ಸಪ್ತಸಾಗರ ವಾರ್ತೆ ವಿಜಯಪುರ, ನ. 11 : ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ “2025-26ನೇ ಸಾಲಿನ ಮಕ್ಕಳ ದಿನಾಚರಣೆ” ನಿಮಿತ್ತ ನಗರದ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಂಡ 9-16 ವರ್ಷದೊಳಗಿನ ಜಿಲ್ಲಾಮಟ್ಟದ ಸೃಜನಾತ್ಮಕ ಬರವಣಿಗೆಯ ಸ್ಪರ್ಧೆಗಳಲ್ಲಿ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಸಮನ್ವಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ.
ಕತೆ, ಕವನ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ಕುಮಾರಿ ಶ್ರದ್ಧಾ ದತ್ತೂರೆ (ಪ್ರಥಮ ಸ್ಥಾನ) ಹಾಗೂ ಕುಮಾರಿ ವೈಭವಿ ಪತ್ತಾರ (ದ್ವಿತೀಯ ಸ್ಥಾನ ) ವಿಜೇತರಾಗಿ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ “ಚಿನ್ನರ ಕಲಾಶ್ರೀ” ಶಿಬಿರದ ಪ್ರಶಸ್ತಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇರ್ವರ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು, ಮುಖ್ಯ ಗುರುಗಳು ಹಾಗೂ ಶಿಕ್ಷಕರ ವೃಂದ ಅಭಿನಂದಿಸಿ, ರಾಜ್ಯಮಟ್ಟದಲ್ಲಿ ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ.
ಸೃಜನಾತ್ಮಕ ಬರವಣಿಗೆಯ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ


