ಸಪ್ತಸಾಗರ ವಾರ್ತೆ ವಿಜಯಪುರ, ಸೆ. ಅ. 1: ಜಿಲ್ಲೆಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ, ನಾಡಿನ ಕವಿಗಳಿಂದ ನಮಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಕೊಡಿ ಎಂಬ ವಿಷಯದ ಕುರಿತು
(ಅಕ್ಟೋಬರ್-5)ರಂದು ಮುಂಜಾನೆ 10ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿ
ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.
ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಅಥವಾ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ಸಂಬಂಧಪಟ್ಟ ವಿಷಯದ ಕುರಿತು ಕವನ ವಾಚಿಸಬಹುದು.
ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ, ವಿಜಯಪುರ ಪರವಾಗಿ ಹೆಸರು ನೋಂದಾಯಿಸಿಕೊಳ್ಳಲು ಮೊ. 72042 79187 ,96320 96714 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Editor
Rudrappa B Asangi
Editor
Managing Editor
Chetan Asangi
Managing Editor


