ಸಪ್ತಸಾಗರ ವಾರ್ತೆ, ವಿಜಯಪುರ, ಆ. 22: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ ಬಸವನಬಾಗೇವಾಡಿ ಇವರ ಸಂಯುಕ್ತಾಶ್ರಯದಲ್ಲಿ ಆ.30ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಅಂದು ಮಧ್ಯಾಹ್ನ 12 ಗಂಟೆಗೆ ಬಸವನಬಾಗೇವಾಡಿ ಪುರಸಭೆ ಕಾರ್ಯಾಲಯದ ಸಭಾ ಭವನದಲ್ಲಿ ಅಭಿಯಾನವನ್ನು ಜಿಲ್ಲಾ ನ್ಯಾಯಾಧೀಶರು ಹಾಗೂ ಕಲಬ್ಬುರ್ಗಿ ಖಾಯಂ ಜನತಾ ನ್ಯಾಯಾಲಯ ಅಧ್ಯಕ್ಷರಾದ ನ್ಯಾಯಾಧೀಶ ಎಸ್.ಎಲ್.ಚವ್ಹಾಣ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಸವನಬಾಗೇವಾಡಿ ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಹಿರಿಯ ಸಿವಿಲ್ ನ್ಯಾಯಾಧೀಶ ಶಶಿಧರ ಎಂ.ಗೌಡ, ಕಲಬುರಗಿ ಖಾಯಂ ಜನತಾ ನ್ಯಾಯಾಲಯದ ಸದಸ್ಯ ನ್ಯಾಯಾಧೀಶ ವಿಜಯ ವಿಠ್ಠಲ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ ಮುಸಲ್ಮಾರಿ, ಸಿವಿಲ್ ನ್ಯಾಯಾಧೀಶರಾದ ಅಮಿತ ಘಟ್ಟಿ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಈರಪ್ಪ ಢವಳೇಶ್ವರ, ಬಾಗೇವಾಡಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ, ಡಿವೈಎಸ್‍ಪಿ ಬಲ್ಲಪ್ಪ ನಂದಗಾಂವಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಸಿದ್ದಯ್ಯ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿಗಳು ಹಾಗೂ ಮಧ್ಯಸ್ಥಗಾರ ವಿ.ಬಿ.ಮರ್ತುರ ಹಾಗೂ ನ್ಯಾಯವಾದಿ ಪಿ.ಬಿ.ಪತ್ತಾರ ಅತಿಥಿ ಉಪನ್ಯಾಸಕರಾಗಿ ಭಾಗವಹಿಸಲಿದ್ದಾರೆ.
ಬಸವನಬಾಗೇವಾಡಿಯಲ್ಲಿಆ.30ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ
