ಭೀಮಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆಶಾಸಕ, ಡಿಸಿ ಭೇಟಿ, ಪರಿಶೀಲನೆ: ಸಂತ್ರಸ್ಥರ ಸಮಸ್ಯೆ ಆಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.೨೭: ಭೀಮಾನದಿ ಪ್ರವಾಹಕ್ಕೆ ಒಳಗಾಗಿರುವ ಸಿಂದಗಿ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ ಕ್ಷೇತ್ರದ ಶಾಸಕ ಅಶೋಕ ಮನಗೂಳಿ, ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಿದರು.ಶನಿವಾರ ಭೀಮಾನದಿ ಪ್ರವಾಹ ಪೀಡಿತ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಪ್ರವಾಹಕ್ಕೊಳಗಾಗಿರುವ ಪ್ರದೇಶಗಳಲ್ಲಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ ಶಾಸಕರು, ಈ…

Read More

ಸಾಹಿತ್ಯ ಕ್ಷೇತ್ರಕ್ಕೆ ತನ್ನದೇಯಾದ ವಿಶೇಷ ಕೊಡುಗೆ ನೀಡಿದ ಹಲಸಂಗಿ ಗೆಳೆಯರ ಬಳಗ- ಹಿರಿಯ ಸಾಹಿತಿ ಪ್ರೊ. ಎಸ್.ಜಿ. ಸಿದ್ದರಾಮಯ್ಯ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 27:ವಿಜಯಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಲಸಂಗಿ ಗೆಳೆಯರ ಪ್ರತಿಷ್ಠಾನ ಹಾಗೂ ಜೈನ್ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಕನ್ನಡ ಭಾಷಾ ವಿಭಾಗದ ಸಹಯೋಗದಲ್ಲಿ ಬೆಂಗಳೂರಿನ ಜಯನಗರದ ೯ ನೇ ಬಡಾವಣೆಯಲ್ಲಿರುವ ಜೆ ಜಿ ಐ ನಾಲೆಡ್ಜ್ ಕ್ಯಾಂಪಸ್ ನಲ್ಲಿ ಹಲಸಂಗಿ ಗೆಳಯರ ಬದುಕು ಮತ್ತು ಬರಹ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.ಈ ಕಾರ್ಯಕ್ರಮವನ್ನು ನಾಡಿನ ಹಿರಿಯ ಸಾಹಿತಿ ಪ್ರೊ. ಎಸ್.ಜಿ. ಸಿದ್ದರಾಮಯ್ಯನವರು ಉದ್ಘಾಟಿಸಿ ಮಾತನಾಡಿ, ಹಲಸಂಗಿ ಗೆಳೆಯರ…

Read More

ಪ್ರವಾಸೋದ್ಯಮ ಅಭಿವೃದ್ದಿಯೊಂದಿಗೆ ಪರಿವರ್ತನೆಯಡೆಗೆ ಸಾಗುತ್ತಿರುವ ಜಿಲ್ಲೆ-ಶಾಸಕ ವಿಠ್ಠಲ ಕಟಕದೊಂಡ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ.27:ಬರಗಾಲ ಜಿಲ್ಲೆ ಎಂದು ಪ್ರಸಿದ್ಧಿ, ನೀರಿಗೂ ತತ್ವಾರ ಇದ್ದ ವಿಜಯಪುರ ಇಂದು ಹಸರಿನಿಂದ ಕಂಗೋಳಿಸುತ್ತಿದೆ. ಪ್ರವಾಸೋದ್ಯಮ ಅಭಿವೃದ್ದಿಯೊಂದಿಗೆ ಪರಿವರ್ತನೆಯಡೆಗೆ ಸಾಗುತ್ತಿದೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಶನಿವಾರ ನಗರದ ಶಿವಗಿರಿಯಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ವಿಶ್ವವಿಖ್ಯಾತ ಗೋಳಗುಮ್ಮಟದೊಂದಿಗೆ ಐತಿಹಾಸಿಕ ತಾಣಗಳುಳ್ಳ ವಿಜಯಪುರ ಬರಗಾಲಕ್ಕೆ ತುತ್ತಾಗಿದ್ದ ಜಿಲ್ಲೆ. ಸಚಿವ ಎಂ.ಬಿ.ಪಾಟೀಲರು ನೀರಾವರಿ ಸಚಿವರಾಗಿದ್ದ…

Read More

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಡಿಸಿಎಂ ಡಿಕೆಶಿ ಭಾಗಿ

ಸಪ್ತಸಾಗರ ವಾರ್ತೆ, ರಾಮನಗರ, ಸೆ. 27: ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಮನಗರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್ ಎಂ ರೇವಣ್ಣ, ಶಾಸಕರಾದ ಇಕ್ಬಾಲ್ ಹುಸೇನ್, ಸಿ ಪಿ ಯೋಗೇಶ್ವರ್, ಎಂಎಲ್ಸಿ ಎಸ್ ರವಿ, ಉಪಾಧ್ಯಕ್ಷ ಸೂರಜ್ ರೇವಣ್ಣ, ಮಾಜಿ ಶಾಸಕ, ಗ್ಯಾರಂಟಿ ಸಮಿತಿ…

Read More

ರಷ್ಯಾ ನೆಲದಲ್ಲಿ ಶಿಫಾ’ ವಿಶ್ವಶಾಂತಿ ಸಂದೇಶ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 27: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿದ ಕುಮಾರಿ ಶಿಫಾ ಜಮಾದಾರ ವಿಶ್ವಶಾಂತಿಯ ಅಗತ್ಯತೆ, ಶಾಂತಿ ಸಂದೇಶ ಸಾರುವಲ್ಲಿ ಭಾರತದ ಪಾತ್ರ ಕುರಿತು ಮನಮುಟ್ಟುವಂತೆ ಮಾತನಾಡುವ ಮೂಲಕ ರಷ್ಯಾದಲ್ಲಿ ಶಾಂತಿ ಮಂತ್ರದ ಸಂದೇಶ ಸಾರಿದ್ದಾರೆ. ರಷ್ಯಾ ಅಧ್ಯಕ್ಷ ವಾಡ್ಲಿಮೀರ್ ಪುಟೀನ್, ರಾಷ್ಟ್ರಪತಿ ಮಯನ್ಮಾರ್, ಪ್ರಧಾನಿ ಅರ್ಮೇನಿಯಾ, ಇತೋಫಿಯಾ ಪ್ರಧಾನ ಮಂತ್ರಿ, ಬೇಲಾರೂಸ್ ಪ್ರಧಾನಿ…

Read More

ಭೀಮಾ ನದಿಗೆ ಪ್ರವಾಹ: 8 ಜನರ ರಕ್ಷಣೆ

ರುದ್ರಪ್ಪ ಆಸಂಗಿ ಸಪ್ತಸಾಗರ ವಾರ್ತೆ ವಿಜಯಪುರ, ಸೆ. 27:ಕಳೆದ ಮೂರು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಭೀಮಾ ನದಿಗೆ ಪ್ರವಾಹ ಬಂದು ಜನಜೀವನ ಅಸ್ತವ್ಯಸ್ತವಾಗಿದೆ. ತೋಟದ ಜಮೀನಿನಲ್ಲಿ ನೀರು ಸುತ್ತುವರಿದ ಪರಿಣಾಮ ಮಧ್ಯೆದಲ್ಲಿ ಸಿಲುಕಿಕೊಂಡಿದ್ದ ಎಂಟು ಜನರನ್ನು ರಕ್ಷಿಸಲಾಗಿದೆ.ಜಿಲ್ಲೆಯ ಆಲಮೇಲ ತಾಲೂಕಿನ ತಾವರಖೇಡ ಗ್ರಾಮದಲ್ಲಿ ಪ್ರವಾಹ ಉಂಟಾಗಿ ನದಿ ದಂಡೆ ಜಮೀನುಗಳಿಗೆ ನೀರು ನುಗ್ಗಿದೆ. ನೋಡು ನೋಡುತ್ತಿದ್ದಂತೆಯೇತೋಟದ ಮನೆ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನುಗ್ಗಿ ಸಿಲುಕಿದ್ದ 8 ಜನರನ್ನು ಬೋಟ್ ಬಳಸಿ ರಕ್ಷಣೆ…

