ಧರ್ಮಸ್ಥಳ ಚಲೋ ನಿಮಿತ್ತ ಪ್ರತಿಭಟನೆ ಮೆರವಣಿಗೆ: ಸರ್ಕಾರದ ವಿರುದ್ಧ ಪ್ರತಿಭಟನೆಕಾರರ ಆಕ್ರೋಶ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29:
ಧರ್ಮಸ್ಥಳ ಸುಕ್ಷೇತ್ರ ವಿರುದ್ಧ ಷಡ್ಯಂತ್ರ ಖಂಡಿಸಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಯಿತು.
ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ನಗರದ ಗಾಂಧಿ ವೃತದಿಂದ ಬಸವೇಶ್ವರ ಹಾಗೂ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು. ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟಿರುವ ಆರೋಪ ಖಂಡಿಸಿ ಪ್ರತಿಭಟನೆಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಧರ್ಮದ ಉಳಿವಿಗಾಗಿ ಧರ್ಮ ಯುದ್ದ ಹೆಸರಿನಲ್ಲಿ ಹೋರಾಟ, ಸರ್ಕಾರದ ವಿರುದ್ದ ಪ್ರತಿಭಟನೆಕಾರರು ಘೋಷಣೆಗಳನ್ನು ಕೂಗಿದರು.
ಇದೇ ಸಂದರ್ಭದಲ್ಲಿ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಪರ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಹಿಂದೂಗಳನ್ನು ಕೆಣಕಿದರೆ ಸಮರ, ಎಡ ಪಂಥೀಯರೆ ಎಚ್ಚರ ಎಂಬಿತ್ಯಾದಿ ಭಿತ್ತಿಪತ್ರಗಳ ಪ್ರದರ್ಶನ ಮಾಡಿಧರು.
ಧರ್ಮಸ್ಥಳ ವಿರುದ್ದ ಷಡ್ಯಂತ್ರ ಮಾಡಲಾಗಿದೆ. ಷಡ್ಯಂತ್ರ ಮಾಡಿದವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ ಮಾತನಾಡಿ,
ಸಪ್ಟೆಂಬರ್ 1 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿಜಯಪುರ ಜಿಲ್ಲೆಯಿಂದ 64 ವಾಹನಗಳ ಮೂಲಕ ಬಿಜೆಪಿಯ ನೂರಾರು ಕಾರ್ಯಕರ್ತರು ತೆರಳುತ್ತೇವೆಂದು ಹೇಳಿದರು.
ಈ ವೇಳೆ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Share