ಸಿದ್ದಸಿರಿ ಸೌಹಾರ್ದ ಸಹಕಾರಿ ನಿರ್ದೇಶಕಿ ಸೀಮಾ ಕೋರೆ ಜನ್ಮ ದಿನ:ಗೋರಕ್ಷಾ ಕೇಂದ್ರಕ್ಕೆ ರೂ.5 ಲಕ್ಷ ದೇಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 29: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕಿ ಸೀಮಾ ಉಮೇಶ ಕೋರೆ ಅವರು ತಮ್ಮ ಜನ್ಮ ದಿನದ ಅಂಗವಾಗಿ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಕಗ್ಗೋಡ ಗ್ರಾಮದ ಶ್ರೀ ರಾಮನಗೌಡ ಪಾಟೀಲ (ಯತ್ನಾಳ) ಗೋ ರಕ್ಷಾ ಕೇಂದ್ರಕ್ಕೆ ರೂ.5 ಲಕ್ಷ ದೇಣಿಗೆ ಚೆಕ್ ನ್ನು ಸಿದ್ದೇಶ್ವರ ಸಂಸ್ಥೆ ಚೇರಮನ್ ಬಸಯ್ಯ ಹಿರೇಮಠ ಅವರಿಗೆ ಸೋಮವಾರ ನೀಡಿದರು.ಈ ಸಂದರ್ಭದಲ್ಲಿ ದಾನಿಗಳಿಗೆ ಜನ್ಮದಿನದ…

Read More

ಕಲ್ಯಾಣ ಕರ್ನಾಟಕದಲ್ಲಿ ನೆರೆ: ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಸಪ್ತಸಾಗರ ವಾರ್ತೆ, ನವದೆಹಲಿ, ಸೆ. 29: ಕಲ್ಯಾಣ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನೆರೆ ಹಾವಳಿಗೆ ಸಿಲುಕಿ ಸಂಕಷ್ಟಕ್ಕೆ ತುತ್ತಾಗಿರುವ ಜನರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು…

Read More

ಗಾಂಧಿ ಜಯಂತಿ: ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 29:ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಅಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿತ ದಿನವೆಂದು ಸರ್ಕಾರ ಘೋಷಿಸಿದೆ.ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ವಿಜಯಪುರ ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿಗಳು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.

Read More

ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ.29 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಮಯ ಪ್ರಜ್ಞೆಯಿಂದ ಸಾಹಸ ಪ್ರದರ್ಶಿಸಿ, ಇತರರ ಪ್ರಾಣ ರಕ್ಷಣೆ ಮಾಡಿದ 6 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮಕ್ಕಳ ದಿನಾಚರಣೆ-2025 ಪ್ರಯುಕ್ತ ನೀಡಲಾಗುವ ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.2024 ಆಗಸ್ಟ್ 1 ರಿಂದ 2025 ಜುಲೈ 31ರೊಳಗೆ ಸಾಹಸ ಪ್ರದರ್ಶಿಸಿ ಪ್ರಾಣ ರಕ್ಷಣೆ ಮಾಡಿದ ಬಾಲಕರಿಗೆ ಹೊಯ್ಸಳ ಹಾಗೂ ಬಾಲಕಿಯರಿಗೆ ಚೆನ್ನಮ್ಮ ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ…

Read More

ಮೋದಿ ಜನ್ಮ ದಿನ ನಿಮಿತ್ತ ಆರೋಗ್ಯ ತಪಾಸಣೆ ಶಿಬಿರ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ. 28:ವಿಜಯಪುರ ಜಿಲ್ಲಾ ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಆಶ್ರಯದಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀ ಅವರ 75ನೇ ಜನ್ಮದಿನದ ಪ್ರಯುಕ್ತ ನಗರ ವಲಯದ ಯೋಗಾಪುರ ಹನುಮಾನ ದೇವಸ್ಥಾನ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನರೇಂದ್ರ ಮೋದಿ ನಾವು ಕಂಡ ಅದ್ಭುತ ಜನನಾಯಕ, ಕೇವಲ ಜನಸೇವೆಯನ್ನೇ ತಮ್ಮ ಬದುಕಿನ ಧ್ಯೇಯವಾಗಿಸಿಕೊಂಡು ಹೋರಾಟ ಹಾಗೂ ದಿವ್ಯ ದೇಶಭಕ್ತಿಯ ಮೂಲಕ ಈ ದೇಶದ…

