ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ: ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಸಂತಾಪ

ಸಪ್ತಸಾಗರ ವಾರ್ತೆ,ವಿಜಯಪುರ ಏ. 12: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರು ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಭಾರತೀಯ ಸಂಗೀತ ಕ್ಷೇತ್ರದ ಅನನ್ಯ ಕಂಠ ಧ್ವನಿಯೊಂದು ಮೌನವಾಗಿದ್ದು, ದೇಶದ ಸಾಂಸ್ಕೃತಿಕ ಲೋಕಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.
ಅನೇಕ ದಶಕಗಳ ಕಾಲ ತಮ್ಮ ಸುಮಧುರ ಗಾಯನದಿಂದ ಭಾರತೀಯ ಚಿತ್ರರಂಗ ಹಾಗೂ ಸಂಗೀತಾಭಿಮಾನಿಗಳ ಮನಗೆದ್ದ ಆಶಾ ಭೋಸ್ಲೆ ಅವರು ಸಂಗೀತ ಕ್ಷೇತ್ರದ ದಿಗ್ಗಜರಾಗಿದ್ದು, ಅವರ ಸಾಧನೆ ಭಾರತೀಯ ಸಂಗೀತ ಇತಿಹಾಸದಲ್ಲಿ ಸದಾ ಅಜರಾಮರವಾಗಿರಲಿದೆ ಎಂದು ಕುಲಪತಿಗಳು ಅಭಿಪ್ರಾಯಪಟ್ಟಿದ್ದಾರೆ. ಭಾಷೆ, ಪೀಳಿಗೆ ಹಾಗೂ ಪ್ರಾಂತಗಳ ಮಿತಿಯನ್ನು ಮೀರಿ ಅವರ ಗಾಯನ ಎಲ್ಲರ ಮನದಲ್ಲಿ ಅಳಿಯದ ಗುರುತು ಮೂಡಿಸಿದೆ ಎಂದು ಅವರು ಹೇಳಿದ್ದಾರೆ.
ವಿಶ್ವವಿದ್ಯಾಲಯದ ಸಮಸ್ತ ಕುಟುಂಬದ ಪರವಾಗಿ ಆಶಾ ಭೋಸ್ಲೆ ಅವರ ಕುಟುಂಬಸ್ಥರು, ಅಭಿಮಾನಿಗಳು ಹಾಗೂ ಸಂಗೀತಲೋಕದ ಸದಸ್ಯರಿಗೆ ಸಂತಾಪ ಸೂಚಿಸಿರುವ ಪ್ರೊ. ವಿಜಯಾ ಕೊರಿಶೆಟ್ಟಿ ಅವರು, ಪರಮಾತ್ಮನು ಅಗಲಿದ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Share this