ಸಪ್ತಸಾಗರ ವಾರ್ತೆ,ವಿಜಯಪುರ,ಏ.17:
ಡಾ. ರಾಜ್ಕುಮಾರ್ ಅವರ ಜನ್ಮದಿನಾಚರಣೆಯನ್ನು ಏಪ್ರಿಲ್ 24ರಂದು ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ದತಾ ಸಭೆಯನ್ನು ಅಪರ ಜಿಲ್ಲಾಧಿಕಾರಿಗಳು,
ವಿಜಯಪುರ ಇವರ ಅಧ್ಯಕ್ಷತೆಯಲ್ಲಿ ಏ.18ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಈ ಸಭೆಗೆ ಅಧಿಕಾರಿಗಳು, ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.
Editor
Rudrappa B Asangi
Editor
Managing Editor
Chetan Asangi
Managing Editor