Read More

ಕನ್ನಡಾಂಬೆಯ ಋಣವನ್ನು ತೀರಿಸೋಣ – ನಾಡೋಜ ಡಾ. ಮಹೇಶ ಜೋಶಿ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.28:ನಾವೆಲ್ಲರೂ ಪವಿತ್ರವಾದ ಈ ಕನ್ನಡ ಮಣ್ಣಿನ ನೆಲದಲ್ಲಿ ಜನಿಸಿದ್ದು, ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನವನ್ನು ಹೊಂದಿದವರಾಗಿರಬೇಕು.ನಾಡು ಕಟ್ಟುವ ಕಾಯಕದಲ್ಲಿ ನಿರಂತರ ನಮ್ಮನ್ನು ನಾವು ತೊಡಗಿಸಿಕೊಂಡು ಕನ್ನಡಾಂಬೆಯ ಋಣವನ್ನು ತೀರಿಸಬೇಕೆಂದು ಬೆಂಗಳೂರು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅಭಿಪ್ರಾಯಪಟ್ಟರು.ರವಿವಾರ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡ ವಿಜಯಪುರ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಮಟ್ಟದ ಸಾಹಿತ್ಯ ಪರಿಷತ್ತಿನ ಸರ್ವ ಪದಾಧಿಕಾರಿಗಳ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,…

Read More

ಸಿಂದಗಿ, ಇಂಡಿ ಪ್ರವಾಹಪೀಡಿತ ಸ್ಥಳಗಳಿಗೆ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 28:ಯಾರೂ ಭಯಪಡುವ ಅವಶ್ಯಕತೆ ಇಲ್ಲ, ಸರ್ಕಾರ-ಜಿಲ್ಲಾಡಳಿತ ನಿಮ್ಮೊಂದಿಗಿದೆ. ನಿಮ್ಮ ಸಮಸ್ಯೆಗಳಿಗೆ ಸದಾ ಸ್ಪಂದಿಸಿ, ಪರಿಹಾರ ಕಲ್ಪಿಸಲಿದೆ. ಪ್ರವಾಹದಿಂದ ಹಾನಿಗೊಳಗಾದ ಬೆಳೆ ನಾಶ- ಮನೆ ಹಾನಿಯನ್ನು ಸಂಪೂರ್ಣವಾಗಿ-ಸಮಗ್ರವಾಗಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ತಿಳಿಸಿದರು.ಪ್ರವಾಹ ಪೀಡಿತ ಜಿಲ್ಲೆಯ ಸಿಂದಗಿ ಹಾಗೂ ಇಂಡಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭಾನುವಾರ ಭೇಟಿ ನೀಡಿ ಪರಿಶೀಲನೆ…

Read More

ಸಿಂದಗಿ: ಪ್ರವಾಹ‌ ಪೀಡಿತ ಸ್ಥಳಗಳಿಗೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಭೇಟಿ: ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಸಚಿವರು

ಸಪ್ತಸಾಗರ ವಾರ್ತೆ ವಿಜಯಪುರ, ಸೆ.28:ದೇವರನಾವದಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮಸಗಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.ಕಾಳಜಿ ಕೇಂದ್ರಗಳಲ್ಲಿ ಕಲ್ಪಿಸಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು,ಅಲ್ಲಿನ ಸಂತ್ರಸ್ಥರೊಂದಿಗೆ ಮಾತನಾಡಿ, ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ.ಯಾರು ಸಹ ಭಯ ಪಡುವ ಅವಶ್ಯಕತೆ ಇಲ್ಲ. ಜಿಲ್ಲಾಡಳಿತ ನಿಮ್ಮ ಜೊತೆಗಿದ್ದು, ಪ್ರವಾಹ…

Read More

ಹೋರಾಟಕ್ಕೆ ರಾಯಣ್ಣ, ವಿಶ್ವಪ್ರಜ್ಞೆಗೆ ಕನಕದಾಸರು, ಶಿಕ್ಷಣಕ್ಕೆ ಅಹಲ್ಯಾಬಾಯಿ, ಸಾಮಾಜಿಕ ಬದ್ಧತೆಗೆ ಸಿದ್ದರಾಮಯ್ಯ ಅವರ ಮಾದರಿಗಳು ನಮ್ಮ ಜೊತೆಗಿವೆ: ಕೆವಿಪಿ

ಸಪ್ತಸಾಗರ ವಾರ್ತೆ ಕೋಲಾರ, ಸೆ. 28: ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು.ಕರ್ನಾಟಕ ರಾಜ್ಯ ಕನಕ‌ನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ನಮ್ಮ ಕುಲಕ್ಕೆ, ಸಮುದಾಯಕ್ಕೆ ಒಂದು ಶ್ರಮಿಕ ಪರಂಪರೆ ಇದೆ. ಈ ಪರಂಪರೆಯ ಒಳಗೆ ಅದ್ಭುತವಾದ ಮಾದರಿ ವ್ಯಕ್ತಿತ್ವಗಳೂ ಇವೆ. ಛಲ ಮತ್ತು ಹೋರಾಟಕ್ಕೆ ಸಂಗೊಳ್ಳಿ ರಾಯಣ್ಣ ಮಾದರಿ ಆದರೆ, ವಿಶ್ವಪ್ರಜ್ಞೆಗೆ ಕನಕದಾಸರು ಮಾದರಿ ಆಗಿದ್ದಾರೆ. ಶಿಕ್ಷಣಕ್ಕೆ…

Read More

ಮನುಕುಲದ ಆರೋಗ್ಯ ರಕ್ಷಣೆಯಲ್ಲಿ ಔಷಧ ಶಾಸ್ತ್ರಜ್ಞರ ಪಾತ್ರ ದೊಡ್ಡದು: ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 28 : ಮನುಕುಲದ ಆರೋಗ್ಯ ಸಂರಕ್ಷಣೆಯಲ್ಲಿ ಔಷಧ ಶಾಸ್ತ್ರಜ್ಞರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಎಸ್.ಎಸ್. ಬಿಜಿಐ ಗೌರ್ನಿಂಗ್ ಕೌನ್ಸಿಲ್ ಅಧ್ಯಕ್ಷ ಪ್ರೊ. ಎಸ್.ಕೆ. ಪಾಟೀಲ ಅಭಿಪ್ರಾಯಪಟ್ಟರು.ನಗರದ ಶ್ರೀ ಶರಣಬಸವೇಶ್ವರ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಔಷಧ ಶಾಸ್ತ್ರಜ್ಞರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಪ್ರಸಕ್ತ ಔಷಧ ಶಾಸ್ತ್ರಜ್ಞರ ದಿನವನ್ನು ಥಿಂಕ್ ಹೆಲ್ತ್ ಅಂಡ್ ಥಿಂಕ್ ಫಾರ್ಮಸಿಸ್ಟ್ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ‌. ಔಷಧಿಗಳ ಸುರಕ್ಷಿತ, ಪರಿಣಾಮಕಾರಿ ಬಳಕೆಯಲ್ಲಿ ಹಾಗೂ ಸಾರ್ವಜನಿಕ ಆರೋಗ್ಯದಲ್ಲಿ ಔಷಧಶಾಸ್ತ್ರಜ್ಞರ…

Read More