ಮಕ್ಕಳ ಮನೋಲೋಕ ಕುರುಡಾಗಬಾರದು: ಕೆ.ವಿ.ಪ್ರಭಾಕರ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ.7:ಮನೆಯೇ ಮೊದಲ ಶಾಲೆ ಎನ್ನುವುದು ಹೋಗಿ ಮೊಬೈಲೇ ಮೊದಲ ಶಾಲೆಯಂತಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.ಪ್ರೆಸ್ ಕ್ಲಬ್ ಮತ್ತು ಬಾಲ ಭವನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಮಕ್ಕಳ ಜಾತ್ರೆ” ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.ನಗರಗಳಲ್ಲಿ ಇರುವ ಮಕ್ಕಳು ಮಣ್ಣಿನಿಂದ ಬೇರ್ಪಟ್ಟು, ನೆಲದ ಆಟ ಪಾಠಗಳಿಂದ ದೂರ ಆಗಿದ್ದಾರೆ. ವೃದ್ದಾಶ್ರಮಗಳು ಹೆಚ್ಚಾಗುತ್ತಾ ಅಜ್ಜ-ಅಜ್ಜಿ ಕತೆಗಳಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ಜೊತೆಗೆ ತಮ್ಮ ಆಟದ ಸಾಮಾನುಗಳನ್ನು ತಾವೇ ಸೃಷ್ಟಿಸಿಕೊಳ್ಳುವ ಕ್ರಿಯಾಶೀಲತೆಯೂ ಕಾಣೆಯಾಗಿ, ಪ್ಲಾಸ್ಟಿಕ್ ಆಟದ…

Read More

ಧಾರವಾಡ ಜಿಲ್ಲೆಯಲ್ಲಿ ಹುಟ್ಟಿದರೂ ಬಸವನಾಡಿನಲ್ಲಿ ಸಹಕಾರಿ ಅಭ್ಯುದಯ : ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ. 7: ಕೃಷಿ ಆಧಾರಿತ ಗ್ರಾಮೀಣ ಜೀವನ ಉನ್ನತೀಕರಣದಲ್ಲಿ ಸಹಕಾರಿ ರಂಗದ ಕೊಡುಗೆ ಅನುಪಮ. ಸಿದ್ಧನಗೌಡ ಪಾಟೀಲ ಅವರಿಂದ ಅಖಂಡ ಧಾರವಾಡ ಜಿಲ್ಲೆಯಲ್ಲಿ ಜನ್ಮ ಪಡೆದರೂ ಸಹಕಾರಿ ಚಳುವಳಿ ಅಭ್ಯದಯ ಸಾಧಿಸಿರುವುದು ಬಸವನಾಡಿನಲ್ಲಿ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಬಣ್ಣಿಸಿದರು.‌ಭಾನುವಾರ ನಗರದಲ್ಲಿ ಹೊರ್ತಿ ಶ್ರೀಶಾಂತೇಶ್ವರ ವಿವಿಧೋದ್ದೇಶ ಸಹಕಾರಿ ಸಂಘದ ರಜತ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ವಿಜಯಪುರ ಬಾಗಲಕೋಟೆ ಸೇರಿದಂತೆ ಅಖಂಡ…

Read More

ಸಮಾಜ ಸುಧಾರಣೆಗಾಗಿ ನಾರಾಯಣ ಗುರುಗಳ ಸೇವೆ ಅನನ್ಯ -ಸೋಮಲಿಂಗ ಗೆಣ್ಣೂರ

ಸಪ್ತಸಾಗರ ವಾರ್ತೆ ವಿಜಯಪುರ ಸೆ.7: ಅಂದಿನ ಸಮಾಜದಲ್ಲಿನ ಮೂಢನಂಬಿಕೆ ಹಾಗೂ ಮೌಢ್ಯತೆ, ಅಸಮಾನತೆ ನಿವಾರಿಸುವ ಮೂಲಕ ಸಮಾಜ ಸುಧಾರಣೆಗಾಗಿ ಬ್ರಹ್ಮಶ್ರೀ ನಾರಾಯಣಗುರುಗಳು ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇವರ ಸಹಯೋಗದಲ್ಲಿ ಭಾನುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮೌಢ್ಯತೆ, ಶೋಷಣೆಗಳಿಂದ ತುಂಬಿದ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಶ್ರಮಿಸಿದ ಬ್ರಹ್ಮಶ್ರೀ ಅವರ…

