳಲು ಹೋರಾಟಗಾರರು ನಿರ್ಧರಿಸಿದ್ದಾರೆ.ವಿಜಯಪುರ ನಗರದ ಡಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲೆಗೆ ಸರ್ಕಾರಿ ವೇದಿಕೆಯ ಮಹಾವಿದ್ಯಾಲಯ ಸ್ಥಾಪನೆಗಾಗಿ ಆಗ್ರಹಿಸಿ ಸರ್ಕಾರದ ಉದ್ದೇಶಿತ ಖಾಸಗಿಕರಣವನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಭಾನುವಾರ 88ನೇ ದಿನ ಪೂರೈಸಿದ್ದು, ಸರ್ಕಾರ ಜಿಲ್ಲೆಯ ಹೋರಾಟಗಾರರು ಹಾಗೂ ಜನರ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ ಪ್ರಮುಖರು ಇಂದು…

Read More

ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ – ಬಸನಗೌಡ ಪಾಟೀಲ ಹರನಾಳ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14: ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ. ಆದರ್ಶ ಸಮಾಜದ ನಿರ್ಮಾಣದಲ್ಲಿ ಅವರು ನೀಡಿದ ಸಂದೇಶಗಳು ನಮ್ಮೆಲ್ಲರ ಜೀವನವನ್ನು ಬದಲಿಸುವ ದಿಕ್ಸೂಚಿಗಳಾಗಿವೆ ಎಂದು ವಿಜಯಪುರದ ಜಾಗತಿಕ ಲಿಂಗಾಯತ ಮಹಾಸಭೆಯ ಅಧ್ಯಕ್ಷ ಬಸನಗೌಡ ಪಾಟೀಲ ಹರನಾಳ ಅಭಿಪ್ರಾಯಪಟ್ಟರು. ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ನೀಲಮ್ಮ ಮುತ್ತಪ್ಪ ಸಂಕಣ್ಣನವರ ದತ್ತಿ, ದಿ. ಪ್ರೊ.ತಿಪ್ಪಣ್ಣ ಕರೆಪ್ಪ ಕಲ್ಯಾಣಗೋಳ ದತ್ತಿ, ದಿ. ರಾಮಗೊಂಡಪ್ಪ ನಿಂಗಪ್ಪ ನಾಗಠಾಣ ದತ್ತಿ, ದಿ. ಗಂಗಾಧರ ಕೋರಳ್ಳಿ ದತ್ತಿ…

Read More

ಅನುಪ್ರಿಯಾ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರಡಿ. 14: ನಗರದ ಪ್ರತಿಷ್ಠಿತ ಬಿ.ಎಲ್‌.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅನುಪ್ರಿಯಾ ರಾಘವೇಂದ್ರ ಕುಲಕರ್ಣಿ ಅವರನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿ 2023-24ನೇ ವರ್ಷದ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಿದೆ.ಅಕಾಡೆಮಿಯ ಬಹುಮುಖ ಪ್ರತಿಭೆ ವಿಭಾಗದ ಅಡಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಡಿಸೆಂಬರ್ 16 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಕಾರ್ಯಕರ್ಮದಲ್ಲಿ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಪ್ರಶಸ್ತಿ…

Read More

ದೇಶದ 140 ಕೋಟಿ ಜನರ ಮತದಾನದ ಹಕ್ಕಿಗಾಗಿ ಹೋರಾಟ:ಡಿಕೆಶಿ

ಸಪ್ತಸಾಗರ ವಾರ್ತೆ, ನವದೆಹಲಿ, ಡಿ.14:“ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.ವೋಟ್ ಚೋರಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾವು ಮತಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೆವು. ಈಗ ರಾಮಲೀಲಾ…

Read More

ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ

ಸಪ್ತಸಾಗರ ವಾರ್ತೆ,ವಿಜಯಪುರ, ಡಿ.12:ಮಹಾನಗರ ಪಾಲಿಕೆವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ ಬಸ್ ಹಾಗೂ ರೈಲು ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ಕಂಡುಬಂದಲ್ಲಿ ಸಂಬಂಧಿಸಿದವರು ಮಹಾನಗರ ಪಾಲಿಕೆ ಕಚೇರಿಯ ಸಹಾಯವಾಣಿ ಸಂಖ್ಯೆ: 08352-222474 ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More