ಪೆಟ್ರೋಲ್,ಡಿಸೇಲ್ ಕೊರತೆ ಸುಳ್ಳು ಸುದ್ದಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ – ಸಂದೀಪ್ ಪಾಟೀಲ‌ ಝಳಕಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 25:
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳ ಪರಿಣಾಮವಾಗಿ ಪೆಟ್ರೋಲ್ ಬಂಕ್‌ಗಳ ಮುಂದೆ ಜನರು ಪೆಟ್ರೋಲ್ ಪಡೆಯಲು ಮುಗಿಬಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ ಝಳಕಿ ಹೇಳಿದ್ದಾರೆ.
ಭಾರತಕ್ಕೆ ಅಗತ್ಯವಿರುವ ಕಚ್ಚಾ ತೈಲ, ಅನಿಲ ಮತ್ತು ರಸಗೊಬ್ಬರಗಳು ಯುದ್ಧದ ಸವಾಲುಗಳ ನಡುವೆಯೂ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಮ್ಮ ಸರ್ಕಾರ ನಿರಂತರ ಶ್ರಮಿಸುತ್ತಿದೆ. ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ ಎಂದು ಸ್ವತಃ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರೇ ಹೇಳಿದ್ದಾರೆ. ಇತ್ತೀಚೆಗೆ ಪೆಟ್ರೋಲ್ ಕೊರತೆ ಉಂಟಾಗಲಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ, ನಾಗರಿಕರು ಆತಂಕಗೊಂಡು ಬಂಕ್‌ಗಳತ್ತ ದೌಡಾಯಿಸುತ್ತಿದ್ದಾರೆ. ಇದರಿಂದ ಅನಾವಶ್ಯಕ ಗೊಂದಲ ಮತ್ತು ಜನಸಂದಣಿ ಉಂಟಾಗಿದೆ.
ಸಂಬಂಧಿತ ಅಧಿಕಾರಿಗಳು ಹಾಗೂ ಪೆಟ್ರೋಲ್ ವಿತರಕರು ಇಂತಹ ಯಾವುದೇ ಕೊರತೆ ಇಲ್ಲವೆಂದು ಸ್ಪಷ್ಟಪಡಿಸಿದ್ದು, ಜನರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this