ತಂತ್ರಜ್ಞಾನ-ಕೌಶಲ್ಯಾಭಿವೃದ್ದಿ ಅಳವಡಿಸಿಕೊಂಡು ಉದ್ಯೋಗ ಪಡೆಯಲು ಮುಂದಾಗಿ-ಸಚಿವ ಡಾ. ಎಂ.ಬಿ. ಪಾಟೀಲ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ.2: ಇಂದಿನ ತಾಂತ್ರಿಕ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಆರ್ಟಿಫಿಸಿಯಲ್ ಇಂಟಲಿಜೆನ್ಸ್ (ಎಆಯ್), ರೋಬೋಟ ತಂತ್ರಜ್ಞಾನ, ಗ್ರೀನ್ ಎನರ್ಜಿ ದಾಪುಗಾಲಿಟ್ಟಿದ್ದು, ಈ ಕಾಲಕ್ಕೆ ತಕ್ಕಂತೆ ಹೊಂದಿಕೊಂಡು, ತಂತ್ರಜ್ಞಾನವನ್ನು ಅಳವಡಿಸಿಕೊಂಡು, ಕೌಶಲ್ಯಕ್ಕೆ ತಕ್ಕಂತೆ ಉದ್ಯೋಗ ಪಡೆಯಲು ಇಂದಿನ ಯುವ ಜನಾಂಗ ಮುಂದಾಗಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.ಕೌಶಲ್ಯಾಭಿವೃದ್ಧಿ, ಉದ್ಯಮಶಿಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ…

Read More

ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಗೆ ಪರಶುರಾಮ ಚಿಂಚಲಿ ಹಾಗೂ ದೀಪಕ ಶಿಂತ್ರೆ ನಾಮ ನಿರ್ದೇಶಕ ಸದಸ್ಯರಾಗಿ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2:ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಗೆ ಪರಶುರಾಮ ಚಿಂಚಲಿ ಹಾಗೂ ದೀಪಕ ಶಿಂತ್ರೆ ನಾಮ ನಿರ್ದೇಶಕ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ.ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಯ ಸದಸ್ಯರ ಸಭೆ ಅಧ್ಯಕ್ಷ ಸಂಜಯ ಪಾಟೀಲ ಕನಮಡಿ ಅವರ ಅಧ್ಯಕ್ಷತೆಯಲ್ಲಿ ಚಾಲುಕ್ಯ ನಗರದ ಕಚೇರಿಯಲ್ಲಿ ಜರುಗಿತು.ಈ ಸಭೆಯಲ್ಲಿ ಆಡಳಿತ ಮಂಡಳಿಗೆ ಸಹಕಾರಿ ಕ್ಷೇತ್ರದಲ್ಲಿ ಅನುಭವಿಗಳನ್ನು, ಪರಿಣಿತರನ್ನು ಕೋಪ್ಟ್ ಮಾಡಿಕೊಳ್ಳಲು ತೀರ್ಮಾನಿಸಲಾಯಿತು.ಸಹಕಾರ ಇಲಾಖೆಯ ನಿವೃತ್ತ ಅಧಿಕಾರಿ ಪರಶುರಾಮ ಚಿಂಚಲಿ ಅವರು ನಿವೃತ್ತಿ ನಂತರ ವಿವಿಧ…

Read More

ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮಾದರಿ:ಡಾ. ವಿವೇಕ ಬೆನೆಗಲ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2: ಗುಣಮಟ್ಟದ ಅತ್ಯಾಧುನಿಕ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹೇಳಿ ಮಾಡಿಸಿದಂತಿದೆ ಎಂದು ಬೆಂಗಳೂರು ನಿಮ್ಹಾನ್ಸ್ ನ ಡಿ-ಎಡಿಕ್ಷನ್ ಸೆಂಟರ್ ಮುಖ್ಯಸ್ಥ ಮತ್ತು ಸೈಕ್ಯಾಟ್ರಿಕ್ ವಿಭಾಗದ ಮಾಜಿ ಮುಖ್ಯಸ್ಥ ಡಾ. ವಿವೇಕ ಬೆನೆಗಲ ಹೇಳಿದ್ದಾರೆ.ಸೋಮವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಆಯೋಜಿಸಲಾದ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ…

Read More

ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ರಾಕೇಶ್ ರಜಪೂತರಿಗೆ ರಾಜ್ಯಮಟ್ಟದ ಗೌರವ

ಸಪ್ತಸಾಗರ ವಾರ್ತೆ, ಬೆಂಗಳೂರು, ಫೆ. 2: ಚಿತ್ರಸಂತೆ ಸಂಸ್ಥೆಯ ವತಿಯಿಂದ ಪ್ರತಿವರ್ಷ ನೀಡಲಾಗುವ “ಹೆಮ್ಮೆಯ ಕನ್ನಡ ನಾಡಿನ ಸಾಧಕ (ನಿಮ್ಮ ವಿಶಿಷ್ಟ ಸಾಧನೆಗೆ ನಮ್ಮ ವಿಶಿಷ್ಟ ಗೌರವ)” ಪ್ರಶಸ್ತಿಗೆ ಈ ಬಾರಿ ರಾಕೇಶ್ ರಜಪೂತ, ರಾಜ್ಯ ಪ್ರಧಾನ ಕಾರ್ಯದರ್ಶಿ, ಆಲ್ ಇಂಡಿಯಾ ಬಂಜಾರಾ ಸೇವಾ ಸಂಘ – ಯುವ ಘಟಕ, ಆಯ್ಕೆಯಾಗಿದ್ದಾರೆ.ಬೆಂಗಳೂರಿನ ಸದಾಶಿವನಗರದ ಪ್ರತಿಷ್ಠಿತ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಗೌರವ ಪ್ರದಾನ ಕಾರ್ಯಕ್ರಮವು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ನೆರವೇರಿತು. ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ನಿರಂತರವಾಗಿ…

Read More

ಸಂತ ರವಿದಾಸರ ತತ್ತ್ವಗಳು ಉತ್ತಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ಸಂಸದ ಗೋವಿಂದ ಕಾರಜೋಳ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2:ಸಂತ ರವಿದಾಸರು ಕಂಡ ಜಾತಿರಹಿತ ಮತ್ತು ಸಮಾನತೆಯ ಸಮಾಜದ ಕನಸನ್ನು ನನಸಾಗಿಸಲು ನಾವೆಲ್ಲರೂ ಬದ್ಧರಾಗಬೇಕಿದೆ ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಅವರು ಕರೆ ನೀಡಿದರು.ನಗರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ‘ಸಂತ ಶಿರೋಮಣಿ ಶ್ರೀ ರವಿದಾಸರ ಜಯಂತಿ’ ಕಾರ್ಯಕ್ರಮದಲ್ಲಿ ರವಿದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.ಭಾರತದ ಭಕ್ತಿ ಪರಂಪರೆಯಲ್ಲಿ ಸಂತ ರವಿದಾಸರ ಸ್ಥಾನ ಹಿರಿದಾದುದು. 15ನೇ ಶತಮಾನದಲ್ಲಿಯೇ ಅವರು ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆಯ…

Read More

ವಿಕಸಿತ ಭಾರತ ನಿರ್ಮಾಣಕ್ಕೆ ಪೂರಕ ಬಜೆಟ್: ಮಖಣಾಪೂರ ಸ್ವಾಗತ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಎಲ್ಲ ಕ್ಷೇತ್ರಗಳಿಗೆ ಉತ್ತೇಜನ ನೀಡುವ ಬಜೆಟ್ ಆಗಿದೆ ಎಂದು ನಾಗಠಾಣ ಮತಕ್ಷೇತ್ರದ ಬಿಜೆಪಿ ಯುವ ಮುಖಂಡ ಶಿವಾನಂದ ಮಖಣಾಪೂರ ಪ್ರತಿಕ್ರಿಯೆ ನೀಡಿದ್ದಾರೆ.ಕೇಂದ್ರ ಬಜೆಟ್ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಅವರು, 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಬಜೆಟ್ ಪೂರಕವಾಗಿದೆ ಎಂದಿದ್ದಾರೆ.ಚಿನ್ನ, ಬೆಳ್ಳಿ ದರ ಇಳಿಕೆ, ಕ್ಯಾನ್ಸರ್ ಚಿಕಿತ್ಸೆ ಅಗ್ಗ, ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಬಂಪರ್ ಕೊಡುಗೆ,…

Read More

ಸರ್ವೇ ಜನ ಸುಖಿನೋ ಭವಂತು ಬಜೆಟ್: ಕಾರಜೋಳ ಪ್ರತಿಕ್ರಿಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಸರ್ವೇ ಜನ ಸುಖಿನೋ ಭವಂತು ಎಂಬ ಆಶಯದ ಪ್ರತೀಕವಾಗಿದೆ ಎಂದು ಭಾರತೀಯ ಜನತಾ ಪಕ್ಷದ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರೈತ, ಕಾರ್ಮಿಕ, ಮಹಿಳಾ ಸಬಲೀಕರಣ, ಯುವ ಶಕ್ತಿಗೆ ಉತ್ತೇಜನ ನೀಡುವ ಮೂಲಕ ಎಲ್ಲರೂ ಸುಖವಾಗಿರಲು ಬೇಕಾಗುವ ನಿಟ್ಟಿನಲ್ಲಿ ಅನೇಕ ಮಹತ್ವದ ಕಾರ್ಯಯೋಜನೆ ರೂಪಿಸಲಾಗಿದೆ.ಮೂಲ ಸೌಕರ್ಯಗಳ ಪ್ರಗತಿಗೆ…

Read More

ಕ್ರೀಡೆಗಳಲ್ಲಿ ಸೋಲು ಗೆಲವು ಸಮಾನವಾಗಿ ಸ್ವೀಕರಿಸಿ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1:ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ ಮುನ್ನಡೆದಾಗ ಮಾತ್ರ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಹೇಳಿದ್ದಾರೆ.ರವಿವಾರ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜು(ಪ್ರೌಢಶಾಲೆ ವಿಭಾಗ) ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ…

Read More

ಜವಳಿ, ಕೃಷಿ ಕ್ಷೇತ್ರದ ನಿರೀಕ್ಷೆಗಳು ಹುಸಿ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1 : ಬಾಂಗ್ಲಾದ ಪರಿಸ್ಥಿತಿಯ ಲಾಭ ಪಡೆದು ದೇಶದ ಜವಳಿ ಉದ್ಯಮ ಪುನಶ್ಚೇತನ ಹಾಗೂ ಕೃಷಿ ಆದಾಯ ದುಪ್ಟಟ್ಟುಗೊಳಿಸಿ ರೈತರ ಹಿತರಕ್ಷಣೆ ಮಾಡುವ ನಿಟ್ಟಿನಲ್ಲಿ ನಮ್ಮ ನಿರೀಕ್ಷೆಗಳನ್ನು ಕೇಂದ್ರದ ಬಜೆಟ್ ಹುಸಿಗೊಳಿಸಿದೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.ಜವಳಿ ಉದ್ಯಮ ಪುನಶ್ಚೇತನ, ಬಂಡವಾಳ ಹೂಡಲು ಉದ್ಯಮಿಗಳ ಆಕರ್ಷಣೆ ಹಾಗೂ ಸಿದ್ದ ಉಡುಪು ರಫ್ತು ಬಗ್ಗೆ ಎಷ್ಟರ ಮಟ್ಟಿಗೆ ಆದ್ಯತೆ ನೀಡುವ ಬಗ್ಗೆ…

Read More

ಸಮಾಜ ಸುಧಾರಣೆಗೆ ಮಡಿವಾಳ ಮಾಚಿದೇವರ ಕೊಡುಗೆ ಅಪಾರ– ಪ್ರಶಾಂತ ಚನಗೊಂಡ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ.1: ಸಮಾಜದಲ್ಲಿದ್ದ ಅಸಮಾನತೆ, ಅಂಕು-ಡೊಂಕುಗಳನ್ನು ತಿದ್ದಲು ತಮ್ಮ ವಚನಗಳ ಮೂಲಕ ಅತ್ಯಂತ ಸರಳವಾಗಿ ಜನರಾಡುವ ಭಾಷೆಯಲ್ಲಿಯೆ ವಚನಗಳ ಮೂಲಕ ಸಂದೇಶ ನೀಡಿದ ಮಡಿವಾಳ ಮಾಚಿದೇವರ ಕೊಡುಗೆ ಅಪಾರವಾಗಿದೆ ಎಂದು ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ ಅವರು ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಡಿವಾಳ ಮಾಚಿದೇವರು ಕೇವಲ ಶರಣ…

Read More