ಸೈಕ್ಲಿಂಗ್ ಕ್ರೀಡಾಕೂಟದಲ್ಲಿ ಪುನೀತ್ ಬಿರಾದಾರ ರಾಜ್ಯಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 20:
ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಜಯಪುರ ಹಾಗೂ ಕೋನಿಕ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ 2025-26ನೇ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸೈಕ್ಲಿಂಗ್ ಕ್ರೀಡಾಕೂಟದಲ್ಲಿ ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪುನೀತ್ ಬಿರಾದಾರ 1 ಕಿಮೀ ಟ್ರ್ಯಾಕ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಆಡಳಿತ ಅಧಿಕಾರಿಗಳಾದ ಪ್ರೊ ಆಯ್ ಎಸ್ ಕಾಳಪ್ಪನವರ ಪ್ರಾಚಾರ್ಯ ಡಾ. ಜಿ.ಡಿ. ಅಕಮಂಚಿ ಹಾಗೂ ಸಮಸ್ತ ಸಿಬ್ಬಂದಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.

Share this