ಸಪ್ತಸಾಗರ ವಾರ್ತೆ, ವಿಜಯಪುರ, ಏ. 11:
ಈ ಸಲ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಕುರಿತು ಏ. 13ರಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಮ್.ಬಿ. ಪಾಟೀಲ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ(ಯತ್ನಾಳರು), ಸಂಸದರು, ವಿಜಯಪುರ ಜಿಲ್ಲಾ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು, ಸರಕಾರಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಶ್ರೀ ಸಿದ್ಧೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ಮುಂಜಾನೆ: 10-30 ಗಂಟೆಗೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಕಾರಣ ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರರು, ಉಪಮಹಾ ಪೌರರು ಮತ್ತು ನಗರ ಪಾಲಿಕೆಯ ಸದಸ್ಯರುಗಳು, ನಗರದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಮುದಾಯಗಳ ಮುಖಂಡರು ಹಾಗೂ ಬಸವಾಭಿಮಾನಿಗಳು ಸಭೆಗೆ ಸರಿಯಾದ ಸಮಯಕ್ಕೆ ಆಗಮಿಸಲು ಸಿದ್ದೇಶ್ವರ ಸಂಸ್ಥೆ ಚೇರಮನ್ ಬಸಯ್ಯ ಹಿರೇಮಠ ಪ್ರಕಟಣೆಯಲ್ಲಿ ಕೋರಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


