ವಿಜಯಪುರ ಕಾನಿಪ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ


ಸಪ್ತಸಾಗರ ವಾರ್ತೆ,ವಿಜಯಪುರ,11: ಜಿಲ್ಲೆಯಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಷ್ಕಾರ, ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಜು. 19ರಂದು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವಂತೆ ಸಚಿವ ಶಿವಾನಂದ ಪಾಟೀಲ, ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಕಾನಿಪ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರನ್ನು ಆವ್ಹಾನಿಸಲು ಜಿಲ್ಲೆಯ ಕಾನಿಪ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರರ್ಣಿ, ರಾಜ್ಯ ಕಾರ್ಯಕಾರಿ ನಾಮನಿರ್ದೇಶನ ಸದಸ್ಯ ಕೆ.ಕೆ.ಕುಲಕರ್ಣಿ ಹಾಗೂ ಜಿಲ್ಲಾ ಖಜಾಂಚಿ ರಾಹುಲ್ ಆಪ್ಟೆ ಅವರು ಬೆಂಗಳೂರಿಗೆ ತೆರಳಿ ಅತಿಥಿಗಳನ್ನು ಅಮಂತ್ರಿಸಿದರು.
ಈ ಎಲ್ಲ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವ ಭರವಸೆ ನೀಡಿದ್ದಾರೆ.

Share