ಗ್ಯಾರಂಟಿ ಯೋಜನೆಗಳ ಕಲಾ ಜಾಥಾ ಪ್ರದರ್ಶನ: ಸಂಚಾರಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.9: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿ ಹಾಗೂ ಸರ್ಕಾರದ ಜನಪರ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಲು ವಿಜಯಪುರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಎಲ್‌ಇಡಿ ಕಲಾ ಜಾಥಾ ಪ್ರದರ್ಶನ ಸಂಚಾರಿ ವಾಹನಕ್ಕೆ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಚಾಲನೆ ನೀಡಿದರು.ರಾಜ್ಯ ಸರ್ಕಾರವು ಜನರ ಜೀವನ ಮಟ್ಟ ಉತ್ತಮ ಪಡಿಸಲು ಹಲವಾರು ಜನಪರ…

Read More

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಳಕ್ಕೆ ಸದನದಲ್ಲಿ ಸುನೀಲಗೌಡ ಪ್ರಸ್ತಾಪ

ಸಪ್ತಸಾಗರ ವಾರ್ತೆ ವಿಜಯಪುರ,ಡಿ. 9: ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಮತ್ತೊಮ್ಮೆ ವಿಧಾನಮಂಡಲದ ಅಧಿವೇಶನದಲ್ಲಿ ಧ್ವನಿ ಎತ್ತಿದ್ದಾರೆ.ಮಂಗಳವಾರ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಪರಿಷತ ಕಲಾಪದಲ್ಲಿ ಶಾಸಕರು ಈ ಕುರಿತು ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ, ಗೌರವಧನ ಹೆಚ್ಚಳ ಕುರಿತು ಇತರ ರಾಜ್ಯಗಳ ಚುನಾಯಿತ ಪ್ರತಿನಿಧಿಗಳ ಗೌರವಧನ ದಾಖಲೆಗಳನ್ನು ನಿಯಮಾನುಸಾರ…

Read More

ಬೆಳೆ ಪರಿಹಾರ ತಾರತಮ್ಯ ಖಂಡಿಸಿ ರೈತರಿಂದ ಆಕ್ರೋಶ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 9 : ಬೆಳೆ ಹಾನಿ ಪ್ರಮಾಣ ಹೆಚ್ಚಾಗಿದ್ದರೂ ಪರಿಹಾರ ನೀಡುವಲ್ಲಿ ಸರ್ಕಾರ ತಾರತಮ್ಯ, ಅಸಮರ್ಪಕ ಹಾಗೂ ಅನ್ಯಾಯಯುತವಾದ ಕ್ರಮಗಳನ್ನು ಅನುಸರಿಸಿರುವುದನ್ನು ಹಾಗೂ ಇನ್ನೂ ಕೆಲ ರೈತರಿಗೆ ಪರಿಹಾರ ಹಣವನ್ನು ಜಮಾ ಮಾಡದೇ ಇರುವುದನ್ನು ಖಂಡಿಸಿ ಬಸವನ ಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ರೈತರು ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ವ್ಯಾಪಕ ಮಳೆಯಾಗಿದ್ದರ ಪರಿಣಾಮ ಸರ್ಕಾರ ರೈತರಿಗೆ ಬೆಳೆ ಪರಿಹಾರ…

Read More

ಬಿ.ಎಲ್.ಡಿ.ಇ ಧ್ವನಿ 98.6 FM ರೇಡಿಯೋ ಕೇಂದ್ರದ ಉದ್ಘಾಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 8: ನಗರದ ಪ್ರತಿಷ್ಟಿತ ಬಿ.ಎಲ್.ಡಿ.ಇ ಸಂಸ್ಥೆಯ “ಬಿ.ಎಲ್.ಡಿ.ಇ ಧ್ವನಿ 98.6 FM ಸಮುದಾಯ ಬಾನುಲಿ ಕೇಂದ್ರವನ್ನು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಪಾಟೀಲ ರವಿವಾರ ಉದ್ಘಾಟಿಸಿದರು.ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಆವರಣದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಬಿ.ಎಲ್.ಡಿ.ಇ ಧ್ವನಿ 98.6 FM ಆಕಾಶವಾಣಿ ಕೇಂದ್ರವನ್ನು ಉದ್ಘಾಟಿಸಿ ಬಳಿಕ, ಯುವಕರು, ಮಹಿಳೆಯರು ಮತ್ತು ರೈತ ಸಮುದಾಯಗಳಿಗಾಗಿ ವಿನೂತನ ಕಾರ್ಯಕ್ರಮಗಳು ಮೂಡಿ ಬರಲಿ ಎಂದು ರೇಡಿಯೋ…

Read More

ರಾಣಿ ಚನ್ನಮ್ಮ ಮೂರ್ತಿ ಅನಾವರಣಕ್ಕೆ ಜಿಲ್ಲಾಧಿಕಾರಿಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 8 : ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿಯನ್ನು ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಕೂಡಲೆ ಅನಾವರಣಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ಕಳೆದ ೩ ವರ್ಷಗಳಾದರೂ ಮೂರ್ತಿ ಅನಾವರಣಗೊಳ್ಳದಿರುವುದು ರಾಣಿ ಚನ್ನಮ್ಮಳ, ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ನೋವು ತಂದಿದೆ. ಆದ್ದರಿಂದ ಆದಷ್ಟು ಬೇಗನೆ ಮೂರ್ತಿಯನ್ನು ಅದ್ಧೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಅನಾವರಣ ಮಾಡುವ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕು ಎಂದು ಸಮಿತಿಯವರು ಆಗ್ರಹಿಸಿದ್ದಾರೆ.ಚನ್ನಮ್ಮಳ ಮೂರ್ತಿಯ ಸುತ್ತಲೂ ತುಂಬಾ ಗಲೀಜಾಗಿದ್ದು, ನಾಯಿಗಳ…

Read More

ಶಂಕರ ಶ್ರೀ ದತ್ತಿ ನಿಧಿ ಪ್ರಶಸ್ತಿಗೆ ಪ್ರೊ. ಶಾಂತ ನಾಯಕ್ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 8:ಪ್ರಸಕ್ತ ಸಾಲಿನ “ಶಂಕರ ಶ್ರೀ” ದತ್ತಿ ನಿಧಿ ಪುರಸ್ಕಾರಕ್ಕೆ ಪ್ರೊ. ಸಿರಗಾನಹಳ್ಳಿ ಶಾಂತನಾಯ್ಕ್ ಅವರು ಆಯ್ಕೆಯಾಗಿದ್ದಾರೆ.ಬಂಜಾರಾ ಸಮುದಾಯದ ಪ್ರೊಫೆಸರ್ ಸಿರಗಾನಹಳ್ಳಿ ಶಾಂತನಾಯ್ಕ್ ಸಾಮಾಜಿಕ ಜೀವನದಿಂದ ದೂರ ಉಳಿದ ತಾಂಡಾ ಬದುಕನ್ನು ಕಂಡುಂಡವರು. ತಾಂಡಾದಿಂದ ಅಮೇರಿಕಾದ Wisconsin ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡಿದ ಹೆಗ್ಗಳಿಕೆ ಇವರದು. ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕರಾಗಿ ವಿದ್ಯಾರ್ಥಿಗಳಿಗೆ ನಾಟಕ, ಜಾನಪದ ಗೀತೆ, ಭಾವಗೀತೆಗಳನ್ನು ಹೇಳಿ ಕೊಡುವುದರೊಂದಿಗೆ ವಿದ್ಯಾರ್ಥಿಗಳನ್ನು ರಾಷ್ಟ್ರಮಟ್ಟದ ಯುವಜನೋತ್ಸವಕ್ಕೆ ಕರೆದೊಯ್ದರು. ಕಲ್ಯಾಣ ಕರ್ನಾಟಕದ ಗಡಿ ಭಾಗದ…

Read More

ಸಂಸ್ಕೃತ ಭಾಷೆ ಭಾರತೀಯ ಸಂಸ್ಕೃತಿಯ ಮೂಲಾಧಾರ- ಡಾ. ಬನುದೇವಿ ಸಂಕಣ್ಣವರ

ಸಪ್ತ ಸಾಗರ ವಾರ್ತೆ, ವಿಜಯಪುರ,ಡಿ.8: ಸಂಸ್ಕೃತ ಭಾಷೆ ಭಾರತೀಯ ಸಂಸ್ಕೃತಿಯ ಮೂಲಾಧಾರವಾಗಿದ್ದು, ದೇಶದ ಘನತೆ ಸಂಸ್ಕೃತ ಮತ್ತು ಸಂಸ್ಕೃತಿ ಎಂಬ ಎರಡು ಅಸ್ತಿವಾರಗಳಲ್ಲಿ ನಿಂತಿದೆ ಎಂದು ವಿಶ್ರಾಂತ ಉಪನ್ಯಾಸಕಿ ಡಾ. ಬನುದೇವಿ ಸಂಕಣ್ಣವರ ಹೇಳಿದರು.ನಗರದ ಪಿಡಿಜೆ ಹೈಸ್ಕೂಲಿನಲ್ಲಿ ಬೆಂಗಳೂರಿನ ಅಗರಖೇಡ ಪ್ರತಿಷ್ಠಾನ ಮತ್ತು ಇಲ್ಲಿಯ ವಿಜಯಪುರ ಸಂಸ್ಕೃತ ಬಳಗದ ಸಂಯುಕ್ತ ಆಶ್ರಯದಲ್ಲಿ ‘ಸಂಸ್ಕೃತ ಸುಭಾಷಿತ ಸ್ಪರ್ಧೆ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.ಸಂಸ್ಕೃತವು ಅತ್ಯಂತ ವೈಜ್ಞಾನಿಕ ಭಾಷೆಯಾಗಿದ್ದು, ನಾಸಾ ಸಂಶೋಧನೆಗಳಲ್ಲಿ ಸಂಸ್ಕೃತದ ಉಪಯೋಗದ ಸಾಧ್ಯತೆಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ….

Read More

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ತಿದ್ದುಪಡಿ ಕಾಯಿದೆ ವಿಧಾನಸಭೆಯಲ್ಲಿ ಮಂಡಿಸದಂತೆ ಆಗ್ರಹಿಸಿ ಡಿಸಿಗೆ ಮನವಿ

ಸಪ್ತ ಸಾಗರ ವಾರ್ತೆ ವಿಜಯಪುರ, ಡಿ. 8 : ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ ೨೦೨೦ರ ಪ್ರಸ್ತಾವಿತ ತಿದ್ದುಪಡಿಯು ಸಂವಿಧಾನದ ಅಶಯಕ್ಕೆ ಹಾಗೂ ರಾಜ್ಯದ ಮತ್ತು ಹಿಂದೂ ಸಮಾಜದ ಹಿತಾಸಕ್ತಿಗೆ ವಿರೋಧಿಯಾಗಿರುವುದರಿಂದ ಅದನ್ನು ವಿಧಾನ ಸಭೆಯಲ್ಲಿ ಮಂಡಿಸದಂತೆ ಸರ್ವ ಕ್ರಮ ಕೈಗೊಳ್ಳಲು ಆಗ್ರಹಿಸಿ ಮತ್ತು ಗೋ ಸಂರಕ್ಷಣೆ ಕಾನೂನು ಸಡಿಲಗೊಳಿಸುತ್ತಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಕಾರ್ಯದರ್ಶಿ ಕರ್ನಾಟಕ ಸರ್ಕಾರ ಬೆಂಗಳೂರ ಅವರಿಗೆ ವಿಶ್ವ…

Read More

ಗ್ರಾಮೀಣ ಸರ್ಕಾರಿ ಶಾಲೆ ಅಭಿವೃದ್ಧಿಗೆ ಕಾರ್ಪೋರೇಟ್ ಕಂಪನಿಗಳು ನೀಡುತ್ತಿರುವ ಸಿ.ಎಸ್.ಆರ್. ಅನುದಾನ ಬಳಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 8: ಕಾರ್ಪೋರೇಟ್ ಕಂಪನಿಗಳು ನೀಡುತ್ತಿರುವ ಸಿ.ಎಸ್.ಆರ್. ಅನುದಾನವನ್ನು ಗ್ರಾಮೀಣ ಭಾಗದ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸದ್ಭಳಕೆ ಮಾಡಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ರವಿವಾರ ಬಬಲೇಶ್ವರ ತಾಲೂಕಿನ ದೂಡಿಹಾಳ ಗ್ರಾಮದಲ್ಲಿ ಶಾಹಿ ಕಂಪನಿಯ ಸಿ.ಎಸ್.ಆರ್ ಅನುದಾನದಡಿ ರೂ. 1.30 ಕೋ. ವೆಚ್ಚದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ, ಅವರು ಮಾತನಾಡಿದರು.ಗ್ರಾಮೀಣ ಸರಕಾರಿ ಶಾಲೆಗಳಲ್ಲಿ ಮಕ್ಕಳು ಗುಣಮಟ್ಟ ಶಿಕ್ಷಣ ಪಡೆಯಲು…

Read More

ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ತಾಲೂಕಿಗೆ ಪ್ರಥಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 8: ಶಾಸ್ತ್ರಿ ನಗರದ ಇಂಡಿಯನ್ ಪಬ್ಲಿಕ್  ಶಾಲೆಯ ವಿದ್ಯಾರ್ಥಿ ಅಫ್ಫಾನ್  ಇ. ಬಾಗವಾನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ.ಇತ್ತೀಚೆಗೆ KBHPS No.5 ವಿಜಯಪುರ ಶಾಲೆಯಲ್ಲಿ  ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಪ್ರತಿಭಾ ಕಾರಂಜಿಯ ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ಭಾಗವಹಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ M. Y. Vaggar, ಇಟಗಿ ಕಾಲೋನಿ ವಿಜಯ ಪುರ ಹಾಗೂ ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

Read More