ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:
ಪಕ್ಷದ ಸಂಘಟನೆಗೆ ಎಲ್ಲ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಕರೆ ನೀಡಿದರು.
ನಗರದಲ್ಲಿ ಶನಿವಾರ ನಡೆದ ಕಾತ್ರಾಳ ಗ್ರಾಮದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸರ್ವಜನರ ಅಭಿವೃದ್ಧಿ ಮತ್ತು ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಹೊಸ ಕಾರ್ಯಕರ್ತರ ಸೇರ್ಪಡೆಯಿಂದ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದ್ದು, ಹಳಬರು ಮತ್ತು ಹೊಸಬರು ಒಗ್ಗಟ್ಟಿನಿಂದ ಸಂಘಟನೆಯನ್ನು ಬಲಪಡಿಸಬೇಕು ಎಂದು ಹೇಳಿದರು.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮುಖಂಡರು ಮಾತನಾಡಿ, ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಅಭಿವೃದ್ಧಿ ಕಾರ್ಯಗಳಿಂದ ಪ್ರೇರಿತರಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇವೆ. ಸಚಿವ ಎಂ. ಬಿ. ಪಾಟೀಲ ಹಾಗೂ ಶಾಸಕ ಸುನೀಲಗೌಡ ಪಾಟೀಲ ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾತ್ರಾಳ ಗ್ರಾಮದ ಹಿರಿಯರು ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಡಾ. ಶ್ರೀಶೈಲ ಕೊಕಟನೂರ ಸೇರಿದಂತೆ ಹಣಮಂತ ಕೊಕಟನೂರ, ಮಹದೇವ ಕೊಕಟನೂರ, ನಾಗಪ್ಪ ಕೊಕಟನೂರ, ಸಿದ್ರಾಯ ನ್ಯಾಮಗೌಡ, ಮಲ್ಲಿಕಾರ್ಜುನ ಬಾಡಗಿ, ರಾಮಪ್ಪ ಕೊಕಟನೂರ, ಸಿದ್ರಾಯ ಕೊಕಟನೂರ, ಭೀಮಪ್ಪ ದುಂಡಪ್ಪ ಕೊಕಟನೂರ ಮತ್ತು ಇತರರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕ ಸುನೀಲಗೌಡ ಪಾಟೀಲ ಅವರು ಪಕ್ಷದ ಶಾಲು ಹೊದಿಸಿ ಅವರನ್ನು ಬರಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ.ಡಿ. ಪಡಸಲಗಿ, ಎಸ್.ಡಿ. ಗುಗ್ಗರಿ, ಬಾಳಪ್ಪ ಪಡಸಲಗಿ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಅಂಗಡಿ, ಮಾಜಿ ಸದಸ್ಯ ಇಮ್ತಿಯಾಜ್ ಜಮಾದಾರ, ಮಹಮ್ಮದಸಾಬ ಜಮಾದಾರ, ಗ್ಯಾರಂಟಿ ಸಮಿತಿಯ ಸದಸ್ಯ ಲಾಲಸಾಬ ಜಮಾದಾರ, ಸುರೇಶ ಚಿಕ್ಕಲಕಿ, ಹಣಮಂತ ಗಲಗಲಿ, ಇಬ್ರಾಹಿಂ ಗುರಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾತ್ರಾಳದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ


