ಸಪ್ತಸಾಗರ ವಾರ್ತೆ, ವಿಜಯಪುರ,ಫೆ. 3:
ರೇಷ್ಮೆ ಇಲಾಖೆಯಿಂದ 2023-24 ಹಾಗೂ 2024-25ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿರುವ ರೇಷ್ಮೆ ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕನಿಷ್ಠ ಒಂದು ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ, 100 ಮೊಟ್ಟೆಗೆ 65 ಕೆ.ಜಿ ಹಾಗೂ ಎಕರೆಗೆ ಕನಿಷ್ಠ 500 ಕೆ.ಜಿಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ ಬುಕ್ ಹಾಗೂ ರೇಷ್ಮೆಮೊಟ್ಟೆ-ಚಾಕಿ ಖರೀದಿಸಿರುವ ಹಾಗೂ ಮಾರಾಟ ಮಾಡಿರುವ ದಾಖಲೆ ಹೊಂದಿರಬೇಕು.
ಅರ್ಹ ರೇಷ್ನೆ ಬೆಳೆಗಾರರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು- ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು, ಫೆ. 7 ರೊಳಗೆ ಅರ್ಜಿ ಸಲ್ಲಿಸುವಂತೆ ರೇಷ್ಮೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


