ಫೆ.2 ರಂದು ಫೋನ್-ಇನ್ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ.1:
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸಲು ಫೆ.2ರಂದು ಮಧ್ಯಾಹ್ನ 3.30 ರಿಂದ 4.30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೊ. 6366423887 ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this