Read More

ಅಕ್ರಮ ಅಕ್ಕಿ ಸಾಗಾಟ: ಅಕ್ಕಿ ವಶ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ.7:ನಗರ ಹೊರ ವಲಯದ ಭೂತನಾಳ ಕೆರೆಯ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ,ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.ಭೂತನಾಳ ಕೆರೆ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ರೂ.7,83,760‌ ಮೌಲ್ಯದ 346 ಕ್ವಿಂಟಲ್ 26 ಕೆಜಿ ಅಕ್ಕಿ‌ ಹಾಗೂ ಲಾರಿ ವಶಕ್ಕೆ ಪಡೆದು ಶೇಖರ ಮದ್ಯೆಯನ್ ಎಂಬುವವರ ಮೇಲೆ ಆದರ್ಶ…

Read More

ಶಿಕ್ಷಕ ನಬಿ ಪಟೇಲ್ ವಡಿಗೇರಿ ಸೇವೆ ಶ್ಲಾಘನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 7: ಹಲಸಂಗಿ ಮಧುರಚೆನ್ನರ ಒಡನಾಡಿಯಾಗಿದ್ದ ನಬಿಪಟೇಲ್ ವಡಗೇರಿ ಶಿಕ್ಷಕರ ಸೇವೆ ಶ್ಲಾಘನೀಯವಾಗಿದ್ದು, ಶಿಕ್ಷಣದೊಂದಿಗೆ ಸಾಮಾಜಿಕ ರಂಗದಲ್ಲೂ ಉತ್ಕೃಷ್ಠ ಸೇವೆ ಸಲ್ಲಿಸಿ ಶಿಷ್ಯಬಳಗದ ಹೃದಯದಲ್ಲಿ ಅಜರಾಮರರಾಗಿದ್ದಾರೆ ಎಂದು ಹಿರಿಯ ಸಾಹಿತಿ ಸಿದ್ದಣ್ಣ ಲಂಗೋಟಿ ಹೇಳಿದರು.ನಗರದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಅಲ್‌ಹಜ್ ನಬಿಪಟೇಲ್ ವಡಗೇರಿಯವರ ಸಂಸ್ಮರಣ ಗ್ರಂಥ ವಡಗೇರಿ ನಮಃ, ಬಿ ಆರ್ ಪೊಲೀಸ್‌ಪಾಟೀಲ ರಚಿಸಿದ ತುಲಾಭಾರ ಪ್ರಸಂಗ ಹಾಗೂ ತುಲಾಭಾರ ನಾಟಕ ಗ್ರಂಥಗಳ ಲೋಕಾರ್ಪಣೆ ಹಾಗೂ ಆದರ್ಶ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ…

Read More

ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತಗೊಳಿಸಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.7:ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತ ಮಾಡಬಾರದು.‌ ಇವರು ಸರ್ವ ಸಮುದಾಯದ ನಾಯಕ. ನಾಡಿನ ಸಾಂಸ್ಕೃತಿಕ, ಸಾಮಾಜಿಕ ನಾಯಕ. ಆದ ಕಾರಣಕ್ಕೆ ನಮ್ಮ‌ ಸರ್ಕಾರ ಇವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ರಾಜಾಜಿನಗರದಲ್ಲಿ ಶನಿವಾರ ನಡೆದ ಬಸವಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.ಮಹಾನ್ ಜ್ಞಾನಿಗಳು, ವಿಜ್ಞಾನಿಗಳು, ಚಿಂತಕರು, ಸಾಹಿತಿಗಳು ಪುಟಗಟ್ಟಲೆ ಹೇಳುವುದನ್ನು ಜನಸಾಮಾನ್ಯರಿಗೆ ಅರ್ಥವಾಗುವಂತೆ ನಾಲ್ಕೈದು ಸಾಲಿನಲ್ಲಿ ತಿಳಿಸಿದ ಮಹಾನ್ ನಾಯಕ ಬಸವಣ್ಣನವರು ಎಂದರು.ಅವರ ಒಂದೊಂದು ವಚನವನ್ನಿಟ್ಟುಕೊಂಡು…

Read More

ಗಣಪತಿ ವಿಸರ್ಜನೆ: ವಿದ್ಯುತ್ ಅವಘಡದಲ್ಲಿ ಸಾವಿಗೀಡಾದ ಯುವಕನ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಒತ್ತಾಯ

ಸಪ್ತಸಾಗರ ವಾರ್ತೆ ವಿಜಯಪುರ,ಸೆ. 7:ಗಣಪತಿ ವಿಸರ್ಜನೆ ವೇಳೆಯಲ್ಲಿ ವಿದ್ಯುತ್ ಅವಘಡ ಸಂಭವಿಸಿ ಸಾವಿಗೀಡಾದ ಯುವಕನ ಕುಟುಂಬಕ್ಕೆ 25 ಲಕ್ಷ ಹಾಗೂ ಗಾಯಗೊಂಡ ಇಬ್ಬರಿಗೆ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ದೊರಕಿಸಿ ಕೊಡುವಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲರಿಗೆ ಮರಾಠಿ ಸೇವಾ ಸಂಘದ ಅಧ್ಯಕ್ಷ ಜ್ಯೋತಿರಾಮ ಪವಾರ ಮನವಿ ಮಾಡಿಕೊಂಡಿದ್ದಾರೆ.ತಾವು ಈ ಹಿಂದೆ ಡೋಬಳೆ ಗಲ್ಲಿ ವಾಡ್೯ನಂ. 2 ರಿಂದ ನಗರ ಸಭೆಯ ಅಧ್ಯಕ್ಷರು ಹಾಗೂ ಸದಸ್ಯರಾಗಿ ಸೇವೆ ಸಲ್ಲಿಸಿರುವಿರಿ.ಗಣೇಶ ವಿಸ೯ಜನೆ ವೇಳೆ ಹೆಸ್ಕಾಂ ನಿಲ೯ಕ್ಷ್ಯದಿಂದ ಹಾಗೂ…

Read More

ಒಳ ಮೀಸಲಾತಿ ಜಾರಿ ವಿರೋಧಿಸಿ ಉಗ್ರ ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 6 : ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಗಾಂಧಿ ಚೌಕ ಮಾರ್ಗವಾಗಿ ಬಸವೇಶ್ವರ ವೃತ್ತ ಅಂಬೇಡ್ಕರ್ ವೃತ್ತದ ಮೂಲಕ ಹಾಯ್ದು ಜಿಲ್ಲಾಧಿಕಾರಿಗಳಿಗೆ ತೆರಳಿ ಬಂಜಾರಾ ಭೋವಿ ಕೋರಚ ಕೋರಮ ಭಜಂತ್ರಿ ಸಮುದಾಯ ಸೇರಿಕೊಂಡು ತಮ್ಮ ಕುಲ ಕಸಬು ಪ್ರದರ್ಶನ ಮಾಡಿ ಉಗ್ರವಾಗಿ ಪ್ರತಿಭಟಿಸಿ ಮನವಿ ಸಲ್ಲಿಸಿದರು.ಬಂಜಾರ ಸಮುದಾಯದ ಮುಖಂಡ ಮಹೇಂದ್ರಕುಮಾರ ನಾಯಕ ಮಾತನಾಡಿ, ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ನೀಡುವ ಸಂಬಂಧ ನಿವೃತ್ತ ನ್ಯಾ ಎಚ್.ಎನ್.ನಾಗಮೋಹನ್ ದಾಸ್‌ ಆಯೋಗದ ವರದಿ ಸಂಪೂರ್ಣ…

Read More

ಗಣೇಶ ವಿಸರ್ಜನೆ: ವಿದ್ಯುತ್ ತಗುಲಿ ಯುವಕ ಸಾವು ಪ್ರಕರಣ, ಯುವಕನ ಸಹೋದರಿಗೆ ಸಿದ್ದಸಿರಿ ಸೌಹಾರ್ದದಲ್ಲಿ ನೌಕರಿ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 6: ನಗರದಲ್ಲಿ ಗಣೇಶ ವಿಸರ್ಜನೆ ವೇಳೆ ಈಚೆಗೆ ವಿದ್ಯುತ್ ಸ್ಪರ್ಶದಿಂದ ನಡೆದ ದುರ್ಘಟನೆಯಲ್ಲಿ ಮೃತಪಟ್ಟ ಡೋಬಳೆ ಗಲ್ಲಿಯ ಯುವಕ ಶುಭಂ ಸಂಕಪಾಲ ಅವರ ಮನೆಗೆ ಹಾಗೂ ಗಾಯಗೊಂಡ ಯುವಕರ ಮನೆಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಶನಿವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಈ ವೇಳೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು, ಗಣೇಶ ವಿಸರ್ಜನೆ ವೇಳೆ ವಿದ್ಯುತ್ ಸ್ಪರ್ಶದಿಂದ ದುರ್ಘಟನೆ ನಡೆದಿರುವುದು ಅತ್ಯಂತ ನೋವಿನ ವಿಷಯ. ಇದೊಂದು…

Read More

ಕೃಷ್ಣಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ : ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ -ಮುಖ್ಯಮಂತ್ರಿ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.6: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.ಶನಿವಾರ ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣಾ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಪರಿಹಾರ ಕೋರಿ ನ್ಯಾಯಾಲಯದ…

Read More