ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಪಡೆದು ಬದುಕು ರೂಪಿಸಿಕೊಳ್ಳಬೇಕು-ಡಾ. ವಿಜಯಾ ಕೋರಿಶೆಟ್ಟರ
ಸಪ್ತಸಾಗರ ವಾರ್ತೆ, ವಿಜಯಪುರ, ನ. 30ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಪಡೆದು ಬದುಕು ರೂಪಿಸಿಕೊಳ್ಳಬೇಕು ಎಂದು ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕುಲಪತಿ ಡಾ. ವಿಜಯಾ ಕೋರಿಶೆಟ್ಟರ ಹೇಳಿದರು.ಪರೀಕ್ಷಾ ವಿಭಾಗ ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ ಗರ್ಲ್ಸ್ ಅಂಡ್ ಎಸ್.ಸಿ./ ಎಸ್.ಟಿ ಸ್ಟೂಡೆಂಟ್ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಸಮಾಜ ಬದಲಾವಣೆ ಆದಂತೆ ಶೈಕ್ಷಣಿಕ ವ್ಯವಸ್ಥೆ ಬದಲಾವಣೆ ಆಗುತ್ತಿದೆ. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ…