Read More

ಹವಾಮಾನ ಇಲಾಖೆ ಮುನ್ಸೂಚನೆ: ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 26: ಜಿಲ್ಲೆಯಲ್ಲಿ ಸೆ.26 ರಿಂದ 28ರವರೆಗೆ ಬಿರುಗಾಳಿಯೊಂದಿಗೆ ಭಾರಿ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಾಗೂ ಸೆ.29 ರಿಂದ ಅ.03ರವರೆಗೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಹಾಗೂ ಕೆಎಸ್‍ಎನ್‍ಡಿಎಂಸಿ ಮುನ್ಸೂಚನೆಗಳನ್ನು ನೀಡಿದ್ದು, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ರಕ್ಷಣೆ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸನ್ನದ್ಧರಾಗಿರಲು ಮತ್ತು ರಜೆ ಮೇಲೆ ತೆರಳಲು-ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರಿಯವರ ಪೂರ್ವಾನುಮತಿ ಪಡೆಯುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ….

Read More

ಪ್ರತಿ ಕ್ವಿಂಟಲ್ ಗೆ 7221 ರೂ. ಬೆಂಬಲ ಬೆಲೆಯಡಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 26: ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರವು ಬೆಂಬಲ ಬೆಲೆ ಘೋಷಿಸಿರುವ ಎಫ್‍ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಲ್‍ಗೆ 7721 ರೂ. ಬೆಂಬಲೆ ಬೆಲೆಯಡಿ ಖರೀದಿಗೆ ರೈತರ ನೋಂದಣಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿ ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.ಸೆ.26ರಂದು ನಡೆದ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ…

Read More

ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಚಿತ್ರಕಲಾ ಶಿಬಿರಕ್ಕೆ ಚಾಲನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 26: ನಾವು ಆದಿಕಾಲದಲ್ಲಿ ಗಿಡ ಮರಗಳ ಅಡಿಯಲ್ಲಿ ವಿವಿಧ ಪ್ರಕಾರಗಳ ವೈವಿದ್ಯಮಯ ಆಟ ಪಾಠ, ವಿದ್ಯಾಭ್ಯಾಸದ ಜೊತೆಗೆ ಇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂತೋಷವನ್ನು ಹಂಚಿಕೊಳ್ಳುವ ಪ್ರಸಂಗ ಇಂದು ಮರಳಿ ನೆನಪಿಸುವಂತಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಧಾರವಾಡ ವೃತ್ತದ ಅಧೀಕ್ಷಕ ಪುರಾತತ್ವವೀಧರ ರಮೇಶ ಮೂಲಿಮನಿ ಹೇಳಿದರು.ಶುಕ್ರವಾರ ನಗರದ ಗೋಳಗುಮ್ಮಟ ಆವರಣದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಜೈನ್ ವಿಶ್ವವಿದ್ಯಾಲಯ ಬೆಂಗಳೂರು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಪ್ರವಾಸೋದ್ಯಮ ಮಂತ್ರಾಲಯ ಬೆಂಗಳೂರು ಹಾಗೂ…

Read More

ಶಿಸ್ತು, ಸಮರ್ಪಣೆಯಿಂದ ಸಾಧನೆ ಸಾಧ್ಯ-ಡಾ.ಶಿವಕುಮಾರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 26 :ಶೈಕ್ಷಣಿಕ ಜೀವನದಲ್ಲಿ ಶಿಸ್ತು, ಸಮರ್ಪಣೆ ಮತ್ತು ನಾವೀನ್ಯತೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ ಎಂದು ಶ್ರೀಶರಣಬಸವೇಶ್ವರ ಫಾರ್ಮಸಿ ಕಾಲೇಜಿನ ಪ್ರಾಚಾರ್ಯ ಡಾ.ಎಚ್. ಶಿವಕುಮಾರ ಕಿವಿಮಾತು ಹೇಳಿದರು.ನಗರದ ಶ್ರೀ ಶರಣಬಸವೇಶ್ವರ ಫಾರ್ಮಸಿ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷಾರಂಭದ ವರ್ಷದ ಬಿ.ಫಾರ್ಮಸಿ ಮತ್ತು ಡಿ.ಫಾರ್ಮಸಿ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯಾವುದೇ ಶಿಕ್ಷಣ ಸಂಸ್ಥೆ ತಮ್ಮಲ್ಲಿ ಓದಲು ಬರುವ ಮಕ್ಕಳ ಉಜ್ವಲ ಭವಿಷ್ಯಕ್ಕೆ ಅಗತ್ಯ ಇರುವ…

Read More