ರೈತರಿಗೆ ₹25 ಸಾವಿರ ಪರಿಹಾರ ನೀಡಿ; ₹2,500 ಬೇಡ
ಸರ್ಕಾರದ ಆರ್ಥಿಕ ಸ್ಥಿತಿಗೆ ಶ್ವೇತಪತ್ರ ಹೊರಡಿಸಲು ರೈತ ಸಂಘ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಅ.1: ರಾಜ್ಯದ ರೈತರ ಸಂಕಷ್ಟಕ್ಕೆ ಸರ್ಕಾರ ಕೂಡಲೇ ಸ್ಪಂದಿಸಿ, ಪ್ರತಿ ಎಕರೆಗೆ ಕನಿಷ್ಠ ₹25 ಸಾವಿರ ಪರಿಹಾರ ನೀಡಬೇಕು. ₹2,500 ಇನ್ಪುಟ್ ಸಬ್ಸಿಡಿ ನೀಡುವ ಮೂಲಕ ರೈತರನ್ನು ಅವಮಾನಿಸಬಾರದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.ರೈತರು ಬೀಜ, ಗೊಬ್ಬರ, ಕೂಲಿ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಮಾಡಿರುವ ಸಂಪೂರ್ಣ ವೆಚ್ಚವನ್ನು ಪರಿಗಣಿಸಿ ವೈಜ್ಞಾನಿಕವಾಗಿ ಪರಿಹಾರ ನಿಗದಿಪಡಿಸಬೇಕು ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ…


