ರಾಷ್ಟ್ರಮಟ್ಟದ ಸೈಕ್ಲಿಂಗ್ ನಲ್ಲಿ ಪುನೀತ ಬಿರಾದಾರಗೆ ಬೆಳ್ಳಿ ಪದಕ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 10 : ಭಾರತೀಯ ಸೈಕ್ಲಿಂಗ್ ಫೆಡರೇಶನ್ ಹಾಗೂ ಸೈಕ್ಲಿಂಗ್ ಅಸೋಶಿಯೇಶನ್ ಆಫ್ ಓರಿಸ್ಸಾ ಸಹಯೋಗದಲ್ಲಿ ಸಂಬಾಲಪುರಲ್ಲಿ ನಡೆದ 30ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ ನಲ್ಲಿ ಬಿ. ಎಲ್. ಡಿ. ಇ ಸಂಸ್ಥೆಯ ಎಸ್. ಎಸ್. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪುನೀತ ಬಿರಾದಾರ 16 ವಯೋಮಾನದ ಬಾಲಕರ ವಿಭಾಗದ 30 ಕಿ.ಮೀ ಟೀಮ್ ಟೈಮ್ ಟ್ರಯಲ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ.ಬಿ. ಪಾಟೀಲ, ಉಪಾಧ್ಯಕ್ಷ ಜಿ.ಕೆ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನಿಲ ಬಿ. ಪಾಟೀಲ ,ಆಡಳಿತ ಅಧಿಕಾರಿ ಪ್ರೊ. ಆಯ್.ಎಸ್. ಕಾಳಪ್ಪನವರ, ಪ್ರಾಚಾರ್ಯ ಡಾ. ಜಿ.ಡಿ. ಅಕಮಂಚಿ ಹಾಗೂ ಸಮಸ್ತ ಸಿಬ್ಬಂದಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.

Share this