ಅ.7ರಂದು ಜಿಲ್ಲಾಡಳಿತದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ.3:ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 7ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು. ಅಂದು ಬೆಳಿಗ್ಗೆ 9.30ಗಂಟೆಗೆ ನಗರದ ಶ್ರೀ ದೇವಸ್ಥಾನದ ಆವರಣದಿಂದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ವಿವಿಧ ಕಲಾತಂಡಗಳೊಂದಿಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣವರೆಗೆ ಮೆರವಣಿಗೆ ನಡೆಯಲಿದೆ.ಅಂದು ಬೆಳಿಗ್ಗೆ 10.30ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿ, ಸಿಬ್ಬಂದಿ ಹಾಗೂ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು…

Read More

ಮಳೆ ಹಾನಿ ಪ್ರದೇಶದ ಮೂಲಭೂತ ಸೌಕರ್ಯ ತ್ವರಿತವಾಗಿ ಕಲ್ಪಿಸಲು ಜಿಲ್ಲಾಧಿಕಾರಿ ಡಾ‌.ಆನಂದ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 3:ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಮಳೆ ನಮ್ಮ ಜಿಲ್ಲೆಯಲ್ಲಿಯಾಗಿದ್ದು ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ತ್ವರಿತವಾಗಿ ಕಲ್ಪಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ವಿಡಿಯೋ ಸಂವಾದ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ನಂತರ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು, ಜಿಲ್ಲೆಯಲ್ಲಿ ಮುಂಗಾರು…

Read More

ಹೊರ್ತಿ ಕೆರೆಗೆ ಚಾನಲ್ ನಿರ್ಮಾಣ: ಜಿಲ್ಲಾಧಿಕಾರಿ ಡಾ. ಆನಂದ

ಸಪ್ತ ಸಾಗರ ವಾರ್ತೆ ವಿಜಯಪುರ, ಅ.3 :ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಕೆರೆಯ ಮುಂದಿರುವ ಕೃಷಿ ಜಮೀನುಗಳಿಗೆ ಮತ್ತು ಕೆರೆ ಏರಿಯ ಹಾನಿಯನ್ನು ತಡೆಯಲು ಮುನ್ನಚ್ಚರಿಕೆ ಕ್ರಮವಾಗಿ ಚಾನಲ್ ನಿರ್ಮಾಣ ಮಾಡಿ, ನೀರು ಹೊರಹಾಕಿರುವುದರಿಂದ ನೀರಿನ ಮಟ್ಟವು 10 ಅಡಿಗಳಷ್ಟು ಕಡಿಮೆಯಾಗಿದೆ. ಇನ್ನು ಮುಂದೆ ಯಾವುದೇ ಅಪಾಯ ಕಂಡುಬರುವುದಿಲ್ಲವೆಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊರ್ತಿ ಕೆರೆಯನ್ನು 1972 ರಲ್ಲಿ ನಿರ್ಮಾಣ ಮಾಡಲಾಗಿದ್ದ, ಈ ಕೆರೆಯ ಸಾಮರ್ಥ್ಯವು 19.50 ಎಂ.ಸಿ.ಎಫ್.ಟಿ….

Read More

ಕ್ಷುಲ್ಲಕ ಕಾರಣಕ್ಕೆ ಗಾಳಿಯಲ್ಲಿ ಗುಂಡು: ಬಾಲಕಿಗೆ ಗಾಯ, ಆಸ್ಪತ್ರೆಗೆ ದಾಖಲು

ಸಪ್ತಸಾಗರ ವಾರ್ತೆ ವಿಜಯಪುರ, ಅ. 3:ವಿಜಯಪುರ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ದಸರಾ ಹಬ್ಬದ ಮರು ದಿನವೇ ಗುಂಡಿನ ಸದ್ದು ಕೇಳಿ ಜನರು ಬೆಚ್ಚಿ ಬಿದ್ದಿದ್ದಾರೆ.ದುರ್ಗಾದೇವಿ ಜಾತ್ರೆಯ‌ಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ಮದ್ಯೆ ಜಗಳ ಉಂಟಾಗಿದೆ. ಆಗ ಜಗಳ ತಾರಕಕ್ಕೇರಿದ್ದು, ರಾಮ ಅಂಕಲಗಿ ಎಂಬಾತ ಪರವಾನಿಗೆ ಹೊಂದಿದ ರಿವಾಲ್ವಾರ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ.ನಿನ್ನೆ ಅಂಕಲಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರೆ ನಡೆದಿತ್ತು. ಈ ವೇಳೆ ಎರಡು ಗುಂಪುಗಳ ನಡುವೆ ಜಗಳವಾಗಿತ್ತು.ಇಂದು ಜಗಳದ ಬಗ್ಗೆ ಮಾತುಕತೆ ಮಾಡಲು ಸಭೆ ಕರೆಯಲಾಗಿತ್ತು.ಸಭೆ…

Read More

ಅಧಿಕಾರ ಹಂಚಿಕೆ: ಹೈಕಮಾಂಡ್ ಅಂತಿಮ ನಿರ್ಧಾರ- ಸಚಿವ ಎಂ.ಬಿ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಅ. 3:ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ. ಈ ಬಗ್ಗೆ ಮಾತನಾಡಲು ಯಾರಿಗೂ ಅಧಿಕಾರ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಕುರಿತು ಮಾತನಾಡುವ ಅಧಿಕಾರ ಯಾರಿಗೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ ಎಂದರು.ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಪಾಟೀಲ್, ಜನರು ಕೇಳಿದಾಗ ಹಾಗೆ…

Read More

ದೇವರನಿಂಬರಗಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕನ ಅಪಹರಣಕ್ಕೆ ವಿಫಲ ಯತ್ನ: ಆರೋಪಿ ಸೆರೆ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 2:ಸೆಪ್ಟೆಂಬರ್ 3ರಂದು ಹಂತಕರ ಗುಂಡಿಗೆ ಬಲಿಯಾಗಿದ್ದ ದೇವರನಿಂಬರಗಿ ಗ್ರಾಮದ ಭೀಮನಗೌಡ ಬಿರಾದಾರ ಎಂಬುವರ ಅಪ್ರಾಪ್ತ ಪುತ್ರನ ಅಪಹರಣಕ್ಕೆ ಗುರುವಾರ ಸಂಜೆ ದೇವರನಿಂಬರಗಿ ಭೀಮನಗೌಡ ಬಿರಾದಾರ ತೋಟದ ನಿವಾಸದ ಬಳಿ ವಿಫಲ ಯತ್ನ ನಡೆದಿದ್ದು, ಈ ಬಗ್ಗೆ ಗ್ರಾಮಸ್ಥರಲ್ಲಿ ಮತ್ತೆ ಆತಂಕ ಮೂಡಿದೆ.ಕಳೆದ ಸಪ್ಟೆಂಬರ್ 3 ರಂದು ದೇವರನಿಂಬರಗಿ ಗ್ರಾಮದಲ್ಲಿ ಭೀಮನಗೌಡ ಬಿರಾದಾರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಆದಾಗ್ಯೂ ಗುರುವಾರ ಸಂಜೆ ಭೀಮನಗೌಡ ಅವರ…

