ಅನುದಾನ ಲಭ್ಯತೆ ಆಧರಿಸಿ ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜ್: ಸಚಿವ ಎಂ.ಬಿ. ಪಾಟೀಲ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 6 :ಅನುದಾನ ಲಭ್ಯತೆ ಆಧರಿಸಿ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಲಾಗುವುದು.ಪಿಪಿಪಿ ಮಾಡುವುದಿಲ್ಲ. ಅನುದಾನ ಲಭ್ಯತೆ ನೋಡಿಕೊಂಡು ಸರ್ಕಾರಿ ಮೆಡಿಕಲ್ ಕಾಲೇಜು ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಹೀಗಿದ್ದೂ ಈ ಕುರಿತು ಲಿಖಿತ ರೂಪದಲ್ಲಿ ಭರವಸೆ ಕೊಡಬೇಕು. ಕ್ಯಾಬಿನೆಟ್ ನಲ್ಲಿ ಘೋಷಿಸಬೇಕು ಎಂದು ಪಟ್ಟು ಹಿಡಿದು…


