ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲೂ ರೈತರ ಸಾಲಮನ್ನಾ ಮಾಡಿ
ಪ್ರತಿ ಎಕರೆಗೆ ₹50 ಸಾವಿರ ಬರ ಪರಿಹಾರ ನೀಡಲು ಪರಶುರಾಮಸಿಂಗ್ ರಜಪೂತ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 28:ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರೆಯ ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಕೂಡಲೇ ರೈತರ ಎರಡು ಲಕ್ಷ ರೂ.ವರೆಗೆ ಸಾಲಮನ್ನಾ ಮಾಡುವ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದು ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಪರಶುರಾಮಸಿಂಗ್ ರಜಪೂತ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬರ ಪರಿಹಾರ ಹಾಗೂ…


