ಜ.14ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ,ಜ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಜ.14ರಂದು ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9-30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭಾವಚಿತ್ರ ಮೆರವಣಿಗೆಗೆ ಚಾಲನೆ ನಡೆಯಲಿದ್ದು, ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸುವರು.
ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸಿಕೊಳ್ಳುವರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ–2 ಹಾಗೂ ಶಾಸಕ ಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ. ಎಸ್. ನಾಡಗೌಡ, ಸಂಸದರಾದ ರಮೇಶ ಜಗಜಿಣಗಿ, ಡಾ. ಸುಧಾ ಮೂರ್ತಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹನಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ, ವಿಠ್ಠಲ ಕಟಕಧೋಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮನಗೂಳಿ, ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಎಸ್.ಕವಲಗಿ,ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಕರಡಿ,ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಮುಶ್ರೀಫ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share this