ದಸರಾ ಹಬ್ಬಕ್ಕಾಗಿ ವಿಶೇಷ ರೈಲುಗಳ ಓಡಾಟ

ಸಪ್ತ ಸಾಗರ ವಾರ್ತೆ ಹುಬ್ಬಳ್ಳಿ, ಸೆ. 8:
ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಈ ಕೆಳಗಿನಂತೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್:

ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30, 2025 ರಂದು ಮಧ್ಯಾಹ್ನ 12:00ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ರಾತ್ರಿ 08:15ಕ್ಕೆ ಯಶವಂತಪುರ ತಲುಪಲಿದೆ. ಈ ರೈಲು ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲ್ಲಲಿದೆ.

ರೈಲು ಸಂಖ್ಯೆ 06277/06278 ಯಶವಂತಪುರ-ವಿಜಯಪುರ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ (1 ಟ್ರಿಪ್):

ರೈಲು ಸಂಖ್ಯೆ 06277 ಯಶವಂತಪುರ – ವಿಜಯಪುರ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30, 2025 ರಂದು ರಾತ್ರಿ 09:50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 09:30ಕ್ಕೆ ವಿಜಯಪುರ ತಲುಪಲಿದೆ. ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06278 ವಿಜಯಪುರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 1, 2025 ರಂದು ಸಂಜೆ 05:30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 06:40ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ತಲುಪಲಿದೆ.

ರೈಲು ಸಂಖ್ಯೆ 06279/06280 ಯಶವಂತಪುರ-ವಿಜಯಪುರ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ (1 ಟ್ರಿಪ್):

ರೈಲು ಸಂಖ್ಯೆ 06279 ಯಶವಂತಪುರ – ವಿಜಯಪುರ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 2, 2025 ರಂದು ಸಂಜೆ 07:40ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 07:45ಕ್ಕೆ ವಿಜಯಪುರ ತಲುಪಲಿದೆ. ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06280 ವಿಜಯಪುರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 3, 2025 ರಂದು ಸಂಜೆ 05:30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 08:10 ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ತಲುಪಲಿದೆ.
ಈ ರೈಲುಗಳು ಎರಡೂ ಮಾರ್ಗಗಳಲ್ಲಿ (ಸಂಖ್ಯೆ 06277/06278 ಮತ್ತು 06279/06280) ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಎಸ್‌ಎಂಎಂ ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.
ಎಲ್ಲಾ ರೈಲುಗಳು ಒಂದು ಪ್ರಥಮ ದರ್ಜೆ ಕಮ್ ಸೆಕೆಂಡ್ ಎಸಿ ಕೋಚ್, ಒಂದು ಎಸಿ 3-ಟೈರ್, ಎರಡು ಎಸಿ 2-ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಮತ್ತು ಎಸ್‌ಎಲ್‌ಆರ್‌ಡಿ ಬೋಗಿಗಳನ್ನು ಒಳಗೊಂಡಂತೆ ಒಟ್ಟು 21 ಬೋಗಿಗಳನ್ನು ಹೊಂದಿರುತ್ತವೆ.

Share