ಏರ್ ಗನ್ ಹಾಗೂ ಕರಾಟೆ ಸ್ಪರ್ಧೆಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 31:
ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಉಪನಿರ್ದೇಶಕರ ಕಾರ್ಯಾಲಯ ವಿಜಯಪುರ ಮತ್ತು ಶ್ರೀ ಗುರುದೇವ ಪಬ್ಲಿಕ್ ಅಂತಾರಾಷ್ಟ್ರೀಯ ವಸತಿ ಶಾಲೆ ವಿಜಯಪುರ ಇವರ ಸಹಯೋಗದಲ್ಲಿ ನಡೆದ 2025-26ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಜಿಲ್ಲಾಮಟ್ಟದ ಕ್ರೀಡಾಕೂಟಗಳ ‘ಏರ್ ಗನ್ ಶೂಟಿಂಗ್
ಮತ್ತು ಕರಾಟೆ ಸ್ಪರ್ಧೆಗಳಲ್ಲಿ ವಿಜಯಪುರದ ಪ್ರತಿಷ್ಠಿತ ಬಿಎಲ್ ಡಿಇ ಸಂಸ್ಥೆಯ ಸಮನ್ವಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ.
ಕರಾಟೆ ಹಾಗೂ ಏರ್ ಗನ್ ಸ್ಪರ್ಧೆಯಲ್ಲಿ ಕುಮಾರಿ ಕಾವೇರಿ ನಾವಿ (35 ಕೆಜಿ) ಪ್ರಥಮ ಮತ್ತು ಕುಮಾರಿ ಕವನ ನಾವಿ (34 ಕೆಜಿ) ಕರಾಟೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇರ್ವರು ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ,ಪ್ರಧಾನ ಕಾರ್ಯದರ್ಶಿ, ಆಡಳಿತಾಧಿಕಾರಿ,ಶಾಲೆಯ ಮುಖ್ಯಗುರುಗಳು ಹಾಗೂ ಶಿಕ್ಷಕ ಬಳಗ ಅಭಿನಂದನೆ ಸಲ್ಲಿಸಿ,ರಾಜ್ಯಮಟ್ಟದಲ್ಲಿ ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ.

Share this