ಪ್ರೊ. ಎ.ಎಚ್. ಕೊಳಮಲಿಗೆ ರಾಜ್ಯೋತ್ಸವ ಪ್ರಶಸ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 24: ನಾಡಿನ ಉದಯೋನ್ಮುಖ ಕವಿ, ಜಾನಪದ ವಿದ್ವಾಂಸ, ವಿಜಯಪುರ ನಗರದ ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಾಹಿತಿ, ಪ್ರೊ, ಅಡವಿಸ್ವಾಮಿ ಕೊಳಮಲಿ ಯವರಿಗೆ ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿಯು ಸಾಹಿತ್ಯ ರತ್ನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ.
ಕೊಳಮಲಿಯವರಿಗೆ ಈ ಮುಂಚೆ ಬಸವ ಭೂಷಣ, ಕರುನಾಡು ಕಿರೀಟ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಲಭಿಸಿವೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದಲ್ಲಿನ ನಯನ ಸಭಾಂಗಣದಲ್ಲಿ ನವೆಂಬರ್ 30 ರಂದು ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರೊ, ಅಡವಿ ಸ್ವಾಮಿ ಕೊಳಮಲಿಯವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕೊಳಮಲಿಯವರ ಸಮಗ್ರ ಸಾಹಿತ್ಯ ಸಾಧನೆಯನ್ನು ಪರಿಗಣಿಸಿ ಸಾಹಿತ್ಯ ರತ್ನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ಅಧ್ಯಕ್ಷ ಭದ್ರಾವತಿ ರಾಮಾಚಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this