ಸಪ್ತಸಾಗರ ವಾರ್ತೆ ವಿಜಯಪುರ, ಸೆ. 30: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಯಾಣಿಕರ ಅಹವಾಲು- ಕುಂದುಕೊರತೆಗಳನ್ನು ಆಲಿಸಲು ಅಕ್ಟೋಬರ್ 6ರ ಮಧ್ಯಾಹ್ನ 3-30ರಿಂದ 4-30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೊ : 6366423887ಗೆ ಸಾರ್ವಜನಿಕರು ಕರೆ ಮಾಡಿ ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


