ಸಪ್ತಸಾಗರ ವಾರ್ತೆ, ವಿಜಯಪುರ, ಆ. 21:
ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯವು ಬೆಂಗಳೂರಿನಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ತನ್ನ ಕ್ಯಾಂಪಸ್ ಅನ್ನು ಸ್ಥಾಪಿಸುತ್ತಿದೆ ಎಂದು ಬಿಎಲ್ ಡಿಇ ಡೀಮ್ಡ್ ವಿಶ್ವವಿದ್ಯಾಲಯ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Engineering, Computer Applications, Business Administration, Pharmacy, Law, Architecture, Design and Applied Sciences ಸೇರಿದಂತೆ ಹಂತ ಹಂತವಾಗಿ 8-10 ಕಾಲೇಜುಗಳನ್ನು ಆರಂಭಿಸಲಿದೆ. ಇದಲ್ಲದೇ ಅಂತಾರಾಷ್ಟ್ರೀಯ ಶಾಲೆಯನ್ನೂ ಸಹ ಪ್ರಾರಂಭಿಸಲು ಯೋಜಿಸಿದೆ ಎಂದರು.
ವಿವಿ ಈಗಾಗಲೇ ಇಂಜಿನಿಯರಿಂಗ್ ಮಹಾವಿದ್ಯಾಲಯ ಹೊಂದಿದ್ದು,
ಬಿ.ಎಲ್.ಡಿ.ಇ. ಸಂಸ್ಥೆಯ ಹೊಸ ಆವರಣದಲ್ಲಿ ಇನ್ನೊಂದು ಇಂಜಿನಿಯರಿಂಗ್ ಮಹಾವಿದ್ಯಾಲಯವನ್ನು ಸ್ಥಾಪಿಸಲು ಉದ್ದೇಶಿಸಿದೆ. ಅದರಲ್ಲಿ computer science, Data Science, Artificial intelligence and machine learning (AIML), Information science and Electronics and Communication ಮುಂತಾದ ಇಂಜಿನಿಯರಿಂಗ್ ಪದವಿ ವಿಭಾಗಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈ ಕಾಲೇಜು ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸಲಿದ್ದು, ಇಂದಿನ ಉದ್ಯಮದ ಅಗತ್ಯತೆಗಳನ್ನು ಪೂರೈಸಲು ಸಿದ್ಧಪಡಿಸಿದ ಪಠ್ಯಕ್ರಮವನ್ನು ವಿನ್ಯಾಸಗೊಳಿಸಲಾಗುವುದು. ಎ.ಐ.ಸಿ.ಟಿ.ಈ ಪ್ರಕಾರ ಅಗತ್ಯವಿರುವ ಮೂಲಸೌಕರ್ಯಗಳನ್ನು ಕೂಡ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.
ಇಲ್ಲಿಯವರೆಗೆ ಕರ್ನಾಟಕದಲ್ಲಿ ಖಾಸಗಿ ಕೃಷಿ ಕಾಲೇಜುಗಳು ಇರಲಿಲ್ಲ, ಆದರೆ ಈಗ ಸರ್ಕಾರ ಖಾಸಗಿ ಕೃಷಿ ಕಾಲೇಜುಗಳಿಗೆ ಅನುಮತಿ ನೀಡಲು ಪ್ರಾರಂಭಿಸಿದೆ. ಆದ್ದರಿಂದ, ಉತ್ತರ ಕರ್ನಾಟಕದ ಭಾಗದಲ್ಲಿ ರೈತರಿಗೆ ಸೇವೆ ಸಲ್ಲಿಸಲು ಮತ್ತು ಕೃಷಿಯನ್ನು ಪ್ರೋತ್ಸಾಹಿಸಲು, ನಾವು ಹೊಸ ಕೃಷಿ ಮಹಾವಿದ್ಯಾಲಯವನ್ನು ಪ್ರಾರಂಭಿಸಲು ನಿರ್ಧರಿಸಿದ್ದೇವೆ. ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಆಯ್.ಸಿ.ಎ.ಆರ್.) ಪ್ರಕಾರ ಅಗತ್ಯವಿರುವ ಮೂಲಸೌಕರ್ಯ ಮತ್ತು ಭೂಮಿಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ.
ಪ್ರಸ್ತುತವಾಗಿ ಬಿಎಲ್ ಡಿಇ ಡೀಮ್ಡ್ ವಿವಿ 5 ಮಹಾವಿದ್ಯಾಲಯಗಳನ್ನು ಹೊಂದಿದೆ.
ಪ್ರಸ್ತುತ ಈ ಮಹಾವಿದ್ಯಾಲಯಗಳು ಬಿ.ಎಲ್.ಡಿ.ಇ. ಸಂಸ್ಥೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಜೊತೆ ಸಂಯೋಜಿತಗೊಂಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಸಂಯೋಜನೆಗೆ ಒಳಪಡಲಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗ (ಯು.ಜಿ.ಸಿ.) ಯ ಅನುಮೋದನೆಯು ಪ್ರಕ್ರಿಯೆ ಹಂತದಲ್ಲಿದೆ ಎಂದು ಹೇಳಿದರು.
ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯವು ಗ್ರಾಮೀಣ ಜನರಿಗೆ ನಿಯಮಿತ ಆದಾಯ ಮತ್ತು ಉದ್ಯೋಗದ ವಿಷಯದಲ್ಲಿ ರೈತರಿಗೆ ಸಹಾಯ ಮಾಡುವ, ಪೌಷ್ಟಿಕ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಪೂರೈಸುವ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸುವ ಒಟ್ಟಾರೆ ಗ್ರಾಮೀಣ ಅಭಿವೃದ್ಧಿ ಮತ್ತು ಪೌಷ್ಟಿಕಾಂಶಕ್ಕಾಗಿ ಹೆಸರಾಂತ ಕಂಪನಿಯ ಸಹಾಯದಿಂದ ‘ಸೆಂಟರ್ ಆಫ್ ಎಕ್ಸ್‍ಲೆನ್ಸ್ ಇನ್ ಡೈರಿ ಫಾರ್ಮಿಂಗ್’ ನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಮುಂಬರುವ ವರ್ಷಗಳಲ್ಲಿ ಉತ್ತರ ಕರ್ನಾಟಕದ ಇತರ ಜಿಲ್ಲೆಗಳಾದ ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ವಿಜಯನಗರಗಳಲ್ಲಿ ನರ್ಸಿಂಗ್, ಫಾರ್ಮಸಿ, ಇಂಜಿನಿಯರಿಂಗ್ ಇತ್ಯಾದಿ ಹೊಸ ಆರೋಗ್ಯ ವಿಜ್ಞಾನ ಮತ್ತು ತಾಂತ್ರಿಕ ಕಾಲೇಜುಗಳನ್ನು ಪ್ರಾರಂಭಿಸಲು ಕೂಡ ಯೋಜನೆಯನ್ನು ರೂಪಿಸಿದೆ ಎಂದು ತಿಳಿಸಿದರು.
ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರಿಂದ ಸ್ಥಾಪಿತಗೊಂಡ ಭಾರತೀಯ ಲಿಂಗಾಯತ ಡೆವಲಪ್‍ಮೆಂಟ್ ಎಜುಕೇಶನಲ್ ಅಸೋಸಿಯೇಷನ್ 115 ವರ್ಷಗಳ ದೀರ್ಘ ಪ್ರಯಾಣದಲ್ಲಿ ಶಿಕ್ಷಣ ದಾಸೋಹಿ ಪೂಜ್ಯ ಬಂಥನಾಳ ಸಂಗನಬಸವ ಮಹಾಶಿವಯೋಗಿಗಳು, ಮುತ್ಸದ್ದಿ ನಾಯಕರಾದ ಬಿ.ಎಂ. ಪಾಟೀಲರ ದೂರದೃಷ್ಟಿಯ ಫಲ ಈ ಭಾಗದಲ್ಲಿ ಎಲ್ಲರಿಗೂ ಶಿಕ್ಷಣ ದೊರೆಯುವ ಮೂಲ ಉದ್ದೇಶದ ಜೊತೆಗೆ ಆಧುನಿಕ ಈ ವರ್ಷಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡುವತ್ತ ಸಂಸ್ಥೆ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.
ಬಿ.ಎಲ್.ಡಿ.ಇ. ಸಂಸ್ಥೆಯಲ್ಲಿ 4500 ವಿವಿಧ ಸಿಬ್ಬಂದಿ ಸಹಯೋಗದಲ್ಲಿ ವಿವಿಧ ವೈದ್ಯಕೀಯ ಶಿಕ್ಷಣ, ವಿವಿಧ ತಾಂತ್ರಿಕ ಶಿಕ್ಷಣ, ಕಲೆ ವಿಜ್ಞಾನ, ವಾಣಿಜ್ಯ, ವ್ಯವಹಾರ ಸೇರಿದಂತೆ ವಿವಿಧ ಕಾಲೇಜುಗಳ 36000 ವಿದ್ಯಾರ್ಥಿಗಳಿಗೆ ಇಡೀ ಕರ್ನಾಟಕದಲ್ಲಿಯೇ ಅತ್ಯುತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದರು.
ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯವು ಬಿ.ಎಲ್.ಡಿ.ಇ. ಸಂಸ್ಥೆಯ ಪ್ರಾಯೋಜಿತ ವಿಶ್ವವಿದ್ಯಾಲಯವಾಗಿದ್ದು, 2008 ರಲ್ಲಿ ಶ್ರೀ ಬಿ.ಎಂ. ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದೊಂದಿಗೆ ಸ್ವಾಯತ್ತ ವಿಶ್ವವಿದ್ಯಾಲಯವಾಗಿ ಸ್ಥಾಪಿಸಲಾಗಿದೆ. ವಿಶ್ವವಿದ್ಯಾಲಯವು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ) ನಿಂದ ‘ಎ’ ಗ್ರೇಡ್ ಮಾನ್ಯತೆಯನ್ನು ಪಡೆದುಕೊಂಡಿದೆ ಮತ್ತು ಆಸ್ಪತ್ರೆಯು ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ ಎನ್.ಎ.ಬಿ.ಎಚ್. ಮಾನ್ಯತೆಯನ್ನು ಪಡೆದುಕೊಂಡಿದೆ. ಒಟ್ಟು 24 ವಿಭಾಗಗಳು ಮತ್ತು 1300 ಕ್ಕೂ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಯು ಹೃದಯಶಾಸ್ತ್ರ, ಹೃದಯ ಶಸ್ತ್ರಚಿಕಿತ್ಸೆ ಮತ್ತು ಮೂತ್ರಪಿಂಡ ಕಸಿ ಮುಂತಾದ ಸೂಪರಸ್ಪೆಷಾಲಿಟಿ ಸೇವೆಗಳ ಜೊತೆಗೆ ಸಮಗ್ರ ಆರೋಗ್ಯ ಸೇವೆಗಳನ್ನು ನೀಡುತ್ತಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದ ಕ್ಯಾಂಪಸ್ ಶೀಘ್ರ ಆರಂಭ:
