ಸೆ.5ರಂದು ಚಡಚಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.3:
ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವರ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಸೆ.5ರಂದು ಬೆಳಿಗ್ಗೆ 10:30 ಗಂಟೆಗೆ ಚಡಚಣ ಪಟ್ಟಣದ ಗೋಡಿಹಾಳ ರಸ್ತೆಯಲ್ಲಿರುವ ಗುರುಕೃಪ ಮಂಗಲ ಕಾರ್ಯಾಲಯದಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ನಾಗಠಾಣ ವಿಧಾನಸಭಾ ಕ್ಷೇತ್ರದ ಶಾಸಕರು ಉಪಸ್ಥಿತರಿರುವರು.
ಈ ಸಭೆಯಲ್ಲಿ ಸಾರ್ವಜನಿಕರು ತಮ್ಮ ಕುಂದುಕೊರತೆಗಳು ಹಾಗೂ ಅಹವಾಲುಗಳನ್ನು ಸಲ್ಲಿಸುವುದರ ಜೊತೆಗೆ, ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸಲ್ಲಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this