ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 26:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ (ಯುಗಮಾನೋತ್ಸವ) ಮಾ.1ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9:30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ಜರುಗಲಿದೆ.
ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್., ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ–2 ಹಾಗೂ ಶಾಸಕ ಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದ ರಮೇಶ ಜಿಗಜಿಣಗಿ ಹಾಗೂ ಸುಧಾ ಮೂರ್ತಿ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಎಸ್.ಕವಲಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ್, ಅಶೋಕ ಮನಗೂಳಿ, ಹನಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ, ಕೇಶವ ಪ್ರಸಾದ ಎಸ್, ಮಹಾನಗರ ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಗಂಗಾಧರ ಎಸ್ ಸಂಬಣ್ಣಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ ಅವರು ಭಾಗವಹಿಸಲಿದ್ದಾರೆ.
ಶ್ರೀ ವೇದಮೂರ್ತಿ ಶಿವಾನಂದಯ್ಯ ಶಾಸ್ತ್ರೀ ಹಿರೇಮಠ ಅವರು ವಿಶೇಷ ಉಪನ್ಯಾಸ ನೀಡಲಿದ್ದು, ದಾನಮ್ಮ ಅಲ್ದಿ ಸುಗಮ ಸಂಗೀತ ನಡೆಸಿಕೊಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
Editor
Rudrappa B Asangi
Editor
Managing Editor
Chetan Asangi
Managing Editor


