ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ವಿಜಯಪುರ ಜಿಲ್ಲಾ ಸಾಂಸ್ಕ್ರತಿಕ ವೇದಿಕೆ ವತಿಯಿಂದ ಇತ್ತೀಚೆಗೆ ನಗರದ ಕಂದಗಲ್ಲ ಹನಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ನಾಡಗೀತೆ ನೂರರ ಸಂಭ್ರಮ ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ರಾಜ್ಯ ಮಟ್ಟದ ಸಾಧಕಿ ಪ್ರಶಸ್ತಿ ಲಭಿಸಿದೆ.
ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಕಳೆದ ಮೂರು ದಶಕಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿ ಹೆಜ್ಜೆ ಗುರುತು ಮೂಡಿಸಿದ್ದಾರೆ. ಸಮಾಜಮುಖಿ ಬದುಕಿಗೆ ಮಾದರಿಯಾಗಿರುವ ಅವರ ಅನುಪಮ ಮತ್ತು ಅಮೋಘ ಸೇವೆಯನ್ನು ಪರಿಗಣಿಸಿ ಈ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ್ ಅವರು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರಿಗೆ ಶಾಲು ಹೊದಿಸಿ ಫಲಪುಷ್ಪ ಮತ್ತು ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಿದರು.
ಪ್ರಶಸ್ತಿ ಪುರಷ್ಕೃತ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರನ್ನು ಕುಲಸಚಿವ ಶಂಕರಗೌಡ ಸೋಮನಾಳ, ಕುಲಸಚಿವ ಮೌಲ್ಯಮಾಪನ ಪ್ರೊ.ಬಿ.ಎಲ್.ಲಕ್ಕಣ್ಣವರ ಮತ್ತು ವಿಶ್ವವಿದ್ಯಾನಿಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿಗೆ ರಾಜ್ಯ ಮಟ್ಟದ ಸಾಧಕಿ ಪ್ರಶಸ್ತಿ


