ಸಪ್ತಸಾಗರ ವಾರ್ತೆ,ವಿಜಯಪುರ, ಏ.7: 2026 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನ ಏಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್‌ಗೆ 6540.ರೂ. ಗಳಂತೆ ಖರೀದಿ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆಯ ಸಮಿತಿ ಅಧ್ಯಕ್ಷ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.
ಕುಸುಬೆ ಉತ್ಪನ್ನವನ್ನು ಪ್ರತಿ ಎಕರೆಗೆ 5 ಕ್ವಿಂಟಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿಸಲಾಗುತ್ತದೆ.
ನೋಂದಣಿ ಅವಧಿ 80 ದಿನಗಳವರೆಗೆ ಇದೆ. ಖರೀದಿ ಅವಧಿ 90 ದಿನ ಇರುತ್ತದೆ. ನೋಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತದೆ.
ಕೃಷಿ ಇಲಾಖೆಯಿಂದ ನೀಡಿರುವ ಎಫ್.ಆಯ್.ಡಿ ಸಂಖ್ಯೆ.ಆಧಾರ್ ಕಾರ್ಡ ನೀಡಿ ರೈತರು ಹೆಸರು ನೋಂದಾಯಿಸಬಹುದು.
ಪ್ರೊಟ್ಸ್ ತಂತ್ರಾಂಶದಲ್ಲಿ ಬೆಳೆ ಬೆಳೆಯುವುದು ಕಂಡು ಬರದಿದ್ದರೆ ಹತ್ತಿರದ ಕೃಷಿ ಇಲಾಖೆಗೆ ತೆರಳಿ ಅಕ್ಷೇಪಣೆ ಸಲ್ಲಿಸಿ ಸರಿಪಡಿಸಿಕೊಳ್ಳಬಹುದು.
ತಾಲೂಕಿನ ಕುಸುಬೆ ಖರೀದಿ ಕೇಂದ್ರ:
ಬಬಲೇಶ್ವರ ತಾಲೂಕು ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘ ಬಬಲೇಶ್ವರ, ಸವನಹಳ್ಳಿ, ಬೆಳ್ಳುಳ್ಳಿ, ತಾಜಪುರ, ವಿಜಯಪುರ ಟಿ.ಎ.ಪಿ.ಸಿ.ಎಂ.ಎಸ್ ವಿಜಯಪರ, ಮುದ್ದೇಬಿಹಾಳ ತಾಲೂಕಿನ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘ ತಂಗಡಗಿ, ಟಿ.ಎ.ಪಿ.ಸಿ.ಎಂ.ಎಸ್ ಮುದ್ದೇಬಿಹಾಳ, ತಾಳಿಕೋಟಿ, ಇಂಡಿ ತಾಲೂಕಿನ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘ ಹಲಸಂಗಿ, ಚಡಚಣ ಹಾಗೂ ಟಿ.ಎ.ಪಿ.ಸಿ.ಎಂ.ಎಸ್ ಇಂಡಿಯಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ ಎಂದವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ:7253732920 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