Read More

ಅ. 4ರಂದು ಹಜರತ್ ಅರ್ಕಾಟ್ ದರ್ಗಾದ ಉರುಸು

ಸಪ್ತ ಸಾಗರ ವಾರ್ತೆ, ವಿಜಯಪುರ, ಅ. 2 ವಿಜಯಪುರದ ಭಾವೈಕ್ಯತೆಯ ಪ್ರತೀಕವಾಗಿರುವ ಹಜರತ್ ಅರ್ಕಾಟ್ ದರ್ಗಾದ ಉರುಸು ಶ್ರದ್ಧಾ ಭಕ್ತಿಯಿಂದ ಜರುಗಲಿದ್ದು, ಇದರ ಅಂಗವಾಗಿ ಅ.4 ರಂದು ಝೂಲೂಸ್ ಏ. ಗೌಸಿಯಾ ಎಂಬ ಬೃಹತ್ ಶಾಂತಿಯಾತ್ರೆ ನಡೆಯಲಿದೆ ಎಂದು ಧರ್ಮಗುರು ಮೌಲಾನಾ ಯೂಸೂಫ್ ಖಾದ್ರಿ ಹೇಳಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಉರುಸು ಅಂಗವಾಗಿ ಅನೇಕ ಸಿದ್ದತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ. ಮಾನವೀಯತೆ, ಶಾಂತಿ, ಸಹೋದರತೆ ತತ್ವ ಸಾರಿದ ಅರ್ಕಾಟ್ ದರ್ಗಾದ ಹಜರತ್ ಸೈಯ್ಯದ್ ನಾ ಅಬ್ದುಲ್ ಷಾ…

Read More

ಮೈಸೂರು ಅರಮನೆ ಆವರಣದಲ್ಲಿ ನಡೆದ ಅಂಬಾರಿ ಮೆರವಣಿಗೆಯಲ್ಲಿ ನಾಡ ದೇವಿ ಚಾಮುಂಡೇಶ್ವರಿ ದೇವಿಗೆ ಸಿಎಂ, ಡಿಸಿಎಂ ಪುಷ್ಪಾರ್ಚನೆ

ಸಪ್ತ ಸಾಗರ ವಾರ್ತೆ, ಮೈಸೂರು, ಅ. 2: ಮೈಸೂರು ಅರಮನೆ ಆವರಣದಲ್ಲಿ ವಿಜಯ ದಶಮಿ ನಿಮಿತ್ತ ಗುರುವಾರ ಅಭಿಮನ್ಯು ಹೊತ್ತ ಅಂಬಾರಿಯಲ್ಲಿನ ಚಾಮುಂಡೇಶ್ವರಿ ದೇವಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡಿದರು. ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು, ಸಚಿವರಾದ ಮಹದೇವಪ್ಪ, ಶಿವರಾಜ್ ತಂಗಡಗಿ, ಸಂಸದ ಯದುವೀರ್ ಒಡೆಯರ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಲಕ್ಷೀಕಾಂತ್ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಉಪಸ್ಥಿತರಿದ್ದರು.

Read More

ಗಾಂಧೀಜಿ, ಶಾಸ್ತ್ರಿಯವರತ್ಯಾಗ, ಬಲಿದಾನಸದಾನಮಗೆಆದರ್ಶಪ್ರಾಯವಾಗಿರುತ್ತವೆ- ಮುಖ್ಯಮಂತ್ರಿಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು,ಅ. 2: ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆ ಮಾಡಿ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.ಇಂದು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಕೂಡಾ ಹೌದು,…

Read More

ದಸರಾ: ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡ ಗೆಳೆಯರು

ಸಪ್ತಸಾಗರ ವಾರ್ತೆ, ವಿಜಯಪುರ, ಅ. 2: ದಸರಾ ಹಬ್ಬದ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶಿಕ್ಷಕ ಸಂತೋಷ ಬಂಡೆ, ಸುರೇಶ ಗಿರಿಸಾಗರ, ಶ್ರೀಕಾಂತ ಗುಜ್ಜಲಕರ, ಅಶೋಕ ಪಾತ್ರೋಟ, ಲಕ್ಷ್ಮಣ ಗುಜ್ಜಲವರ, ಅನಿಲ ಗುಜ್ಜಲವರ, ವೆಂಕಟೇಶ ಗುಜ್ಜಲವರ, ಮಹಾಂತೇಶ ಗುಜ್ಜಲವರ ಸೇರಿದಂತೆ ಅನೇಕರು ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡು ವಿಜಯ ದಶಮಿ ಹಬ್ಬವನ್ನು ಆಚರಿಸಿದರು.

Read More